Advertisement
ಈ ಬಗ್ಗೆ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಸಿದ್ದರಾಮಯ್ಯ, ಮುಡಾ ಪ್ರಕರಣ ಬಗ್ಗೆ ದಿಲ್ಲಿಯಲ್ಲಿ ಕಾಂಗ್ರೆಸ್ ವರಿಷ್ಠರಿಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಜತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಹಾಗೂ ವಿಪಕ್ಷಗಳ ನಡೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಗಮನಕ್ಕೆ ತರಲಾಗಿದೆ ಎಂದರು. ರಾಜ್ಯಪಾಲರ ನಡೆಯ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡುವ ಬಗ್ಗೆ ದಿಲ್ಲಿಯಲ್ಲಿ ಚರ್ಚೆಯಾಗಿದೆಯಾ? ಕೈ ವರಿಷ್ಠರು ಒಪ್ಪಿಗೆ ನೀಡಿದ್ದಾರಾ? ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಈ ಬಗ್ಗೆ ಎಲ್ಲ ಸಾಧ್ಯತೆಗಳಿಗೂ ಅವಕಾಶವಿದೆ ಎಂದರು.
ಸರಕಾರ ಸಲ್ಲಿಸಿದ ಮಸೂದೆಗಳನ್ನು ರಾಜ್ಯಪಾಲರು ವಾಪಸು ಕಳುಹಿಸಿದ್ದು ರಾಜಭವನ ಮತ್ತು ಸರಕಾರದ
ನಡುವೆ ಸಂಘರ್ಷ ಪ್ರಾರಂಭವಾಗಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, 6 ಮಸೂದೆಗಳನ್ನು ವಾಪಸ್ ಕಳುಹಿಸಲಾಗಿದೆ. ರಾಜ್ಯಪಾಲರಿಗೆ ಸಲ್ಲಿಸಿದ್ದ ಮಸೂದೆಗಳು, ವಿಧಾನಸಭೆ ಹಾಗೂ ವಿಧಾನಪರಿಷತ್ತಿನಲ್ಲಿ ಅಂಗೀಕೃತಗೊಂಡಿದ್ದರಿಂದ ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.