ವಿಟ್ಲ : ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಪಿ. ಅಬ್ದುಲ್ ರಹಿಮಾನ್ ಅವರು ಮಹಿಳೆಯೊಬ್ಬರ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನಿಸಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ಯಾನ ಗ್ರಾಮದ ನಿವಾಸಿ ಮಹಿಳೆಯ ಮನೆಗೆ ಕನ್ಯಾನ ಪಂಚಾಯತ್ ಪಿಡಿಒ ಮತ್ತು ಸಿಬಂದಿ ಆಗಮಿಸಿ, ನೀರಿನ ಸಂಪರ್ಕ ಕಡಿತಗೊಳಿಸುವ ಬಗ್ಗೆ ಅಧ್ಯಕ್ಷರು ತಿಳಿಸಿದ್ದಾರೆ ಎಂದರು. ಆಗ ಮಹಿಳೆ ನೀರಿನ ಬಿಲ್ ಪಾವತಿಸಿದ್ದೇನೆ ಎಂದು ತಿಳಿಸಿದ್ದು ಈ ಸಂದರ್ಭ ನೀರಿನ ಸಂಪರ್ಕವನ್ನು ಕಡಿತಗೊಳಿಸದೆ ಅವರು ತೆರಳಿದ್ದರು ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಕ್ವಾರಿ ಕಲಹ: ಕಚೇರಿ ನುಗ್ಗಿ ಬೆದರಿಕೆ ಹಾಕಿದ್ದಾರೆಂದು ವಿಟ್ಲ ಠಾಣೆಯಲ್ಲಿ ದೂರು
ಸಂಜೆ 4.30 ಗಂಟೆಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಹಿಮಾನ್ ಅವರು ಬಂದು ಅವಾಚ್ಯ ಶಬ್ದಗಳಿಂದ ಮಾತನಾಡಿ, ನೆಲಕ್ಕೆ ದೂಡಿ ಹಾಕಿ ಮಾನಭಂಗ ಮಾಡಲು ಪ್ರಯತ್ನಿಸಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.