Advertisement

ಬಜೆಟ್ ನಲ್ಲಿ ಸರಕಾರಿ ನೌಕರರ ಸಂಪೂರ್ಣ ಕಡೆಗಣನೆ: ಸಚಿವಾಲಯ ನೌಕರರ ಸಂಘ ವಿರೋಧ

03:34 PM Mar 04, 2022 | Team Udayavani |

ಬೆಂಗಳೂರು:ರಾಜ್ಯ ಸರ್ಕಾರಿ ನೌಕರರರನ್ನು ಸಂಪೂರ್ಣವಾಗಿ ಕಡೆಗಣಿಸಿರುವ ಸರ್ಕಾರಿ ನೌಕರರ ಹಿತಕಾಪಾಡುವಲ್ಲಿ ವಿಫಲವಾಗಿರುವ ಬಜೆಟ್ ಇದಾಗಿದೆ ಎಂದು ಸಚಿವಾಲಯ ನೌಕರರ ಸಂಘ ವಿರೋಧಿಸಿದೆ

Advertisement

ರಾಜ್ಯದ 2022-23ನೇ ಸಾಲಿನ ಆಯವ್ಯಯದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರದ ಮಾದರಿ ವೇತನವನ್ನು ನೀಡುವ ಕುರಿತಂತೆ ಯಾವುದೇ ಪ್ರಸ್ತಾಪ ಮಾಡದೇ ರಾಜ್ಯ ಸರ್ಕಾರಿ ನೌಕರರನ್ನು ಕಡೆಗಣಿಸಿರುವುದು ಸಮಸ್ತ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ನಿರಾಸೆಯನ್ನುಂಟು ಮಾಡಿರುವುದಾಗಿ ಸಂಘದ ಅಧ್ಯಕ್ಷ ಪಿ.ಗುರುಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪುಸ್ತುತ ರಾಜ್ಯ ಸರ್ಕಾರಿ ನೌಕರರಿಗೆ 6 ನೇ ವೇತನ ಆಯೋಗದ ಶಿಫಾರಸ್ಸಿನನ್ವಯ ಶೇ .33 ರಷ್ಟು ವೇತನವನ್ನು ಹೆಚ್ಚಿಗೆ ಮಾಡಿದ್ದರೂ ಕೇಂದ್ರ ಸರ್ಕಾರಿ ನೌಕರರಿಗೆ ಹೋಲಿಸಿದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರ ನಡುವೆ ಸಾಕಷ್ಟು ವೇತನ ತಾರತಮ್ಯ ಇರುತ್ತದೆ ಕೋವಿಡ್ -19 ಸಂಕಷ್ಟದ ಸಂದರ್ಭದಲ್ಲಿ ಕೊರೋನಾ ವಾರಿಯರ್ಸ್‌ಗಳಾಗಿ ದುಡಿಯುವುದರ ಜೊತೆಗೆ ತಮ್ಮ ವೇತನವನ್ನು ಕೋವಿಡ್ ಸಂದರ್ಭದಲ್ಲಿಯೂ ಸೇರಿದಂತೆ ಪ್ರಾಕೃತಿಕ ವಿಕೋಪಗಳಾದ ಸಂದರ್ಭಗಳಲ್ಲಿಯೂ ರಾಜ್ಯ ಸರ್ಕಾರಿ ನೌಕರರು ತಮ್ಮ ವೇತನವನ್ನು ನೀಡಿ ಸರ್ಕಾರದ ಬೆನ್ನಿಗೆ ನಿಂತಿದ್ದಾರೆ.ಆದರೆ ಸರ್ಕಾರ ಇದ್ಯಾವುದನ್ನೂ ಪರಿಗಣಿಸದೇ ಕೃತಘ್ನತಾಭಾವವನ್ನು ತೋರಿರುವುದು ಈ ಬಜೆಟ್‌ನಲ್ಲಿ ವ್ಯಕ್ತಪಡಿಸಿದೆ.

