Advertisement

ಮುನಿರತ್ನ ವಿರುದ್ಧ ರಾಜ್ಯಪಾಲರಿಗೆ ದೂರು 

12:48 PM Jun 03, 2017 | Team Udayavani |

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಬಿಎಂಪಿಯ ಬಿಜೆಪಿ ಮಹಿಳಾ ಸದಸ್ಯರಿಗೆ ಕೆಲಸ ಮಾಡಲು ಅಡ್ಡಿಪಡಿಸುತ್ತಿರುವ ಹಾಗೂ ಕಾರ್ಪೊರೇಟರ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಕಾಂಗ್ರೆಸ್‌ ಶಾಸಕ ಮುನಿರತ್ನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ಬಿಜೆಪಿ ನಿಯೋಗ ರಾಜ್ಯಪಾಲರಿಗೆ ದೂರು ನೀಡಿದೆ. 

Advertisement

ಬಿಜೆಪಿ ರಾಜ್ಯಾಕಾರ್ಯದರ್ಶಿ ಜಯದೇವ ಎಸ್‌. ಪ್ರಕಾಶ್‌, ವಿಧಾನಪರಿಷತ್‌ ಸದಸ್ಯೆ ತಾರಾ ಅನುರಾಧ, ಮಾಜಿ ವಿಧಾನಪರಿಷತ್‌ ಸದಸ್ಯ ಅಶ್ವತ್ಥನಾರಾಯಣ, ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ ಅವರನ್ನೊಳಗೊಂಡ ನಿಯೋಗ ಶುಕ್ರವಾರ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿ ದೂರು ಸಲ್ಲಿಸಿತು. 

ಪಾಲಿಕೆಯ ಮಹಿಳಾ ಬಿಜೆಪಿ ಸದಸ್ಯರಿಗೆ ಮುನಿರತ್ನ ತೀವ್ರ ಕಿರುಕುಳ ನೀಡುತ್ತಿದ್ದಾರೆ. ಅಭಿವೃದ್ಧಿ ಕೆಲಸಗಳಲ್ಲಿ ರಾಜಕೀಯ ಮಾಡಿ, ಅವಕಾಶ ಇಲ್ಲದಂತೆ ಮಾಡುತ್ತಿದ್ದಾರೆ. ವಾರ್ಡ್‌ಗಳಲ್ಲಿ ಬಿಜೆಪಿ ಸದಸ್ಯರು ಕೆಲಸ ಮಾಡಲು ಆಗದಂತಹ ಸ್ಥಿತಿ ನಿರ್ಮಾಣ ಮಾಡಿದ್ದಾರೆ.

ಇತ್ತೀಚೆಗೆ ಮುಖ್ಯಮಂತ್ರಿಯವರ ಸಮ್ಮುಖದಲ್ಲೇ ಮಹಿಳಾ ಸದಸ್ಯರ ಮೇಲೆ ಹಲ್ಲೆ ಮಾಡಲು ಕುಮ್ಮಕ್ಕು ನೀಡಿದ್ದಾರೆ. ಆದ್ದರಿಂದ ಶಾಸಕ ಮುನಿರತ್ನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲರಿಗೆ ನೀಡಿದ ದೂರಿನಲ್ಲಿ ಮನವಿ ಮಾಡಲಾಗಿದೆ. ನಿಯೋಗದಲ್ಲಿ  ಬೆಂಗಳೂರು ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಶಾರದಾ ನಾಯಕ್‌, ಮುಖಂಡರಾದ ಸುಬ್ಬಣ್ಣ, ಮಾಳವಿಕ ಅವಿನಾಶ್‌, ಶಿಲ್ಪಾ ಗಣೇಶ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next