Advertisement

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಪೂರ್ಣ ಸಿದ್ಧತೆ

04:32 PM Mar 27, 2022 | Team Udayavani |

ಕಾರಟಗಿ: ತಾಲೂಕಿನಲ್ಲಿ ಮಾ. 28ರಿಂದ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪಟ್ಟಣದ ಕರ್ನಾಟಕ ಪಬ್ಲಿಕ್‌ ಸ್ಕೂಲ್‌, ಗ್ರೀನ್‌ ವ್ಯಾಲಿ ರೂರಲ್‌ ಪ್ರೌಢಶಾಲೆ, ಶ್ರೀ ಶರಣ ಬಸವೇಶ್ವರ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪರೀಕ್ಷಾ ಸಿದ್ಧತಾ ಕಾರ್ಯಗಳು ಭರದಿಂದ ನಡೆದಿವೆ.

Advertisement

ಕೋವಿಡ್‌ ಕರಿಛಾಯೆ ಇಲ್ಲದಿದ್ದರೂ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್‌ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಿದ್ಧತೆ ಕೈಗೊಂಡಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಮಾಹಿತಿ ನೀಡಿ, ಕಾರಟಗಿ, ಗಂಗಾವತಿ, ಕನಕಗಿರಿ ತಾಲೂಕು ಸೇರಿ ಒಟ್ಟು 7944 ವಿದ್ಯಾರ್ಥಿಗಳು ಆಯಾ ತಾಲೂಕಿನ 29 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ಖಾಸಗಿ ಅಭ್ಯರ್ಥಿಗಳಿಗಾಗಿ ಗಂಗಾವತಿಯಲ್ಲಿ ಒಂದು ಕೇಂದ್ರ ಸ್ಥಾಪಿಸಲಾಗಿದೆ. ಕಾರಟಗಿ ತಾಲೂಕಿನಲ್ಲಿ 7 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು. ಈಗಾಗಲೇ ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್‌ ಮಾಡುವ ಮೂಲಕ ಸಿದ್ಧತಾ ಕಾರ್ಯ ನಡೆಸಿದ್ದಾರೆ. ಕೋವಿಡ್‌ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ನಿಟ್ಟಿನಲ್ಲಿ ಮೂರು ತಾಲೂಕಿನ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಪರೀಕ್ಷಾರ್ಥಿಗಳ ಆರೋಗ್ಯ ತಪಾಸಣೆಗೂ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್‌ ಭದ್ರತೆಯೊಂದಿಗೆ ಎಲ್ಲಾ ಅಗತ್ಯ ಮುಂಜಾಗ್ರತೆ ವಹಿಸಲಾಗಿದೆ ಎಂದರು.

ಈ ಕುರಿತು ಕರ್ನಾಟಕ ಪಬ್ಲಿಕ್‌ ಶಾಲೆಯ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಾದ ಪ್ರಾಚಾರ್ಯ ವಿಜಯಕುಮಾರ ಮಾತನಾಡಿ, ತಾಲೂಕಿನಾದ್ಯಂತ 7 ಕಡೆ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ತಾಲೂಕು ಕೇಂದ್ರದಲ್ಲಿ ಕರ್ನಾಟಕ ಪಬ್ಲಿಕ್‌ ಸ್ಕೂಲ್‌, ಶ್ರೀ ಶರಣಬಸವೇಶ್ವರ ವಿದ್ಯಾ ಸಂಸ್ಥೆ, ನ್ಯಾಶನಲ್‌ ಪಬ್ಲಿಕ್‌ ಸ್ಕೂಲ್‌, ಸಿದ್ದಾಪುರದ ಸರ್ಕಾರಿ ಪ್ರೌಢಶಾಲೆ, ಬೂದಗುಂಪಾ ಸರ್ಕಾರಿ ಪ್ರೌಢಶಾಲೆ, ರವಿನಗರದ ರೆಡ್ಡಿ ವೀರಣ್ಣ ಶಾಲೆ ಮತ್ತು ಸೋಮನಾಳ ಸರಕಾರಿ ಪ್ರೌಢಶಾಲೆ ಸೇರಿದಂತೆ ಈ 7 ಕೇಂದ್ರಗಳಲ್ಲಿ ಒಟ್ಟು 1690 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರದ ಸೂತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next