Advertisement

ಮುಖ್ಯಮಂತ್ರಿ ವಿರುದ್ಧ ಚು.ಆಯೋಗಕ್ಕೆ ದೂರು

06:25 AM Mar 31, 2018 | Team Udayavani |

ಬೆಂಗಳೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಗುರುವಾರ ಪ್ರಚಾರದ ವೇಳೆ ಆರತಿ ಬೆಳಗಿ ಸ್ವಾಗತಿಸಿದ ಮಹಿಳೆಯರು ಹಾಗೂ ಅರ್ಚಕರಿಗೆ ತಲಾ 2000 ರೂ. ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀತಿ ಸಂಹಿತೆ ಉಲ್ಲಂಘಿಸಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ಶುಕ್ರವಾರ ದೂರು ನೀಡಿದೆ. 

Advertisement

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ್‌ ನೇತೃತ್ವದ ನಿಯೋಗ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದು, ಗುರುವಾರ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ಮುಖ್ಯಮಂತ್ರಿಗಳು ತಮಗೆ ಆರತಿ ಬೆಳಗಿ ಸ್ವಾಗತಿಸಿದ ಇಬ್ಬರು ಮಹಿಳೆಯರಿಗೆ ತಲಾ 2000 ರೂ.ನೀಡಿದ್ದಾರೆ.

ಹಾಗೆಯೇ ಪ್ರತಿ ಗ್ರಾಮಗಳಲ್ಲಿನ ದೇವಾಲಯಗಳಿಗೆ ಭೇಟಿ ನೀಡಿದಾಗ ಪೂಜೆ ನೆರವೇರಿಸಿದ ಅರ್ಚಕರಿಗೂ 2000 ರೂ.ನೀಡಿದ್ದಾರೆಂದು ಆರೋಪಿಸಿದ್ದಾರೆ. ಇದು ಪ್ರಜಾಪ್ರತಿನಿಧಿ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್‌ 171ರ ಅಡಿ ಲಂಚ ನೀಡಿದಂತಾಗಿದ್ದು, ಮಾಧ್ಯಮಗಳಲ್ಲಿ ಪ್ರಸಾರವಾದರೂ ಈವರೆಗೆ ಕ್ರಮ ಕೈಗೊಂಡಿಲ್ಲ. ಕೂಡಲೇ ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಕೋರಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಕಾರ್ಯಾಲಯ ಕಾರ್ಯದರ್ಶಿ ಸಿ.ಟಿ.ಸುರೇಶ್‌, ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣದ ಸಹ ಸಂಚಾಲಕ ಸಿದ್ದು ಪುಂಡಿಕಾಳ, ಪ್ರಶಾಂತ್‌ ಮಾಕನೂರ, ಪ್ರದೀಪ್‌ ಕಾಡಾದೆ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next