Advertisement
ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಶನಿವಾರ ಭ್ರಷ್ಟಾಚಾರ ನಿಗ್ರಹ ದಳ ಹಮ್ಮಿಕೊಂಡಿದ್ದ ಜನಜಾಗೃತಿ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಿ ಕಚೇರಿಗಳಲ್ಲಿ ಸಾರ್ವ ಜನಿಕರ ಕೆಲಸಗಳಿಗೆ ಸರ್ಕಾರಿ ಶುಲ್ಕ ಹೊರತುಪಡಿಸಿ ಹೆಚ್ಚಿನ ಹಣ ಪಡೆಯುವಂತಿಲ್ಲ. ಈ ರೀತಿ ಪಡೆದರೆ ಇದು ಭ್ರಷ್ಟಾಚಾರ ಕಾಯ್ದೆಯಡಿಯಲ್ಲಿ ಶಿಕ್ಷಾರ್ಹ ಅಪರಾಧ. ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಏನಾದರೂ ತಪ್ಪು ಮಾಡಿದರೆ ಅವರನ್ನೂ ತನಿಖೆ ಮಾಡಲು ವಿಜಿಲೆನ್ಸ್ ವ್ಯವಸ್ಥೆ ಇದೆ ಎಂದು ಮಾಹಿತಿ ನೀಡಿದರು.
Related Articles
Advertisement
ತನಿಖೆ ಮುಗಿಯುವವರೆಗೂ ಸಹಕರಿಸಿ: ಭ್ರಷ್ಟಾಚಾರ ನಿಗ್ರಹ ದಳದ ವಿಶೇಷ ಸರ್ಕಾರಿ ಅಭಿಯೋಜಕ ರಾಮಚಂದ್ರಯ್ಯ ಮಾತನಾಡಿ, ವಿಶ್ವದ 176 ದೇಶಗಳಲ್ಲಿ ಭಾರತ ಭ್ರಷ್ಟಾಚಾರದಲ್ಲಿ 76ನೇ ಸ್ಥಾನದಲ್ಲಿದೆ. ಕಡಿಮೆ ಮಾಡಲು ಯುವಕರು ಕೈಜೋಡಿಸಬೇಕಿದೆ. ಸರ್ಕಾರದ ಸಂಬಳ ಪಡೆಯುತ್ತಿರುವ ಎಲ್ಲಾ ಕಾಯಂ ಹಾಗೂ ಗುತ್ತಿಗೆ ನೌಕರರು ಭ್ರಷ್ಟಾಚಾರ ನಿಗ್ರಹ ದಳದ ತನಿಖೆಯ ವ್ಯಾಪ್ತಿಗೆ ಒಳಪಡುತ್ತಾರೆ. ದೂರುದಾರರು ಆರೋಪಿಗೆ ಶಿಕ್ಷೆ ಆಗುವವರೆಗೂ ತನಿಖೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ, ದೂರು ನೀಡಿರುವ ದೂರುದಾರರನ್ನು ಸನ್ಮಾನಿಸಲಾಯಿತು. ನಂತರ ಭ್ರಷ್ಟಾಚಾರ ಕುರಿತು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಯಿತು. ಎಸಿಬಿಗೆ ದೂರು ನೀಡಿರುವವರಲ್ಲಿ ತೊಪ್ಪನಹಳ್ಳಿ ಮಲ್ಲಿಕಾರ್ಜುನ, ಧನಮಟ್ನಹಳ್ಳಿ ವೆಂಕಟೇಶಪ್ಪ, ಬಿಎಂಟಿಸಿ ನಿರ್ವಾಹಕಿ ಶೈಲಜಾ ಹಾಗೂ ಜಿಲ್ಲೆಯ ಎರಡು ರೈತ ಸಂಘಗಳ ಪದಾಧಿಕಾರಿಗಳು ಮತ್ತಿತರ ಪ್ರಮುಖರಿದ್ದರು. ಜನಪನಹಳ್ಳಿಯ ರೈತ ರಾಮಯ್ಯರನ್ನು ಸನ್ಮಾನಿಸಲಾಯಿತು.
ಕೋಲಾರ ಉಪ ಅಧೀಕ್ಷಕ ಕೋದಂಡರಾಮಯ್ಯ, ಮುಳಬಾಗಿಲು ಉಪಅಧೀಕ್ಷಕ ಬಿ.ಕೆ.ಉಮೇಶ್, ಪ್ರೊಬೆಷನರಿ ಉಪ ಅಧೀಕ್ಷಕಿ ಅನುಷಾ, ಲೋಕಾಯುಕ್ತ ಉಪ ಅಧೀಕ್ಷಕ ಕೃಷ್ಣಮೂರ್ತಿ ಉಪಸ್ಥಿತರಿದ್ದರು.