Advertisement

50ಕ್ಕೂ ಹೆಚ್ಚು ಪಾಸಿಟಿವ್‌ ಪ್ರಕರಣಗಳಿರುವ ಗ್ರಾಮ 5ದಿನ ಲಾಕ್‌ಡೌನ್‌: ಉಡುಪಿ ಜಿಲ್ಲಾಧಿಕಾರಿ

08:59 PM May 31, 2021 | Team Udayavani |

ಉಡುಪಿ : ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯ ವ್ಯಾಪ್ತಿಯ ಗ್ರಾ.ಪಂ.ಗಳಲ್ಲಿ 50ಕ್ಕಿಂತ ಹೆಚ್ಚು ಪಾಸಿಟವ್‌ ಪ್ರಕರಣಗಳು ಬಂದ ಗ್ರಾಮಗಳನ್ನು ಜೂ.2ರಿಂದ 5 ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್‌ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಜಿಲ್ಲಾಧಿಕಾರಿಗಳು ನಡೆಸಿದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲು ಸೂಚಿಸಲಾಗಿದ್ದು, ಜಿಲ್ಲೆಯಲ್ಲಿ ಪ್ರಸ್ತುತ 35 ಗ್ರಾ.ಪಂ.ಗಳಲ್ಲಿ 50 ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ಈ ಗ್ರಾ.ಪಂ.ಗಳನ್ನು ಬುಧವಾರದಿಂದ ರವಿವಾರದವರೆಗೆ ಸಂಪೂರ್ಣ ಲಾಕ್‌ ಡೌನ್‌ ಮಾಡಲಾಗುವುದು. ಈ ಅವಧಿಯಲ್ಲಿ ಔಷಧ ಅಂಗಡಿ ಮತ್ತು ಕೃಷಿ ಚಟುವಟಿಕೆಗೆ ಮಾತ್ರ ಅವಕಾಶವಿದ್ದು ಗ್ರಾಮಗಳ ಗಡಿಯನ್ನು ಬ್ಯಾರಿಕೇಡ್‌ ಮೂಲಕ ಮುಚ್ಚಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್‌ ತಿಳಿಸಿದರು.

ಇದನ್ನೂ ಓದಿ :ಬಂದೂಕಿನಿಂದ ಹೊಡೆದು ಕಾಡೆಮ್ಮೆ ಸಾವು : ಆರೋಪಿಗಳ ಪತ್ತೆಗೆ ಬಲೆ ಬೀಸಿದ ಅರಣ್ಯ ಅಧಿಕಾರಿಗಳು

ಜಿಲ್ಲೆಯಲ್ಲಿ 519 ಕೊರೊನಾ ಪಾಸಿಟವ್‌
ಉಡುಪಿ : ಜಿಲ್ಲೆಯಲ್ಲಿ ಮಂಗಳವಾರ 519 ಕೊರೊನಾ ಪಾಸಿಟಿವ್‌ ಪ್ರಕರಣ ದಾಖಲಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ 4 ಮಂದಿ ಮೃತಪಟ್ಟಿದ್ದಾರೆ. ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ 765 ಮಂದಿ ಬಿಡುಗಡೆಯಾಗಿದ್ದಾರೆ.

ಜಿಲ್ಲೆಯಲ್ಲಿ 89, 72, 49 ಪ್ರಾಯದ ಮೂವರು ಪುರುಷರು, 78 ವರ್ಷದ ಓರ್ವ ಮಹಿಳೆಯರು ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ 333ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ 231, ಕುಂದಾಪುರದಲ್ಲಿ 174, ಕಾರ್ಕಳದಲ್ಲಿ 113, ಅನ್ಯಜಿಲ್ಲೆಯ 1 ಮಂದಿಗೆ ಸೋಂಕು ದೃಢಪಟ್ಟಿದೆ. 5,092 ಸಕ್ರಿಯ ಪ್ರಕರಣಗಳಿದ್ದು, ಇಲ್ಲಿಯವರೆಗೆ ಒಟ್ಟು 58,727 ಪಾಸಿಟಿವ್‌ ಪ್ರಕರಣ ದಾಖಲಾಗಿದೆ. ಮೇ 30ರಂದು 2,873 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಮಂಗಳವಾರ 5,294 ಮಂದಿ ಮೊದಲ ಹಾಗೂ 231 ಮಂದಿ ಎರಡನೇ ಡೋಸ್‌ ಲಸಿಕೆ ಪಡೆದುಕೊಂಡರು.

Advertisement
Advertisement

Udayavani is now on Telegram. Click here to join our channel and stay updated with the latest news.

Next