Advertisement

Governor ವಿರುದ್ಧ ರಾಷ್ಟ್ರಪತಿಗೆ ದೂರು ನೀಡಲು ಅವಕಾಶವಿದೆ: ಸಿದ್ದರಾಮಯ್ಯ

12:44 AM Aug 25, 2024 | Team Udayavani |

ಬೆಂಗಳೂರು: ರಾಜ್ಯಪಾಲರ ಕಾರ್ಯವೈಖರಿ ವಿರುದ್ಧ ರಾಷ್ಟ್ರತಿಗಳಿಗೆ ದೂರು ನೀಡುವ ಕುರಿತಂತೆ ಕಾಂಗ್ರೆಸ್‌ ಆಂತರಿಕ ವಲಯದಲ್ಲಿ ಚರ್ಚೆ ಆರಂಭವಾಗಿರುವ ಬೆನ್ನಲ್ಲೇ ಇದಕ್ಕೆ ಪುಷ್ಟಿ ನೀಡುವ ರೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Advertisement

ಈ ಬಗ್ಗೆ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಸಿದ್ದರಾಮಯ್ಯ, ಮುಡಾ ಪ್ರಕರಣ ಬಗ್ಗೆ ದಿಲ್ಲಿಯಲ್ಲಿ ಕಾಂಗ್ರೆಸ್‌ ವರಿಷ್ಠರಿಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಜತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಹಾಗೂ ವಿಪಕ್ಷಗಳ ನಡೆ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಗಮನಕ್ಕೆ ತರಲಾಗಿದೆ ಎಂದರು. ರಾಜ್ಯಪಾಲರ ನಡೆಯ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡುವ ಬಗ್ಗೆ ದಿಲ್ಲಿಯಲ್ಲಿ ಚರ್ಚೆಯಾಗಿದೆಯಾ? ಕೈ ವರಿಷ್ಠರು ಒಪ್ಪಿಗೆ ನೀಡಿದ್ದಾರಾ? ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಈ ಬಗ್ಗೆ ಎಲ್ಲ ಸಾಧ್ಯತೆಗಳಿಗೂ ಅವಕಾಶವಿದೆ ಎಂದರು.

ಉಪಮುಖ್ಯಮಂತ್ರಿಗಳು, ಗೃಹಸಚಿವರು ಸೇರಿದಂತೆ ಕೆಲವು ಸಚಿವರೊಂದಿಗೆ ದಿಲ್ಲಿಗೆ ತೆರಳಲಾಗಿತ್ತು. ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರಿಗೆ ವಿವರಿಸಲಾಗಿದೆ. ವಿಪಕ್ಷಗಳು ಮುಡಾ ಪ್ರಕರಣಕ್ಕೆ ಪಾದಯಾತ್ರೆ ಮಾಡಿದ್ದು ಅದನ್ನು ರಾಜಕೀಯವಾಗಿ ಎದುರಿಸುವ ಬಗ್ಗೆ ಚರ್ಚಿಸಲಾಗಿದೆ. ರಾಜ್ಯಪಾಲರು ಕೊಟ್ಟಿರುವ ಅನುಮತಿ ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರವಾಗಿದೆ ಎಂದು ತಿಳಿಸಿ ರಾಜ್ಯಪಾಲರ ನಿರ್ಣಯವನ್ನು ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು ವಿಚಾರಣೆ ಆ. 29ಕ್ಕೆ ಮುಂದೂಡಿದೆ. ಸಚಿವ ಸಂಪುಟದಲ್ಲಿಯೂ ಅವರ ನಿರ್ಣಯವನ್ನು ಸ್ಪಷ್ಟವಾಗಿ ಖಂಡಿಸಿರುವ ಬಗ್ಗೆ ಪಕ್ಷದ ವರಿಷ್ಠರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.

ವಾಪಸ್‌ ಕಳುಹಿಸಿರುವ ಮಸೂದೆ ಬಗ್ಗೆ ಸಂಪುಟದಲ್ಲಿ ಚರ್ಚೆ
ಸರಕಾರ ಸಲ್ಲಿಸಿದ ಮಸೂದೆಗಳನ್ನು ರಾಜ್ಯಪಾಲರು ವಾಪಸು ಕಳುಹಿಸಿದ್ದು ರಾಜಭವನ ಮತ್ತು ಸರಕಾರದ
ನಡುವೆ ಸಂಘರ್ಷ ಪ್ರಾರಂಭವಾಗಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, 6 ಮಸೂದೆಗಳನ್ನು ವಾಪಸ್‌ ಕಳುಹಿಸಲಾಗಿದೆ. ರಾಜ್ಯಪಾಲರಿಗೆ ಸಲ್ಲಿಸಿದ್ದ ಮಸೂದೆಗಳು, ವಿಧಾನಸಭೆ ಹಾಗೂ ವಿಧಾನಪರಿಷತ್ತಿನಲ್ಲಿ ಅಂಗೀಕೃತಗೊಂಡಿದ್ದರಿಂದ ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next