Advertisement

BJP: ಅಭ್ಯರ್ಥಿಯಾಗಿ ಮಂಡ್ಯದಿಂದ ಸ್ಪರ್ಧೆ: ಸುಮಲತಾ ಅಂಬರೀಶ್‌

11:25 PM Oct 11, 2023 | Team Udayavani |

ಕೆ.ಆರ್‌.ಪೇಟೆ: ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಬಗ್ಗೆ ಮೇಲ್ಮಟ್ಟದಲ್ಲಿ ಮಾತುಕತೆಯಾಗಿದ್ದರೂ ಸ್ಥಾನಗಳ ಹೊಂದಾಣಿಕೆ ಇನ್ನೂ ಅಂತಿಮವಾಗಿಲ್ಲ. ನಾನು ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕೆಂಬ ಬಯಕೆ ಹೊಂದಿದ್ದೇನೆ ಎಂದು ಹೇಳಿರುವ ಸಂಸದೆ ಸುಮಲತಾ ಅಂಬರೀಶ್‌, ಜೆಡಿಎಸ್‌-ಬಿಜೆಪಿ ಹೊಂದಾಣಿಕೆಯಿಂದ ರಾಜ್ಯದ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.

Advertisement

ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನನ್ನ ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ. ದೇಶದ ಪ್ರಧಾನಿಯಾಗಿ ಮೋ ದಿಯವರು ಮತ್ತೂಮ್ಮೆ ಅಧಿ ಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.

ಹೊಂದಾಣಿಕೆ ಸರಿಯಲ್ಲ
ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಬಿಜೆಪಿಯು ಜೆಡಿಎಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ಕ್ರಮ ಸರಿಯಲ್ಲ ಎಂದು ಮಾಜಿ ಸಚಿವ ನಾರಾಯಣಗೌಡ ಇದೇ ಸಂದರ್ಭ ತಿಳಿಸಿದರು.

ಮಂಡ್ಯ ಕ್ಷೇತ್ರದಲ್ಲಿ ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಅವರಿಗೆ ಬಿಜೆಪಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಬೇಕು. ಇಲ್ಲಿ ಜೆಡಿಎಸ್‌ ಅಭ್ಯರ್ಥಿ ಸ್ಪರ್ಧೆ ಮಾಡಲು ಯಾವುದೇ ಕಾರಣಕ್ಕೂ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳಬಾರದು. ಜೆಡಿಎಸ್‌ ಜತೆ ಹೊಂದಾಣಿಕೆ ಮಾಡಿಕೊಂಡಿರುವ ತೀರ್ಮಾನವನ್ನು ಪರಿಶೀಲನೆ ಮಾಡಬೇಕು ಎಂದು ಮನವಿ ಮಾಡಿದರು.

ಕಾವೇರಿ ನ್ಯಾಯಾ ಧೀಕರಣದ ತೀರ್ಪು ಸಂಬಂಧ ಪ್ರಧಾನಿ ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ. ಕಾವೇರಿ ವಿವಾದವನ್ನು ಸೌಹಾರ್ದಯುತ ಮಾತುಕತೆಯಿಂದ ಬಗೆಹರಿಸಿಕೊಳ್ಳಲು ಸಾಧ್ಯವಿದೆ. ರಾಜ್ಯ ಸರಕಾರವು ಸುಪ್ರೀ ಕೋರ್ಟ್‌ ಹಾಗೂ ಕಾವೇರಿ ನ್ಯಾಯಾ ಧೀಕರಣ ಮುಂದೆ ಸಮರ್ಥ ವಾದ ಮಂಡಿಸಲು ವಿಫಲವಾಗಿದೆ. ಆದ್ದರಿಂದ ನಮಗೆ ವಿರುದ್ಧವಾಗಿ ತೀರ್ಪು ಬರುತ್ತಿದೆ.
-ಸುಮಲತಾ ಅಂಬರೀಶ್‌, ಸಂಸದೆ

Advertisement

 

Advertisement

Udayavani is now on Telegram. Click here to join our channel and stay updated with the latest news.

Next