Advertisement
ಪಟ್ಟಣದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಕ್ಷೇತ್ರ ಅಭಿವೃದ್ಧಿಯಾಗಿಲ್ಲ, ಶ್ರೀರಾಮುಲು ಕ್ಷೇತ್ರ ಬಿಟ್ಟು ಪಲಾಯನ ಮಾಡುತ್ತಾರೆ ಎಂದು ಕ್ಷೇತ್ರದಲ್ಲಿನ ಕೆಲವರು ಟೀಕಿಸುತ್ತಿದ್ದಾರೆ. ಆದರೆ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಪರ ಕಾರ್ಯಗಳನ್ನು ಜನರ ಮುಂದಿಡುತ್ತೇನೆ. ಇದರ ಆಧಾರದ ಮೇಲೆ ಮುಂದಿನ ಚುನಾವಣೆಯಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ತಾಕತ್ತು, ಗಂಡಸ್ತನ ಮುಂತಾದ ಪದಗಳನ್ನು ಬಳಕೆ ಮಾಡುವ ಕೆಟ್ಟ ಸಂಸ್ಕೃತಿ ನನ್ನದಲ್ಲ ಎಂದರು.
Related Articles
Advertisement
ತುಂಗಭದ್ರಾ ಹಿನ್ನೀರಿನಿಂದ ಕುಡಿಯುವ ನೀರು ಪೂರೈಕೆ ಕಾಮಗಾರಿ ಅಂತಿಮ ಹಂತದಲ್ಲಿದೆ. ಈ ಎರಡು ಪ್ರಮುಖ ಕಾಮಗಾರಿಗಳನ್ನು ವೇಗವಾಗಿ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ಮಾಡಲಾಗಿದೆ. ಬಿಜೆಪಿಯ ಇಚ್ಛಾಶಕ್ತಿಯಿಂದ ವಿವಿ ಸಾಗರಕ್ಕೆ ನೀರು ಹರಿಸಲಾಗಿದೆ. ಇದರಿಂದ ಹಿರಿಯೂರು, ಚಳ್ಳಕೆರೆ ತಾಲೂಕುಗಳ ಕೃಷಿ ಕ್ಷೇತ್ರಕ್ಕೆ ಹೊಸ ಜೀವ ಬಂದಿದೆ. ಚಳ್ಳಕೆರೆ ತಾಲೂಕಿನ 2 ಲಕ್ಷ ಕೊಳವೆಬಾವಿಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಿದೆ ಎಂದರು.
ತಹಶೀಲ್ದಾರ್ ಎನ್. ರಘುಮೂರ್ತಿ, ಬಿಜೆಪಿ ಜಿಲ್ಲಾಧ್ಯಕ್ಷ ಎ. ಮುರಳಿ, ಮಂಡಲ ಅಧ್ಯಕ್ಷರಾದ ಇ. ರಾಮ ರೆಡ್ಡಿ, ಡಾ| ಪಿ.ಎಂ. ಮಂಜುನಾಥ್, ಜಿಪಂ ಸದಸ್ಯ ಒ. ಮಂಜುನಾಥ್, ಸಿ.ಬಿ. ಮೋಹನ್, ತಿಪ್ಪೇಸ್ವಾಮಿ, ಜಯಪಾಲಯ್ಯ, ಪಿ. ಶಿವಣ್ಣ, ಎನ್. ಮಹಾಂತಣ್ಣ ಮೊದಲಾದವರು ಭಾಗವಹಿಸಿದ್ದರು.
ಪ್ರತಿಭಟನೆಗೆ ಸಜ್ಜಾಗಿದ್ದ ಮಹಿಳೆಯರು ಪೊಲೀಸ್ ವಶಕ್ಕೆ
ಸಚಿವ ಬಿ. ಶ್ರೀರಾಮುಲು ಅವರ ಬಹಿರಂಗ ಸಭೆಗೂ ಮುನ್ನ ಪೊಲೀಸರು 60ಕ್ಕೂ ಹೆಚ್ಚು ಮಹಿಳೆಯರನ್ನು ವಶಕ್ಕೆ ತೆಗೆದುಕೊಂಡರು. ತ್ರಿವೇಣಿ ಭೂಷಣ್ ಸೇರಿದಂತೆ 60ಕ್ಕೂ ಹೆಚ್ಚು ಮಹಿಳೆಯರು ಶ್ರೀರಾಮುಲು ವಿರುದ್ಧ ಪ್ರತಿಭಟನೆಗೆ ಸಜ್ಜಾಗಿದ್ದರು. ಇದನ್ನು ಅರಿತ ಪೊಲೀಸರು ಪ್ರಮುಖ ರಸ್ತೆಯಲ್ಲಿ ಓಡಾಡುತ್ತಿದ್ದ ಮಹಿಳೆಯರನ್ನು ವಶಕ್ಕೆ ಪಡೆದು ಅವರನ್ನು ಅವರ ಗ್ರಾಮಗಳಿಗೆ ವಾಪಾಸ್ ಕಳುಹಿಸಿಕೊಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ತ್ರಿವೇಣಿ, ಸಚಿವ ಬಿ. ಶ್ರೀರಾಮುಲು ನಮ್ಮ ವಾಕ್ ಸ್ವಾತಂತ್ರ್ಯವನ್ನು ಕಿತ್ತುಕೊಂಡಿದ್ದಾರೆ. ನೇರವಾಗಿ ಎದುರಿಸಲಾರದೆ ಪೊಲೀಸರನ್ನು ಬಳಸಿದ್ದಾರೆ. ಕ್ಷೇತ್ರದಲ್ಲಿ ಮಹಿಳಾ ಸಂಘಗಳಗೆ ಅನ್ಯಾಯವಾಗಿದೆ. ಸಮರ್ಪಕವಾಗಿ ಅನುದಾನ ದೊರೆತಿಲ್ಲ ಎಂದು ಆರೋಪಿಸಿದರು.
ಭ್ರಷ್ಟಾಚಾರ ಸಹಿಸಲಾಗದು
ಮೊಳಕಾಲ್ಮೂರು ಕ್ಷೇತ್ರದಲ್ಲಿ ಎಸ್‌ಟಿ ನಿಗಮದಿಂದ ನೇರ ಸಾಲ ನೀಡಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ದೂರಲಾಗಿದೆ. ನಮ್ಮ ಸರ್ಕಾರ ಭ್ರಷ್ಟಾಚಾರವನ್ನು ಎಂದಿಗೂ ಸಹಿಸುವುದಿಲ್ಲ. ಕ್ಷೇತ್ರದಲ್ಲಿ ಉಂಟಾದ ಸಮಸ್ಯೆಗೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ವರ್ಗಾವಣೆ ಹಾಗೂ ಅಮಾನತು ಮಾಡಲಾಗಿದೆ. ಮಹಿಳೆಯೊಬ್ಬರು ಸಂಘ- ಸಂಸ್ಥೆಗಳಿಗೆ ವೈಯಕ್ತಿಕ ಸಾಲ ನೀಡುವಂತೆ ಒತ್ತಾಯಿಸಿದ್ದರು. ಆದರೆ ಇದು ಸಾಧ್ಯವಿಲ್ಲ. ಇಂಥವರು ಕ್ಷೇತ್ರದಲ್ಲಿ ಅನಾವಶ್ಯಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆ ಎಂದು ಸಚಿವ ಬಿ. ಶ್ರೀರಾಮುಲು ಆರೋಪಿಸಿದರು.