Advertisement
ಸಾಮಾಜಿಕ ಕಾರ್ಯಕರ್ತ ಎನ್.ಹನುಮೇಗೌಡ ಮತ್ತು ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಎಸಿಬಿಗೆ ದೂರು ನೀಡಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ರಾಜೀನಾಮೆ ನೀಡಿ ಬಂದರೆ ಹಣ ಮತ್ತು ಸಚಿವ ಸ್ಥಾನ ನೀಡುವುದಾಗಿ ಯಡಿಯೂರಪ್ಪ ಆಮಿಷವೊಡ್ಡಿದ್ದಾರೆ.
Related Articles
Advertisement
ಈ ಸಂಬಂಧ ಶಾಸಕರಾದ ಅಶ್ವತ್ಥನಾರಾಯಣ, ವಿಶ್ವನಾಥ್, ಮಾಜಿ ಸಚಿವ ಸಿ.ಪಿ.ಯೋಗೇಶ್ವರ ಹಾಗೂ ಹಣ ಪಡೆದ ಶ್ರೀನಿವಾಸಗೌಡ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಕೋರಿದ್ದಾರೆ.
ಬಂಧಿಸಿ, ವಿಚಾರಣೆಗೆ ಒಳಪಡಿಸಿ: ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ಹಣ ಹಾಗೂ ಅಧಿಕಾರದ ಆಮಿಷವೊಡ್ಡುವ ಮೂಲಕ ವ್ಯಾಪಕ ಭ್ರಷ್ಟಾಚಾರ ಎಸಗಿದ್ದಾರೆ. ಜತೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೋ ಸಿಡಿಯಲ್ಲಿರುವುದು ತಮ್ಮದೆ ಧ್ವನಿ ಎಂದು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರನ್ನು ಬಂಧಿಸಿ, ವಿಚಾರಣೆಗೊಳಪಡಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಎನ್.ಹನುಮೇಗೌಡ ಎಸಿಬಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.