Advertisement

ವರುಣಾದಲ್ಲಿ ಅವಕಾಶ ನೀಡಿದರೆ ಸ್ಪರ್ಧೆ

06:45 AM Mar 31, 2018 | |

ತುಮಕೂರು: ವರುಣಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಅಭಿವೃದ್ಧಿ ಕಾರ್ಯಗಳನ್ನುಕೈಗೊಂಡಿಲ್ಲ. ಕ್ಷೇತ್ರವನ್ನು ಅಭಿವೃದ್ಧಿಪಡಿಸುವಲ್ಲಿ ಸಂಪೂರ್ಣವಾಗಿ ವಿಫ‌ಲರಾಗಿದ್ದಾರೆ. ಅಲ್ಲಿಯ ಕಾರ್ಯಕರ್ತರು, ಮತದಾರರು ವರುಣಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ.

Advertisement

ಪಕ್ಷದ ವರಿಷ್ಠರು ಸ್ಪರ್ಧಿಸಲು ಅವಕಾಶ ನೀಡಿದರೆ ನಾನು ಸ್ಪರ್ಧಿಸಲು ಸಿದ್ದ ಎಂದು ಬಿಎಸ್‌ವೈ ಪುತ್ರ ಬಿ.ವೈ.ವಿಜಯೇಂದ್ರ ತಿಳಿಸಿದರು.

ಸಿದ್ದಗಂಗಾ ಮಠಕ್ಕೆ ಶುಕ್ರವಾರ ಭೇಟಿ ನೀಡಿ ಕರ್ನಾಟಕ ರತ್ನ ಡಾ.ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದ ಪಡೆದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸಿದ್ದರಾಮಯ್ಯನವರನ್ನು ಸೋಲಿಸಲು ಬಿಜೆಪಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡಿಲ್ಲ. ಎಲ್ಲ ಕ್ಷೇತ್ರದಲ್ಲಿಯೂ ಹಿಂದುಳಿದ ವರ್ಗಗಳ ಬೆಂಬಲ ಯಡಿಯೂರಪ್ಪನವರಿಗೆ ಇದೆ. ವರುಣಾ ಕ್ಷೇತ್ರದಲ್ಲಿ ಈ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೋಲು ಖಚಿತ ಎಂದು ಭವಿಷ್ಯ ನುಡಿದರು.

Advertisement

Udayavani is now on Telegram. Click here to join our channel and stay updated with the latest news.

Next