Advertisement

ಸಿಎಂ, ದಿನೇಶ್‌ ವಿರುದ್ಧ ಬಿಜೆಪಿ ದೂರು

07:25 AM Jan 13, 2018 | Team Udayavani |

ಬೆಂಗಳೂರು: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಗಳು ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ವಿರುದ್ಧ ರಾಜ್ಯ ಬಿಜೆಪಿ ಪೊಲೀಸ್‌ ದೂರು ದಾಖಲಿಸಿದೆ.

Advertisement

ಬಿಜೆಪಿ ರಾಜ್ಯ ವಕ್ತಾರರೂ ಆಗಿರುವ ಶಾಸಕ ಎಸ್‌.ಸುರೇಶ್‌ ಕುಮಾರ್‌ ನೇತೃತ್ವದ ಬಿಜೆಪಿ ನಿಯೋಗ ಶುಕ್ರವಾರ ಬೆಂಗಳೂರು ಪೊಲೀಸ್‌ ಆಯುಕ್ತರನ್ನು ಭೇಟಿಯಾಗಿ ದೂರು ಸಲ್ಲಿಸಿದ್ದು, ಅವರಿಬ್ಬರ ವಿರುದ್ಧ ಮಾನಹಾನಿ ಮತ್ತು ಕ್ರಿಮಿನಲ್‌ ಪ್ರಕರಣಗಳನ್ನು ದಾಖಲಿಸುವಂತೆ ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next