Advertisement
ಪಟ್ಟಣದಲ್ಲಿ ಭಾನುವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಂದಿನ ಚುನಾವಣೆಗೆ ಹುಣಸೂರಿನಲ್ಲಿಸ್ಪರ್ಧೆ ಮಾಡುತ್ತಾರೆ ಎನ್ನುವ ಮಾತು ಸತ್ಯಕ್ಕೆ ದೂರ. ಅಲ್ಲಿಗೆ ನಾನು ಏತಕ್ಕೆಹೋಗಲಿ. ಈ ಕ್ಷೇತ್ರದಲ್ಲೇ ಇರುತ್ತೇನೆ ಎಂದರು.
Related Articles
Advertisement
ಅಭಿವೃದ್ಧಿಗೆ ಶ್ರಮಿಸುವೆ: ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರಇರುವುದರಿಂದ ಸಮನ್ವಯತೆ ಸಾಧ್ಯವಾಗುತ್ತಿದೆ. ಅಭಿವೃದ್ಧಿ ಕಾರ್ಯಗಳೆಲ್ಲವೂಸುಲಲಿತವಾಗಿ ನಡೆಯುತ್ತಿವೆ. ರಾಜ್ಯದಸಂಸದರೂ ಅಭಿವೃದ್ಧಿಗೆ ಸಾಥ್ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿಸಮಗ್ರ ಅಭಿವೃದ್ಧಿಗೆ ಮತ್ತಷ್ಟುಪರಿಣಾಮಕಾರಿಯಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲುವಾಡಿ ದೇವರಾಜು, ತಾಪಂ ಅಧ್ಯಕ ರಾಜಣ್ಣ,ಮುಖಂಡರಾದ ಮಲವೇಗೌಡ, ಕೃಷ್ಣಪ್ಪ,ವಿ.ಬಿ.ಚಂದ್ರು, ವಕೀಲ ಎಂ.ಕೆ.ನಿಂಗಪ್ಪ,ಅಕ್ಕೂರು ಗ್ರಾಪಂ ಅಧ್ಯಕ ಅಶೋಕ್,ಜೆ.ಬ್ಯಾಡರಹಳ್ಳಿ ಗ್ರಾಪಂ ಅಧ್ಯಕ್ಷ ರಾಮಚಂದ್ರ ಮತ್ತಿತರಿದ್ದರು.
ವಿದ್ಯುತ್ ಚಾಲಿತ ವಾಹನದಿಂದ ತೈಲ ದರ ಇಳಿಕೆ :
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಪೆಟ್ರೋಲ್, ಡೀಸೆಲ್ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆ ಬದಲಾವಣೆಯ ಮೇಲೆ ನಿಂತಿದೆ. ದೇಶದಲ್ಲಿ ವಿದ್ಯುತ್ ಸ್ವಾವಲಂಬನೆ ಸಾಧಿಸಿದೆ. ವಿದ್ಯುತ್ ಚಾಲಿತ ವಾಹನಗಳ ಹೆಚ್ಚು ಬಳಕೆಗೆ ಪ್ರಾಶಸ್ತ್ಯ ನೀಡಲಾಗುತ್ತಿದೆ. ಜನತೆ ವಿದ್ಯುತ್ ಚಾಲಿತ ವಾಹನ ಬಳಕೆ ಮಾಡಿದರೆ ಪೆಟ್ರೋಲ್ ಬೆಲೆ ತಾನೇ ಇಳಿಕೆಯಾಗುತ್ತದೆ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು.