ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್-19ರ ಸಂದಿಗ್ಧ ಸಂದರ್ಭದ ಪ್ರಸ್ತುತ ದಿನಗಳಲ್ಲಿ ಜಿಲ್ಲೆಯ ವಿವಿಧ ರೈಲ್ವೆ ಯೋಜನೆಗಳು, ಈಗಾಗಲೇ ಕೈಗೊಳ್ಳಲಾಗಿರುವ ಪ್ರಯಾಣಿಕರ ಸೌಲಭ್ಯಗಳನ್ನು ಹೆಚ್ಚಿಸುವ ರೈಲ್ವೆ ಯೋಜನೆಗಳು, ರೈಲ್ವೆ ಮೇಲ್ಸೇತುವೆ ಸೇರಿದಂತೆ ಕಾಮಗಾರಿಗಳು ನಿಗ ದಿತ ಅವಧಿ ಯಲ್ಲಿ ಪೂರ್ಣಗೊಳಿಸುವ ಸಂಬಂಧ ನೈಋತ್ಯ ರೈಲ್ವೆ ವಲಯವಮಹಾಪ್ರಬಂಧಕ ಎ.ಕೆ.ಸಿಂಗ್ ಹಾಗೂ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಂಸದ ಬಿ.ವೈ.ರಾಘವೇಂದ್ರ ಅವರು ವಿಡಿಯೋ ಸಂವಾದ ನಡೆಸಿದರು.
ಬುಧವಾರ ಜಿಲ್ಲಾ ಪಂಚಾಯಿತಿಯ ಸಹ್ಯಾದ್ರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ರೈಲ್ವೆ ಯೋಜನೆಗಳು ಮತ್ತು ಅನುದಾನದ ಲಭ್ಯತೆ ಕುರಿತು ಪ್ರಗತಿ ಪರಿಶೀಲನೆ ವೇಳೆ ಸಂವಾದ ನಡೆಸಿದರು. ಈಗಾಗಲೇ ಆರಂಭಿಸಲಾಗಿರುವ ಎಲ್ಲಾ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಆರಂಭಿಸಿ ಪೂರ್ಣಗೊಳಿಸಬೇಕು. ಅದಕ್ಕಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಸೂಚಿಸಿದರು.
ಮುಂದಿನ ದಿನಗಳಲ್ಲಿ ದೇಶದಾದ್ಯಂತ ರೈಲು ಸಂಚಾರ ಆರಂಭಗೊಳ್ಳುವ ನಿರೀಕ್ಷೆ ಇದ್ದು, ಈಗಿರುವ ರೈಲು ಮಾರ್ಗಗಳು ಮತ್ತು ಸಮಯದಲ್ಲಿ ಬದಲಾವಣೆಯಾಗಬಹುದಾದ ಮಾಹಿತಿ ಇದೆ. ಜಿಲ್ಲೆಯ ಜನರ ಅನುಕೂಲಕ್ಕೆ ಪೂರಕವಾಗಿ ಪ್ರವಾಸಿಗರು, ಉದ್ಯಮಿಗಳು, ವಿಶೇಷವಾಗಿ ಕೈಗಾರಿಕೋದ್ಯಮಿಗಳುಹಾಗೂ ವಾಣಿಜ್ಯ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು ರೈಲ್ವೆ ಸಂಚಾರ ಎಂದಿನಂತೆ ಮುಂದುವರೆಸುವ ಅಗತ್ಯಕ್ಕೆ ತಕ್ಕಂತೆ ಸಮಯ ಬದಲಾವಣೆ ಮಾಡುವ ಬಗ್ಗೆಯೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿರುವುದಾಗಿ ಸಂಸದರು ತಿಳಿಸಿದರು.
