Advertisement
ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಪ್ರಾರಂಭವಾಗಿದೆ. ದೇಶದೆಲ್ಲೆಡೆ ಜನತೆ ಕಾಂಗ್ರೆಸ್ ಮೇಲಿನ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ ಎಂದು ತಿಳಿಸಿದರು.
Related Articles
Advertisement
ಗುತ್ತಿಗೆದಾರ ಸಂತೋಷ ಪಾಟೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕೆ.ಎಸ್.ಈಶ್ವರಪ್ಪ ಪರವಾಗಿ ಬಿಜೆಪಿ ಪಕ್ಷ ನಿಲ್ಲಲಿದೆ ಎಂದು ತಿಳಿಸಿದರು.
ಮಾಜಿ ಸಚಿವ ಈಶ್ವರಪ್ಪ ನಮ್ಮ ಪಕ್ಷದ ಹಿರಿಯ ನಾಯಕರು. ರಾಜ್ಯ ದಲ್ಲಿ ಬಿಜೆಪಿ ಪಕ್ಷ ಈ ಹಂತಕ್ಕೆ ಬರಲು ಈಶ್ವರಪ್ಪ ಅವರ ಕೊಡುಗೆಯೂ ದೊಡ್ಡದಿದೆ. ಶೀಘ್ರದಲ್ಲೇ ಅವರು ಆರೋಪ ಮುಕ್ತರಾಗುವ ವಿಶ್ವಾಸ ವಿದೆ. ಆ ಬಳಿಕ ಅವರು ಪುನಃ ಸಚಿವರಾಗುತ್ತಾರೆ ಎಂದು ಹೇಳಿದರು.
ಸಂತೋಷ ಪಾಟೀಲ್ ಪ್ರಕರಣದಲ್ಲಿ ಈಶ್ವರಪ್ಪರನ್ನು ಸಿಲುಕಿಸಲು ಷಡ್ಯಂತ್ರ ನಡೆದಿದೆ. ಸದ್ಯ ಪ್ರಕರಣದ ತನಿಖೆ ನಡೆಯುತ್ತಿದೆ. ಆ ಬಳಿಕ ಸತ್ಯ ಹೊರಬರಲಿದೆ. ಈಶ್ವರಪ್ಪ ತಳಮಟ್ಟದಿಂದ ಬಿಜೆಪಿಯನ್ನು ಕಟ್ಟಿದ್ದಾರೆ. ನಮ್ಮ ಪಕ್ಷ ಅವರೊಂದಿಗಿದೆ. ಪ್ರಕರಣದಲ್ಲಿ ಕಾಂಗ್ರೆಸ್ ಷಡ್ಯಂತ್ರವಿದ್ದು ಅದು ತನಿಖೆಯಿಂದ ಬಹಿರಂಗವಾಗಲಿದೆ ಎಂದು ಹೇಳಿದರು.
ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರು ಭಾನುವಾರ ಕಾರ್ಯಕಾರಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಗೆಲುವಿನ ಮೂಲ ಮಂತ್ರ ವನ್ನು ತಿಳಿಸಿ ಕಾರ್ಯಕರ್ತರ ಉತ್ಸಾಹವನ್ನು ಹೆಚ್ಚಿಸಲಿದ್ದಾರೆ ಎಂದು ತಿಳಿಸಿದರು.
ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ 150 ಕ್ಷೇತ್ರಗಳಲ್ಲಿ ಗೆಲ್ಲುವ ಕುರಿತು ಕಾರ್ಯಕಾರಿಣಿಯಲ್ಲಿ ಚರ್ಚಿಸಲಾಗಿದೆ. ನಮ್ಮೆಲ್ಲರ ಗುರಿ. ಪಕ್ಷವನ್ನು ಮತ್ತೂಮ್ಮೆ ಆಧಿಕಾರಕ್ಕೆ ತರುವುದಾಗಿದೆ. ಈ ಎರಡು ದಿನಗಳ ಕಾರ್ಯಕಾರಿಣಿಯನ್ನು ಸಚಿವ ಆನಂದ್ ಸಿಂಗ್ ಅವರು ಅಚ್ಚುಕಟ್ಟಾಗಿ ಆಯೋಜನೆ ಮಾಡಿದ್ದಾರೆ. ●ಬಿ.ಎಸ್. ಯಡಿಯೂರಪ್ಪ, ಮಾಜಿ ಸಿಎಂ
ಕಾಂಗ್ರೆಸ್‌ಗೆ ಮರ್ಮಾಘಾತ ನೀಡುವ ಅನೇಕ ಸಂಗತಿಗಳು ಬಿಜೆಪಿಗೆ ಲಭಿಸಿವೆ. ಅದನ್ನು ಚುನಾವಣಾ ರಾಜಕೀಯ ತಂತ್ರಗಾರಿಕೆ ರೂಪದಲ್ಲಿ ಅವರಿಗೆ ಪ್ರತಿರೋಧ ಒಡ್ಡಲು ಕಾರ್ಯಕರ್ತರು ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ● ಸಿ.ಟಿ.ರವಿ ಬಿಜೆಪಿ ರಾಷ್ಟ್ರೀಯ ಪ್ರ.ಕಾರ್ಯದರ್ಶಿ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಭಿವೃದ್ಧಿ ಹೆಸರಿನಲ್ಲೇ ಚುನಾವಣೆ ಎದುರಿಸುತ್ತೇವೆ. ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳ ಅಭಿವೃದ್ಧಿ ಕಾಮಗಾರಿಗಳನ್ನು ನಮ್ಮ ಕಾರ್ಯಕರ್ತರು ಜನರ ಮುಂದಿಡಬೇಕು. ●ನಳೀನ್‌ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