Advertisement

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

07:27 PM Dec 19, 2024 | Team Udayavani |

ಹೊಸದಿಲ್ಲಿ: ಸಂಸತ್ತಿನಲ್ಲಿ ಗುರುವಾರ(ಡಿ19) ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಆಪಾದಿತ ಘರ್ಷಣೆ ನಡೆದಿದ್ದು,ಪ್ರಕರಣ ಠಾಣೆಯ ಮೆಟ್ಟಿಲೇರಿದ್ದು ದೂರಿಗೆ ಪ್ರತಿದೂರು ದಾಖಲಾಗಿದೆ. ಎರಡೂ ಕಡೆಯವರು ಪರಸ್ಪರ ಹಲ್ಲೆ ಮತ್ತು ದುರ್ನಡತೆಯ ಆರೋಪವನ್ನು ಪೋಲೀಸ್ ದೂರುಗಳನ್ನು ದಾಖಲಿಸಿದ್ದಾರೆ.

Advertisement

ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರ ನೇತೃತ್ವದ ಬಿಜೆಪಿ ಸಂಸದರ ನಿಯೋಗ ರಾಹುಲ್ ಗಾಂಧಿ ವಿರುದ್ಧ ಹಲ್ಲೆ ಮತ್ತು ಪ್ರಚೋದನೆ ಆರೋಪದಡಿ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ನಡುವೆ ಕಾಂಗ್ರೆಸ್ ಸಂಸದರ ನಿಯೋಗ ಸಂಸತ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಪ್ರತಿದೂರು ದಾಖಲಿಸಿದೆ.

ಮಕರ ದ್ವಾರದ ಹೊರಗೆ ಎನ್‌ಡಿಎ ಸಂಸದರು ನಡೆಸಿದ ಪ್ರತಿಭಟನೆಯಲ್ಲಿ 69 ವರ್ಷದ ಬಿಜೆಪಿ ಸಂಸದ ಪ್ರತಾಪ್ ಚಂದ್ರ ಸಾರಂಗಿ ಅವರನ್ನು ರಾಹುಲ್ ಗಾಂಧಿ ತಳ್ಳಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಘಟನೆಯಲ್ಲಿ ಸಾರಂಗಿ ಮತ್ತು ಬಿಜೆಪಿಯ ಇನ್ನೊಬ್ಬ ಸಂಸದ ಮುಖೇಶ್ ರಜಪೂತ್ ಗಾಯಗೊಂಡಿದ್ದಾರೆ. ಇಬ್ಬರಿಗೂ ತಲೆಗೆ ಗಾಯವಾಗಿದ್ದು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಹುಲ್ ಗಾಂಧಿ ಅನುಚಿತವಾಗಿ ವರ್ತಿಸಿದರು

ನಾಗಾಲ್ಯಾಂಡ್ ನ ಬಿಜೆಪಿ ಸಂಸದೆ ಎಸ್ ಫಾಂಗ್ನಾನ್ ಕೊನ್ಯಾಕ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Advertisement

ಲೋಕಸಭೆಯಲ್ಲಿ ವಿಪಕ್ಷ ನಾಯಕನ ಅನುಚಿತ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯಸಭಾ ಸಂಸದ ಕೊನ್ಯಾಕ್ ಅವರು ಸಭಾಪತಿಗೆ ಪತ್ರ ಬರೆದಿದ್ದಾರೆ.

ಅಂಬೇಡ್ಕರ್ ವಿರುದ್ಧ ಕಾಂಗ್ರೆಸ್ ಪಕ್ಷ ನಡೆಸಿದ ದೌರ್ಜನ್ಯದ ವಿರುದ್ಧ ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸಿದ ವೇಳೆ, ರಾಹುಲ್ ಗಾಂಧಿಯವರು ತೀವ್ರವಾಗಿ ನೋವುಂಟುಮಾಡಿದರು. ನನ್ನ ಘನತೆ ಮತ್ತು ಸ್ವಾಭಿಮಾನವನ್ನು ಘಾಸಿಗೊಳಿಸಿದ್ದಾರೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

”ರಾಹುಲ್ ಗಾಂಧಿ ತುಂಬಾ ಹತ್ತಿರಕ್ಕೆ ಬಂದರು.ನಾನು ಭಾರವಾದ ಹೃದಯದಿಂದ ಪಕ್ಕಕ್ಕೆ ಸರಿದೆ. ನನ್ನ ಪ್ರಜಾಪ್ರಭುತ್ವ ಹಕ್ಕುಗಳ ಮೂಲಕ ಖಂಡಿಸಿದೆ ಆದರೆ ಯಾವುದೇ ಸಂಸದರು ಈ ರೀತಿ ವರ್ತಿಸಬಾರದು ಎಂದು ಭಾವಿಸಿದೆ.ನಾನು ನಾಗಾಲ್ಯಾಂಡ್‌ನ ಎಸ್‌ಟಿ ಸಮುದಾಯಕ್ಕೆ ಸೇರಿದ ಮಹಿಳಾ ಸದಸ್ಯೆಯಾಗಿ ರಕ್ಷಣೆಯನ್ನು ಕೋರುತ್ತೇನೆ” ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಆರೋಪ
ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಬಿಜೆಪಿ ಸಂಸದರು ಸಂಸತ್ತಿನ ಘನತೆಯನ್ನು ಕುಗ್ಗಿಸಿದ್ದಾರೆ ಎಂದು ಆರೋಪಿಸಿದರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಖರ್ಗೆ ಅವರು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಬರೆದ ಪತ್ರದಲ್ಲಿ ಬಿಜೆಪಿ ಸಂಸದರು ತಮ್ಮನ್ನು ದೈಹಿಕವಾಗಿ ತಳ್ಳಿದರು, ಇದರಿಂದಾಗಿ ಅವರು ಸಮತೋಲನ ಕಳೆದುಕೊಂಡು ಮತ್ತು ಮೊಣಕಾಲುಗಳಿಗೆ ಗಾಯಗಳಾಗಿವೆ ಎಂದು ಆರೋಪಿಸಿದ್ದಾರೆ.

“ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ಜೀ ಅವರನ್ನು ಅವಮಾನಿಸಿದ ನಂತರ, ನರೇಂದ್ರ ಮೋದಿ ಸಂಸತ್ತಿನ ಘನತೆಗೆ ಅವಮಾನ ಮಾಡಿದ್ದಾರೆ, ಬಿಜೆಪಿ ಸಂಸದರು ದಪ್ಪ ಕೋಲುಗಳಿಂದ ಕೂಡಿದ ಭಿತ್ತಿಪತ್ರಗಳನ್ನು ಹಿಡಿದುಕೊಂಡು, ಇಂಡಿಯಾ ಮೈತ್ರಿ ಕೂಟದ ಸಂಸದರ ಶಾಂತಿಯುತ ಪ್ರತಿಭಟನೆಯನ್ನು ತಡೆದಿದ್ದಾರೆ”ಎಂದು ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next