Advertisement

Shobha Karandlaje: ಉಡುಪಿ-ಚಿಕ್ಕಮಗಳೂರಿನಿಂದಲೇ ಸ್ಪರ್ಧೆ- ಸಚಿವೆ ಶೋಭಾ ಸ್ಪಷ್ಟನೆ

11:35 PM Jan 24, 2024 | Pranav MS |

ತುಮಕೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಯುತ್ತೇನೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಸ್ಪಷ್ಟಪಡಿಸಿದರು.

Advertisement

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಅಥವಾ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬುದೆಲ್ಲ ಊಹಾಪೋಹಗಳಷ್ಟೇ. ಇಲ್ಲಿಂದ ಸ್ಪರ್ಧಿಸುವ ಬಗ್ಗೆ ಯೋಚನೆಯನ್ನೇ ಮಾಡಿಲ್ಲ. ನಾನು ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next