ಈಗಾಗಲೇ ಸ್ಥಗಿತಗೊಳಿಸಿರುವ ರೈಲುಗಳನ್ನು ಕೂಡಲೇ ಪುನರಾರಂಭಿಸುವಂತೆ ಹಾಗೂ ಪ್ರತಿದಿನ ಬೆಳಿಗ್ಗೆ ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಸಂಚರಿಸುವ ಜನಶತಾಬ್ಧಿ ರೈಲನ್ನು ಯಶವಂತಪುರದಿಂದ ಮುಖ್ಯ ನಿಲ್ದಾಣಕ್ಕೆ ಮುಂದುವರೆಸುವ ಬಗ್ಗೆಯೂ ಸಮಾಲೋಚನೆ ನಡೆಸಲಾಗಿದೆ. ಚೆನ್ನೈ-ಶಿವಮೊಗ್ಗ ತತ್ಕಾಲ್ ರೈಲನ್ನು ಶಾಶ್ವತವಾಗಿ ಸಂಚರಿಸುವಂತೆ ಮನವಿ ಮಾಡಲಾಗಿದೆ. ಮುಂದಿನ ಒಂದು ವಾರದಲ್ಲಿಶಿವಮೊಗ್ಗ-ರಾಣೆಬೆನ್ನೂರು ಮಾರ್ಗದ ಸರ್ವೆà ಹಾಗೂ ಭೂಸ್ವಾಧೀನ ಕಾರ್ಯ ಪೂರ್ಣಗೊಳ್ಳಲಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಅಲ್ಲದೇ, ಕೋಟೆಗಂಗೂರುರೈಲ್ವೆ ಟರ್ಮಿನಲ್ ನಿರ್ಮಾಣಕ್ಕೆ ಸಂಬಂಧಿ ಸಿದಂತೆ ಮುಂದಿನ ವಾರದೊಳಗಾಗಿ ಭೂಸ್ವಾಧೀನ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯ ನಾಲ್ಕು ಪ್ರಮುಖ ಸ್ಥಳಗಳಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಮಂಜೂರಾತಿ ದೊರೆತಿದ್ದು, ರಾಜ್ಯ ಸರ್ಕಾರ ವತಿಯಿಂದ ಅಗತ್ಯ ಸಹಕಾರ ದೊರೆತಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಮುಂದಿನ 15ದಿನಗಳಲ್ಲಿ ಕಾಮಗಾರಿಗಳಿಗೆ ಶಂಕುಸ್ಥಾಪನೆನೆರವೇರಿಸಲಾಗುವುದು. ಇದಕ್ಕೆ ಪೂರಕವಾಗಿ ಕೇಂದ್ರದಿಂದಲೂ ಅನುದಾನ ಹಾಗೂ ಅಗತ್ಯ ನೆರವುನೀಡುವಂತೆ ಈ ಸಂಬಂಧ ಕೇಂದ್ರ ರೈಲ್ವೆ ಸಚಿವರೊಂದಿಗೆ ಸಮಾಲೋಚಿಸಿರುವುದಾಗಿ ತಿಳಿಸಿದರು. ಸಿಎಂ ರೈಲ್ವೆ ಸಲಹೆಗಾರ ಶ್ರೀಧರಮೂರ್ತಿ, ನೈಋತ್ಯ ರೈಲ್ವೆಯ ವಿಭಾಗೀಯ ಸಹಾಯಕ ಅಭಿಯಂತರ ಟಿ.ಆರ್. ಬಗಾಡೆ, ಶಾಸಕ ಹರತಾಳು ಹಾಲಪ್ಪ, ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ಸಾಗರ-ಜಂಬಗಾರು ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ ಮತ್ತೂಂದು ಸುಸಜ್ಜಿತ ನಿಲ್ದಾಣವನ್ನು ನಿರ್ಮಿಸಲು ಅನುದಾನ ಒದಗಿಸುವಂತೆ ಹಾಗೂ ಕುಂಸಿ-ಅರಸಾಳು ನಿಲ್ದಾಣಗಳಲ್ಲಿ ಪ್ರಯಾಣಿಕರ ಸೌಲಭ್ಯಕಲ್ಪಿಸಲು, ಎಕ್ಸ್‌ಪ್ರೆಸ್ ರೈಲುಗಳನ್ನು ನಿಲುಗಡೆಗೊಳಿಸಲು ರೈಲ್ವೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ.
– ಬಿ.ವೈ.ರಾಘವೇಂದ್ರ, ಸಂಸದ