ಬೆಂಗಳೂರು: ಬಡವರಿಗಾಗಿ ರೂಪಿಸಿರುವ ವಸತಿ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ವಸತಿ ಸಚಿವ ಜಮೀರ್ ಅಹಮದ್ ಸೂಚಿಸಿದ್ದಾರೆ.
ರಾಜೀವ್ ಗಾಂಧಿ ವಸತಿ ನಿಗಮದ ಪ್ರಗತಿ ಪರಿಶೀಲನೆ ನಡೆಸಿದ ಅವರು, ಯೋಜನೆ ವರ್ಷಗಳ ಕಾಲ ವಿಳಂಬವಾದರೆ ಬಡವರಿಗೆ ಸೂರು ಕಲ್ಪಿಸುವ ಉದ್ದೇಶ ಈಡೇರುವುದಿಲ್ಲ. ಆದ್ದರಿಂದ ಯಾವುದೇ ಕಾರಣಕ್ಕೂ ವಿಳಂಬ ಸಹಿಸುವುದಿಲ್ಲ ಎಂದು ತಾಕೀತು ಮಾಡಿದರು.
ಒಂದೊಂದು ಯೋಜನೆಗೆ ನಿಗದಿತ ಕಾಲಮಿತಿ ಹಾಕಿಕೊಂಡು ಅದನ್ನು ಪೂರ್ಣಗೊಳಿಸಿದ ಬಳಿಕವೇ ಮತ್ತೊಂದು ಯೋಜನೆ ಕೈಗೆತ್ತಿಕೊಳ್ಳಬೇಕು.
ಪ್ರತಿ ಯೋಜನೆಗೆ ಬೇಕಾದ ಹಣಕಾಸು ಹೊಂದಿಸಿಕೊಂಡು, ಕಾಮಗಾರಿ ಪೂರ್ಣಗೊಳಿಸಿ, ಫಲಾನುಭವಿಗಳಿಗೆ ಹಂಚಿಕೆ ಆದ ಅನಂತರವಷ್ಟೇ ಮತ್ತೊಂದು ಯೋಜನೆ ಪ್ರಾರಂಭಿಸಬೇಕು. ಆಗ ಮಾತ್ರ ನಂಬಿಕೆ ಬರಲು ಸಾಧ್ಯ ಎಂದು ಸಚಿವರು ಸೂಚನೆ ನೀಡಿದರು.