Advertisement

ಆನ್ ಲೈನ್ ಶಿಕ್ಷಣದ ಬಗ್ಗೆ ದೂರುಗಳಿದ್ದರೆ ಸಹಾಯವಾಣಿಗೆ ತಿಳಿಸಬಹುದು: ಸುರೇಶ್ ಕುಮಾರ್

02:11 PM Nov 06, 2020 | keerthan |

ಬೆಂಗಳೂರು: ಆನ್ ಲೈನ್ ಶಿಕ್ಷಣ ನಿರ್ವಹಣೆಗೆ ಸಂಬಂಧಿಸಿದಂತೆ ಪೋಷಕರ-ಸಾರ್ವಜನಿಕರ ಯಾವುದೇ ದೂರುಗಳಿದ್ದರೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣವಾಣಿ- ಸಾರ್ವಜನಿಕ ಸಹಾಯವಾಣಿಗೆ ಫೋನ್ ಕರೆ ಮೂಲಕ ದಾಖಲಿಸಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

Advertisement

ಶುಕ್ರವಾರ ಬೆಳಗ್ಗೆ ಸಮಗ್ರ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಆನ್ ಲೈನ್ ಶಿಕ್ಷಣ ಕುರಿತಂತೆ ಹೊರಡಿಸಲಾದ ಸೂಚನೆಗಳನ್ವಯ ಸೂಕ್ತ ಅನುಪಾಲನಾ ವ್ಯವಸ್ಥೆ ಜಾರಿಯಲ್ಲಿಡುವ ಕುರಿತು ಮತ್ತು ಈ ಸುತ್ತೋಲೆಗಳ ಅನುಷ್ಠಾನದಲ್ಲಿ ಇಲಾಖೆ ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿ ಮಾತನಾಡಿದ ಅವರು, ಸಾರ್ವಜನಿಕರು ಆನ್‍ಲೈನ್ ಕುರಿತ ದೂರುಗಳನ್ನು ಶಿಕ್ಷಣವಾಣಿ-ಸಹಾಯವಾಣಿಗೆ (18004257302) ಇಲ್ಲವೇ ಸಹಾಯವಾಣಿ ವಾಟ್ಸ್ಆಪ್ ಸಂಖ್ಯೆ (9483045130) ಸಲ್ಲಿಸಿ ಇಲಾಖೆಯ ಗಮನಕ್ಕೆ ತರುವ ಮೂಲಕ ಸಹಾಯವಾಣಿಯ ಉಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.

ಇಂತಹ ದೂರುಗಳನ್ನು ನಿರ್ವಹಿಸಲು ಕೂಡಲೇ ಆಯುಕ್ತರ ಕಚೇರಿ ಮತ್ತು ಜಿಲ್ಲಾ ಮಟ್ಟದಲ್ಲಿ ಉಪನಿರ್ದೇಶಕರ ಹಂತದಲ್ಲಿ ಒಬ್ಬೊಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ಬೆಂಗಳೂರು, ಕಲ್ಬುರ್ಗಿ, ಬೆಳಗಾವಿ, ಮಂಗಳೂರು, ಹುಬ್ಬಳ್ಳಿ_ಧಾರವಾಡ ಸೇರಿದಂತೆ ಹಲವು ನಗರ ಕೇಂದ್ರಿತ ಪ್ರದೇಶಗಳಲ್ಲಿ ಇಂತಹ ದೂರುಗಳು ಹೆಚ್ಚಾಗಿರುವುದರಿಂದ ಅಧಿಕಾರಿಗಳು ಆನ್ ಲೈನ್ ಶಿಕ್ಷಣದಲ್ಲಿನ ಸಮಸ್ಯೆಗಳನ್ನು ಮತ್ತು ದೂರುಗಳನ್ನು ಪರಿಶೀಲಿಸಿ ಸಾರ್ವಜನಿಕರಿಗೆ ಪರಿಹಾರ ಸೂಚಿಸುವ ನಿಟ್ಟಿನಲ್ಲಿ ಶನಿವಾರ ನಗರಗಳ ಅಧಿಕಾರಿಗಳ ಸಭೆ ನಡೆಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಬೇಕೆಂದು ಇಲಾಖೆಯ ಆಯುಕ್ತರಿಗೆ ಸಚಿವರು ಸೂಚಿಸಿದರು.

ಇದನ್ನೂ ಓದಿ:ಐಟಿಬಿಪಿ ಶ್ವಾನದಳಕ್ಕೆ 17 ಮುದ್ದಾದ “ಬೆಲ್ಜಿಯನ್‌’ ಮರಿಗಳು ಪಾದಾರ್ಪಣೆ

ಯಾವುದೇ ಶಾಲೆಗಳಿರಲಿ ಆನ್ ಲೈನ್ ಶಿಕ್ಷಣವನ್ನು ತಜ್ಞರ ಸಮಿತಿ ಶಿಫಾರಸಿನನ್ವಯ ಇಲಾಖೆ ಹೊರಡಿಸಿರುವ ಸುತ್ತೋಲೆಗಳನ್ವಯ ವೈಜ್ಞಾನಿಕವಾಗಿಯೇ ನಿರ್ವಹಿಸುವ ಕುರಿತು ಅಗತ್ಯ ಅನುಪಾಲನಾ ವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು. ಬಿಇಒಗಳು ಆನ್-ಲೈನ್ ತರಗತಿಗಳ ಪರಾಮರ್ಶೆ ಮಾಡುವದರೊಂದಿಗೆ ಕೇಂದ್ರ ಕಚೇರಿಯಲ್ಲಿ ಈ ಕುರಿತ ಮಾಹಿತಿ ಯಾವುದೇ ಸಂದರ್ಭದಲ್ಲಿಯೂ ದೊರೆಯವಂತಾಗಬೇಕು ಕೆಂದು ಸುರೇಶ್ ಕುಮಾರ್ ಸೂಚಿಸಿದರು. ಈ ಬಗ್ಗೆ ಕೂಡಲೇ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಬೇಕೆಂದೂ ಸಹ ನಿರ್ದೇಶನ ನೀಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next