Advertisement

ಜೂ.4ರಿಂದ ಬೆಳಗಾವಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ

02:10 PM Jun 01, 2021 | Team Udayavani |

ಬೆಳಗಾವಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಇದೇ ಜೂನ್ 4 ರ ಬೆಳಿಗ್ಗೆ 6 ಗಂಟೆಯಿಂದ ದಿನಾಂಕ 7ರ ಬೆಳಿಗ್ಗೆ6 ರವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.

Advertisement

ಈ ಆದೇಶ ಅಗತ್ಯ ಸೇವೆಗಳಾದ ಆಸ್ಪತ್ರೆ, ಔಷಧ ಪೂರೈಕೆ ಹಾಗೂ ಖರೀದಿಗೆ ಮತ್ತು ಹಾಲು ಖರೀದಿಗೆ ಅನ್ವಯಿಸುವುದಿಲ್ಲ. ಆನ್ ಲೈನ್ ಫುಡ್ ಪಾರ್ಸಲ್ ಗಳಿಗೆ, ಕಚೇರಿಗಳಿಗೆ ಕೆಲಸಕ್ಕೆ ಹೋಗುವವರಿಗೆ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ:ಬಿಜೆಪಿಯಲ್ಲಿ ‘ಪವರ್ ಬೆಗ್ಗರ್ಸ್’ ಹೆಚ್ಚಾಗಿದ್ದಾರೆ: ಡಿ.ಕೆ.ಶಿವಕುಮಾರ್

ಇದಲ್ಲದೆ ರೈತ ಸಂಪರ್ಕ ಕೇಂದ್ರಕ್ಕೆ ಬರುವ ರೈತರು ಆಯಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಅನುಮತಿ ಪತ್ರ ಪಡೆದಿರಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಈ ಅವಧಿಯಲ್ಲಿ ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ತೆರೆಯಲು ಅವಕಾಶ ಮಾಡಿಕೊಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Advertisement

ಇದನ್ನೂ ಓದಿ: ನಮಗ್ಯಾಕೆ ಇಷ್ಟೊಂದು ಹೋಮ್ ವರ್ಕ್ ಮೋದಿ ಸಾಬ್ : ಪ್ರಧಾನಿಗೆ ಆರರ ಬಾಲಕಿ ಪ್ರಶ್ನೆ

Advertisement

Udayavani is now on Telegram. Click here to join our channel and stay updated with the latest news.

Next