Advertisement

Cafe ಸ್ಫೋಟ ಪ್ರಕರಣದಲ್ಲಿ ತನಿಖಾ ತಂಡಕ್ಕೆ ಸಂಪೂರ್ಣ ಸ್ವಾತಂತ್ರ್ಯ: ಸಚಿವ ಎನ್.ಎಸ್.ಬೋಸರಾಜು

03:25 PM Mar 08, 2024 | Team Udayavani |

ರಾಯಚೂರು: ರಾಮೇಶ್ವರ ಕೆಫೆ ಸ್ಪೋಟ ಪ್ರಕರಣದ ತನಿಖೆ ನಡೆಸುವ ತಂಡಕ್ಕೆ ಸರ್ಕಾರದಲ್ಲಿ ಸಂಪೂರ್ಣ ಸ್ವಾತಂತ್ರ್ಯವಿದೆ ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

Advertisement

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ, ಪ್ರಕರಣದ ತನಿಖೆ ಮಾಡುವವರು ಕಾನೂನಾತ್ಮಕವಾಗಿ ಮಾಡುತ್ತಾರೆ. ತನಿಖೆ ನಡೆಯುತ್ತಿರುವಾಗ ಎಲ್ಲವನ್ನು ಬಹಿರಂಗಪಡಿಸುವುದಿಲ್ಲ. ತನಿಖಾ ತಂಡ ಏನು ಕ್ರಮ ಕೈಗೊಳ್ಳಬೇಕು ಅದನ್ನು ಮಾಡುತ್ತಿದೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದೆ ಎಂದರು.

ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಪಕ್ಷದಿಂದ ಯಾರು ಅಭ್ಯರ್ಥಿಯನ್ನು ಮಾಡಬೇಕು ಎನ್ನುವ ಕುರಿತಂತೆ ಜಿಲ್ಲೆಯಿಂದ ಮೂರ್ನಾಲ್ಕು ಹೆಸರು ಕಳುಹಿಸಲಾಗಿದೆ. ಸರ್ವೇ ಮಾಡಲಾಗಿದೆ. ಅಭಿಪ್ರಾಯ ಸಂಗ್ರಹಿಸಲಾಗಿದೆ. ಶಾಸಕರು, ಮಾಜಿ ಶಾಸಕರು, ಮುಖಂಡರ ಅಭಿಪ್ರಾಯ ಕೇಳಲಾಗಿದೆ. ಅ ನಿಟ್ಟಿನಲ್ಲಿ ಪಕ್ಷದಲ್ಲಿ ಸರ್ವೇ ಮಾಡಲಾಗಿದೆ. ಅದರ ಪ್ರಕಾರವೇ ಟಿಕೆಟ್ ಅಂತಿಮಗೊಳಿಸಲಾಗುವುದು ಎಂದರು.

ಬರ ಹಿನ್ನೆಲೆಯಲ್ಲಿ ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಸರ್ಕಾರ ಸಹ ಅಗತ್ಯ ಅನುದಾನ ಒದಗಿಸಿದೆ. ಬೋರ್ ವೇಲ್ ಗಳು, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವುದು ಸೇರಿದಂತೆ, ಯಾವುದೇ ನೀರಿನ ಸಮಸ್ಯೆ ಎದುರಾಗದಂತೆ ಸೂಚಿಸಲಾಗಿದೆ. ಒಂದು ವೇಳೆ ಏನಾದರೂ ಸಮಸ್ಯೆಯಾದರೆ ಆಯಾ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next