Advertisement

ಬಿಎಸ್‌ವೈ ವಿರುದ್ಧ ಎಸಿಬಿಗೆ ದೂರು

06:10 AM Feb 12, 2019 | Team Udayavani |

ದಾವಣಗೆರೆ: ಶಾಸಕರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಹಣದ ಆಮಿಷ ತೋರಿಸಿ, ಭ್ರಷ್ಟಾಚಾರಕ್ಕೆ ಪ್ರಚೋದನೆ ನೀಡಿರುವ ವಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಯುವ ಕಾಂಗ್ರೆಸ್‌ ಹಾಗೂ ಎನ್‌ಎಸ್‌ಯುಐ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿವೆ.

Advertisement

ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅನ್ಯ ಪಕ್ಷದ ಶಾಸಕರನ್ನು ತಮ್ಮ ಪಕ್ಷಕ್ಕೆ ಸೆಳೆಯಲು ಹಣ, ಅಧಿಕಾರದ ಆಮಿಷ ಒಡ್ಡುವ ಮೂಲಕ ಭ್ರಷ್ಟಾಚಾರಕ್ಕೆ ಪ್ರೇರೆಪಿಸುತ್ತಿದ್ದಾರೆ. ತಕ್ಷಣ ಅವರನ್ನು ಬಂಧಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಯುವ ಕಾಂಗ್ರೆಸ್‌ ಹಾಗೂ ಎನ್‌ಎಸ್‌ಯುಐನ ಜಿಲ್ಲಾ ಘಟಕದ ಪದಾಧಿಕಾರಿಗಳು ಎಸಿಬಿ ಠಾಣೆ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಯುವ ಕಾಂಗ್ರೆಸ್‌ ಜಿಲ್ಲಾ ಉಪಾಧ್ಯಕ್ಷರಾದ ಕೆ.ಎಸ್‌. ಹರೀಶ್‌, ಎಲ್‌.ಎಚ್. ಸಾಗರ್‌, ಪ್ರಧಾನ ಕಾರ್ಯದರ್ಶಿ ಪ್ರಮೋದ್‌, ಕೆ.ವಿ. ಜಾವಿದ್‌, ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಆಲಿ ರಹಮತ್‌ ಪೈಲ್ವಾನ್‌, ಚಂದ್ರು, ವಿನಯ್‌ ಜೋಗಪ್ಪ ಇತರರು ದೂರು ಸಲ್ಲಿಸಿದ ಸಂದರ್ಭದಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next