ತಮ್ಮ ಜೀವದ ಹಂಗನ್ನು ತೊರೆದು ಸಾರ್ವಜನಿಕರ ರಕ್ಷಣೆಗೆ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರೂ ಸಹ ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರ ವೇತನ ತಾರತಮ್ಯವನ್ನು ಸರಿಪಡಿಸದ ಮಲತಾಯಿ ಧೋರಣೆ ಅನುಸರಿಸುತ್ತಿರುವುದನ್ನು ಸಚಿವಾಲಯ ನೌಕರರ ಸಂಘವು ತೀವ್ರವಾಗಿ ಖಂಡಿಸುವುದಾಗಿ ಗುರುಸ್ವಾಮಿ ಹೇಳಿದ್ದಾರೆ.

ಸರ್ಕಾರದ ಈ ಸರ್ಕಾರಿ ನೌಕರರ ವಿರೋಧಿ ನೀತಿ ಹಾಗೂ ಅನ್ಯಾಯವನ್ನು ಖಂಡಿಸಿ ಮುಂದಿನ ದಿನಗಳಲ್ಲಿ ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಎನ್.ಪಿ.ಎಸ್ ಸಂಘ , ಕರ್ನಾಟಕ ವಿಧಾನ ಸಭೆ ಸಚಿವಾಲಯ ನೌಕರರ ಸಂಘ , ಕರ್ನಾಟಕ ವಿಧಾನ ಪರಿಷತ್ ಸಚಿವಾಲಯ ನೌಕರರ ಸಂಘ ಹಾಗೂ ಇನ್ನಿತರೆ ವೃಂದ ಸಂಘಗಳು ಸೇರಿ ಹೋರಾಟ ನಡೆಸಲು ಕ್ರಿಯಾ ಸಮಿತಿಯನ್ನು ರಚಿಸಿ ಉಗ್ರ ಹೋರಾಟ ನಡೆಸುವುದಾಗಿ ಗುರುಸ್ವಾಮಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Advertisement

ಎನ್‌ಪಿ‌ಎಸ್ ನೌಕರರ ಸಂಘದಿಂದ ಖಂಡನೆ

ಬಜೆಟ್ ವಿರುದ್ಧ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿ‌ಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ ಖಂಡನೆ ವ್ಯಕ್ತ ಪಡಿಸಿದ್ದಾರೆ.

ರಾಜಸ್ಥಾನ ಸರ್ಕಾರ ತನ್ನ ಈ ಬಾರಿಯ ಬಜೆಟ್‌ನಲ್ಲಿ NPS ರದ್ದುಗೊಳಿಸಿರುವ ಮಾದರಿಯಲ್ಲಿ ಷೇರು ಮಾರುಕಟ್ಟೆ ಆಧಾರಿತ ನೂತನ ಪಿಂಚಣಿ ಯೋಜನೆ ( NPS ) ಯನ್ನು ನಮ್ಮ ಕರ್ನಾಟಕ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ರದ್ದುಗೊಳಿಸುವ ಭರವಸೆಯನ್ನು ಸಂಘ ಹೊಂದಿತ್ತು. ಆದರೆ ಈ ಬಾರಿಯ ಬಜೆಟ್ 250,000 ಸರ್ಕಾರಿ ಹಾಗೂ ಬೋರ್ಡ್ ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 3 ಲಕ್ಷಕ್ಕೂ ಅಧಿಕ NPS ನೌಕರರನ್ನು ನಮ್ಮ ಸರ್ಕಾರ ಬಜೆಟ್‌‌ನಲ್ಲಿ ನಕನಿರಾಸೆಗೊಳಿಸಿದೆ . ಹೀಗಾಗಿ ಈ ಬಜೆಟ್ ಅನ್ನು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ ತೀವ್ರವಾಗಿ ವಿರೋಧಿಸಿ ಅತಿ ಶೀಘ್ರದಲ್ಲಿ ಸರ್ಕಾರದ ಈ ವಿರೋಧನೀತಿಯ ಹೋರಾಟಕ್ಕೆ ಧುಮುಕಲಿದೆ ಎಂದು ಶಾಂತಾರಾಮ ಎಚ್ಚರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next