Advertisement
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 15ನೇ ಹಣಕಾಸು ಯೋಜನೆಯಡಿ ಅನುದಾನದ ಕಾಮಗಾರಿಗಳನ್ನು ಪರಿಶೀಲಿಸಬೇಕು. ಯಾವುದೇ ಹಂತದಲ್ಲಿ ಅವ್ಯವಹಾರವಾಗದಂತೆ ತಾಲೂಕು ಪಂಚಾಯತ್ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.
Related Articles
Advertisement
ಶೌಚಾಲಯ ನಿರ್ಮಾಣ: ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಜಿಲ್ಲಾ ಪಂಚಾಯತ್ ಹಾಗೂ ನರೇಗಾ ಯೋಜನೆಯಡಿ ಎಲ್ಲ ನೆರವು ನೀಡಲಾಗುತ್ತಿದೆ. ಹೊಸದಾಗಿ ನಿರ್ಮಿಸಲಾದ ಶೌಚಾಲಯಗಳ ನಿರ್ವಹಣೆಗೆ ಆಯಾ ಶಾಲಾ ಮಂಡಳಿ ಅಥವಾ ಮುಖ್ಯೋಪಾಧ್ಯಾಯರು ಅಗತ್ಯ ಕ್ರಮ ವಹಿಸಬೇಕು. ಪ್ರತಿ ಶಾಲೆಯಲ್ಲಿ ಮೂಲಸೌಕರ್ಯ ಇರುವಂತೆ ನೋಡಿಕೊಳ್ಳುವುದು ಮುಖ್ಯೋಪಾಧ್ಯಾಯರ ಕರ್ತವ್ಯವಾಗಿದೆ ಎಂದರು.
ಜಿಲ್ಲೆಯ ಎಲ್ಲ ಅಂಗನವಾಡಿ ಕಟ್ಟಡಗಳ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಅಂಗನವಾಡಿಗೆ ಪೂರೈಕೆಯಾಗುವ ಆಹಾರ ಪದಾರ್ಥಗಳು ಮತ್ತು ಧಾನ್ಯಗಳ ಗುಣಮಟ್ಟವನ್ನು ಹಾಗೂ ಮಕ್ಕಳ ಹಾಜರಾತಿಯನ್ನು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸೂಚನೆ ನೀಡಿದರು.
ಅಥಣಿ ತಾಲೂಕಿನ ಕೊಕಟನೂರಿನಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಪಶು ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಕೆರೆ ನಿರ್ಮಾಣ, ಸಸಿ ನೆಡುವುದು ಸೇರಿದಂತೆ ಮಳೆ ನೀರು ಕೊಯ್ಲು ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಸಲಹೆ ನೀಡಿದರು.
ಡಿಭಾಗದ ಜನರಿಗೆ ತುರ್ತು ಚಿಕಿತ್ಸೆ ಒದಗಿಸಲು ಅನುಕೂಲವಾಗುವಂತೆ ಗಡಿಭಾಗದಲ್ಲಿ ಒಂದು ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪಿಸುವ ಅಗತ್ಯವಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಸಿದ್ಧಪಡಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಸಂಜೀವ ಪಾಟೀಲ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿರುವ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಶೌಚಾಲಯ ಮತ್ತಿತರ ಸೌಲಭ್ಯಗಳನ್ನು ಒದಗಿಸಬೇಕಿದೆ. ಈ ನಿಟ್ಟಿನಲ್ಲಿ ಯಾವುದಾದರೂ ಯೋಜನೆಯಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಡಾ| ಪ್ರವೀಣ ಬಾಗೇವಾಡಿ, ಡಿಸಿಪಿ ರವೀಂದ್ರ ಗಡಾದಿ, ಜಿಲ್ಲಾ ನಗರಾಭಿವೃದ್ಧಿ ಯೋಜನಾ ಕೋಶದ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಡಿಎಚ್‌ಒ ಡಾ| ಮಹೇಶ್ ಕೋಣಿ ಉಪಸ್ಥಿತರಿದ್ದರು.