ಮದ್ದೂರು: ಸ್ಥಳೀಯ ಪಿಡಿಒಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದ ಜತೆಗೆ ಸರ್ಕಾರದ ಅನುದಾನಬಳಕೆ ಮಾಡಿಕೊಳ್ಳದ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದ್ದು, ಅಂತಹ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಹಾಗೂ ಅಮಾನತು ಮಾಡಲು ಮೇಲಧಿಕಾರಿಗಳಿಗೆ ಸೂಚಿ ಸುವುದಾಗಿ ಶಾಸಕ ಸುರೇಶ್‌ಗೌಡ ತಿಳಿಸಿದರು.
ತಾಲೂಕಿನ ಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾಸಭೆ ವೇಳೆ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನ ಬಳಕೆ ಮಾಡಿಕೊಳ್ಳದೆ ಕಳಪೆ ಸಾಧನೆ ಮಾಡಿರುವ ಅಧಿಕಾರಿಗಳ ವಿರುದ್ಧಕಿಡಿಕಾರಿದರು. ಕೂಡಲೇ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಮಾದರಿ ಗ್ರಾಮವಾಗಿಸಿ: ಅಮೃತ್ ಯೋಜನೆಯಡಿ ಆಯ್ಕೆಯಾಗಿರುವ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಸೋಲಾರ್ ದೀಪ ಅಳವಡಿಕೆ, ಶಾಲಾ ಕಾಂಪೌಂಡ್ ನಿರ್ಮಾಣ, ಶೌಚಾಲಯ, ಆಟದ ಮೈದಾನ ಇನ್ನಿತರೆ ಕಾಮಗಾರಿಗಳನ್ನು ಕೈಗೊಂಡು ಮಾದರಿ ಗ್ರಾಮವನ್ನಾಗಿಸಬೇಕೆಂದು ಸ್ಥಳದಲ್ಲಿದ್ದ ತಾಪಂ ಇಒ ಸಂದೀಪ್‌ಗೆ ಸೂಚಿಸಿದರು.
ಅಭಿವೃದ್ಧಿಗೆ ವೇಗ ಕಲ್ಪಿಸಿ: ಮುಖ್ಯಮಂತ್ರಿ ವಿಕಾಸ್ ಯೋಜನೆಯಡಿ ಅರ್ಹ ಫಲಾನುಭವಿಗಳನ್ನುಆಯ್ಕೆಗೊಳಿಸಿ ಗ್ರಾಮಗಳಿಗೆ ಮೂಲ ಸೌಲಭ್ಯ ಕಲ್ಪಿಸುವ ಜತೆಗೆ ಪಿಡಿಒಗಳು ಕರ್ತವ್ಯ ನಿರತ ಸ್ಥಳದಲ್ಲಿಹಾಜರಿದ್ದು, ಗ್ರಾಮಾಭಿವೃದ್ಧಿಗೆ ಒತ್ತು ನೀಡುವಂತೆನರೇಗಾ ಯೋಜನೆಯನ್ನು ಸಮರ್ಪಕವಾಗಿ ಬಳಕೆಮಾಡಿಕೊಂಡು ಅಭಿವೃದ್ಧಿಗೆ ವೇಗ ಕಲ್ಪಿಸಬೇಕೆಂದರು.
ಮನೆ ನಿರ್ಮಿಸಿ: ಕೋಡಿನಾಗನಹಳ್ಳಿ, ಬಳ್ಳೇಕೆರೆ, ಬಿದರಕೋಟೆ, ನಂಬಿನಾಯಕನಹಳ್ಳಿ, ಆಬಲವಾಡಿ,ಹೊಸಗಾವಿ ಇತರೆ ಗ್ರಾಮಗಳಿಗೆ ಮೂಲ ಸೌಲಭ್ಯಕಲ್ಪಿಸುವ ಜತೆಗೆ ಚರಂಡಿ, ಕಾಂಕ್ರಿಟ್ ರಸ್ತೆ, ನರೇಗಾ ಯೋಜನೆ, ರಾಜೀವ್‌ಗಾಂಧಿ ವಸತಿ ಯೋಜನೆಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಿಸಲು ಅವಕಾಶ ಕಲ್ಪಿಸಬೇಕೆಂದರು.
ಪಿಡಿಒಗಳು ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಗಮನಹರಿಸುವಜತೆಗೆ ಸರ್ಕಾರದ ಯೋಜನೆಗಳನ್ನು ಬಳಕೆಮಾಡಿಕೊಳ್ಳಲು ಅರಿವು ಮೂಡಿಸಬೇಕು.ನನೆಗುದಿಗೆ ಬಿದ್ದಿರುವ ಅಭಿವೃದ್ಧಿ ಕಾಮಗಾರಿಗಳನ್ನುಕೂಡಲೇ ಪೂರ್ಣಗೊಳಿಸಬೇಕೆಂದರು.
ಪ್ರತಿ ಗ್ರಾಪಂ ಪಿಡಿಒಗಳ ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಿದರಲ್ಲದೇ, ಕಾಮಗಾರಿಗಳಿಗೆತೊಡಕು ಉಂಟಾಗದಂತೆ ಅಗತ್ಯ ಕ್ರಮ ವಹಿಸಬೇಕೆಂದು ಸೂಚಿಸಿದರು.
ಸ್ಥಳೀಯ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ನೀಡಿದರು. ಈ ವೇಳೆ ತಾಪಂ ಇಒ ಸಂದೀಪ್, ನರೇಗಾಯೋಜನಾಧಿಕಾರಿ ಮಂಜುನಾಥ್, ಜಿಪಂ ಎಂಜಿನಿಯರ್ ಗುರಪ್ಪಶೆಟ್ಟಿ ಹಾಗೂ ಸ್ಥಳೀಯ ಪಿಡಿಒಗಳು ಹಾಜರಿದ್ದರು.