ಚಿಕ್ಕಮಗಳೂರು: ಕೋವಿಡ್ 19 ಸೋಂಕು ನಿಯಂತ್ರಣದ ಸಲುವಾಗಿ ಜಿಲ್ಲೆಯಲ್ಲಿ ಜಾರಿಯಲ್ಲಿರುವ ಸಂಪೂರ್ಣ ಲಾಕ್ ಡೌನ್ ನ್ನು ಮುಂದುವರಿಸಲು ನಿರ್ಧರಿಸಲಾಗಿದೆ. ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರು ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.
ಜೂನ್ 1ರ ಬೆಳಗ್ಗೆ 6 ಗಂಟೆ ವರೆಗೆ ಲಾಕ್ ಡೌನ್ ಮುಂದುವರಿಕೆ ಮಾಡಲಾಗಿದೆ. ಆದರೆ ಜನರ ಅಗತ್ಯಗಳಿಗಾಗಿ ಮಾರ್ಗಸೂಚಿಯಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ದಿನಸಿ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.
ಬೆಳಗ್ಗೆ 6 ರಿಂದ 10ರವರೆಗೆ ಗೊಬ್ಬರ, ಬಿತ್ತನೆ ಬೀಜಗಳ ಖರೀದಿ ಗ್ರಾಮೀಣ ಪ್ರದೇಶದಲ್ಲಿ ಅವಕಾಶ ನೀಡಲಾಗಿದೆ. ಆದರೆ ಹಳ್ಳಿಯಿಂದ ನಗರಗಳಿಗೆ ಸಂಚಾರ ಮಾಡಲು ಅವಕಾಶವಿಲ್ಲ. ಗ್ರಾಮೀಣ ಭಾಗದ ವ್ಯಾಪ್ತಿಯಲ್ಲೇ ಖರೀದಿ ನಡೆಸಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ:ರಾಜೀನಾಮೆ ನಂತರ ಮಾಲಿ ಅಧ್ಯಕ್ಷ, ಪ್ರಧಾನಿಯನ್ನು ಬಿಡುಗಡೆಗೊಳಿಸಿದ ಮಿಲಿಟರಿ
ಜೂನ್ ಒಂದರವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದ್ದು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಪೂರ್ಣ ಲಾಕ್ ಡೌನ್ ಮುಂದುವರಿಸಲಾಗಿದೆ. ನಗರದ ಪ್ರದೇಶದಲ್ಲಿ ದಿನಸಿ ವಸ್ತುಗಳ ಹೋಂ ಡೆಲಿವರಿಗೆ ಅವಕಾಶ ನೀಡಲಾಗಿದ್ದು, ಹೋಟೆಲ್ ಗಳಿಗೂ ಹೋಂ ಡೆಲಿವರಿಗೆ ಅವಕಾಶ ನೀಡಲಾಗಿದೆ.