Advertisement

Madikeri: ವಿ.ವಿ. ಹಣಕಾಸು ಅಶಿಸ್ತಿನ ವಿರುದ್ಧ ರಾಜ್ಯಪಾಲರಿಗೆ ದೂರು

09:46 AM Mar 07, 2024 | Team Udayavani |

ಮಡಿಕೇರಿ: ಮಂಗಳೂರು ವಿಶ್ವವಿದ್ಯಾನಿಲಯದ ಹಣಕಾಸು ಅಶಿಸ್ತಿನ ವಿರುದ್ಧ ರಾಜ್ಯಪಾಲರಿಗೆ ದೂರು ನೀಡುವುದಾಗಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

Advertisement

ಕಳೆದ 7 ದಿನಗಳಿಂದ ಬಾಕಿ 5 ತಿಂಗಳ ವೇತನ ಪಾವತಿಗಾಗಿ ಮಡಿಕೇರಿಯ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕಾಲೇಜಿನ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಮುಷ್ಕರ ಸ್ಥಳಕ್ಕೆ ತೆರಳಿದ ಪ್ರತಾಪ್‌ ಸಿಂಹ ಅವರ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಆಲಿಸಿದರು.

ಪ್ರತಿಭಟನಕಾರರಿಂದ ಮನವಿ ಸ್ವೀಕರಿಸಿ ಮಾತನಾಡಿ, ಕಾಲೇಜು ಅಭಿವೃದ್ಧಿ ಶುಲ್ಕ ದುರುಪಯೋಗವಾಗುತ್ತಿದೆ. ಇದರಿಂದಾಗಿಯೇ ಅತಿಥಿ ಉಪನ್ಯಾಸಕರಿಗೆ ವೇತನ ನೀಡಲಾಗುತ್ತಿಲ್ಲ ಎಂದು ವಿ.ವಿ. ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಈ ಕುರಿತು ತನಿಖೆ ನಡೆಸುವಂತೆ ರಾಜ್ಯಪಾಲರಿಗೆ ಪತ್ರ ಬರೆದು ಅತಿಥಿ ಉಪನ್ಯಾಸಕರ ಬೇಡಿಕೆಗಳಿಗೆ ನ್ಯಾಯ ದೊರಕಿಸುವೆ ಎಂದು ಹೇಳಿದರು.

ಅಲ್ಪಸಂಖ್ಯಾಕರ ಓಲೈಕೆ

Advertisement

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರಕಾರಕ್ಕೆ ಅಲ್ಪಸಂಖ್ಯಾಕರ ಓಲೈಕೆ ಬಿಟ್ಟರೆ ಬೇರೆ ಯಾವುದೇ ಅಜೆಂಡಾ ಇಲ್ಲ ಎಂದು ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಿಂದೂ ಹಾಗೂ ದಲಿತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದ್ದಾರೆ. ಚುನಾವಣೆ ಸಂದರ್ಭ ಬಿಜೆಪಿ ಕಾರ್ಯಕರ್ತರನ್ನು ಅಧೀರರನ್ನಾಗಿ ಮಾಡಿ ಗೆಲುವು ಸಾಧಿಸುವ ವ್ಯವಸ್ಥಿತ ಪ್ರಯತ್ನಗಳು ನಡೆಯುತ್ತಿವೆ. ಬಹಳ ಹಿಂದಿನಿಂದಲೂ ಕಾಂಗ್ರೆಸ್‌ ಹಿಂದೂಗಳನ್ನು ಗುರಿ ಮಾಡಿಕೊಂಡೇ ಬಂದಿದೆ ಎಂದು ಟೀಕಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next