Advertisement

ಖರೀದಿಯಲ್ಲಿ ವಂಚನೆ; ಸಿಎಂ ಸಿದ್ದರಾಮಯ್ಯ, ಜಾರ್ಜ್ ವಿರುದ್ಧ ದೂರು

12:39 PM Aug 29, 2017 | Sharanya Alva |

ಬೆಂಗಳೂರು: ಪಾಲಿಕೆ ವಾಹನ, ಯಂತ್ರೋಪಕರಣ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಕಿಕ್ ಬ್ಯಾಕ್ ಪಡೆದಿರುವುದಾಗಿ ಆರೋಪಿಸಿರುವ ಬಿಜೆಪಿ ನಗರ ವಕ್ತಾರ ಎನ್.ಆರ್.ರಮೇಶ್, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಕೆಜೆ ಜಾರ್ಜ್ ವಿರುದ್ಧ ಲೋಕಾಯುಕ್ತ, ಎಸಿಬಿಯಲ್ಲಿ ದೂರು ದಾಖಲಿಸಿದ್ದಾರೆ.

Advertisement

ಬಿಬಿಎಂಪಿ ಕಸ ಗುಡಿಸುವ ಪಾಲಿಕೆ ವಾಹನ, ಯಂತ್ರೋಪಕರಣ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ವಂಚನೆ ನಡೆದಿರುವುದಾಗಿ ರಮೇಶ್ ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಾರ್ಜ್ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತು ಎಸಿಎಂಎಂ ಕೋರ್ಟ್ ನಲ್ಲಿಯೂ ದೂರು ದಾಖಲಿಸಲಾಗುವುದು ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next