Advertisement

ಮಳೆಗಾಲಕ್ಕೂ ಮುನ್ನ ರಸ್ತೆ ಕಾಮಗಾರಿ ಪೂರ್ಣಗೊಳಿಸಿ

10:55 AM May 19, 2020 | Suhan S |

ಹುಬ್ಬಳ್ಳಿ: ಅವಳಿ ನಗರದಲ್ಲಿ ಲೋಕೋಪಯೋಗಿ ಇಲಾಖೆ, ಸಿಆರ್‌ಎಫ್‌ ಹಾಗೂ ವಿಶೇಷ ಅನುದಾನದಡಿ ನಿರ್ಮಿಸುತ್ತಿರುವ ರಸ್ತೆ ಕಾಮಗಾರಿಗಳನ್ನು ಮಳೆಗಾಲಕ್ಕೂ ಮುನ್ನ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಹೇಳಿದರು.

Advertisement

ರಾಜೀವ ನಗರದಲ್ಲಿ ಲೋಕೋಪಯೋಗಿ ಇಲಾಖೆ 5 ಕೋಟಿ ರೂ. ಅನುದಾನದಡಿ ನಿರ್ಮಿಸುತ್ತಿರುವ ರಸ್ತೆ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು. ಸರಕಾರ ರಚನೆಯಾದ ಹತ್ತು ತಿಂಗಳಲ್ಲಿ ಅವಳಿ ನಗರದ ಮುಖ್ಯ ಹಾಗೂ ಒಳರಸ್ತೆಗಳನ್ನು ನಿರ್ಮಿಸಿ ನಗರದ ಚಿತ್ರಣ ಬದಲು ಮಾಡುವ ಆಶಯ ಸರಕಾರಕ್ಕೆ ಇತ್ತು. ಕೋವಿಡ್ ದಿಂದಾಗಿ ತಾತ್ಕಾಲಿಕವಾಗಿ ರಸ್ತೆ ಕಾಮಗಾರಿಗಳು ಸ್ಥಗಿತಗೊಂಡಿದ್ದವು. ಲಾಕ್‌ಡೌನ್‌ ಸಡಿಲವಾದ ನಂತರ ಈ ಕಾಮಗಾರಿಗಳಿಗೆ ಮರು ಚಾಲನೆ ನೀಡಲಾಗಿದೆ ಎಂದರು.

ಲೋಕೋಪಯೋಗಿ ಇಲಾಖೆಯ 35 ಕೋಟಿ ಅನುದಾನದಲ್ಲಿ ಹುಬ್ಬಳ್ಳಿ ನಗರದ ಪ್ರಮುಖ ಪ್ರದೇಶಗಳ ಒಳ ರಸ್ತೆಗಳನ್ನು ಮುಖ್ಯ ರಸ್ತೆಗೆ ಸಂಪರ್ಕಿಸುವ ಕಾರ್ಯ ಮಾಡಲಾಗುತ್ತಿದೆ. ನೆರೆ ಹಾವಳಿಯಲ್ಲಿ ಹಾನಿಯಾದ ಸೇತುವೆಗಳ ನಿರ್ಮಾಣಕ್ಕಾಗಿ 8 ಕೋಟಿ ವಿಶೇಷ ಅನುದಾನ ಸಹ ನೀಡಲಾಗಿದೆ. ಇದರಲ್ಲಿ 3 ಸೇತುವೆಗಳ ಕಾರ್ಯ ಪೂರ್ಣಗೊಂಡಿದೆ. ವಾರ್ಡ್‌ ನಂಬರ್‌ 35ರಲ್ಲಿ 15 ಕೋಟಿ ವೆಚ್ಚದಲ್ಲಿ ಎಲ್ಲಾ ರಸ್ತೆಗಳ ನಿರ್ಮಾಣ, ಡಾಂಬರೀಕರಣ ಹಾಗೂ ಕಾಂಕ್ರೀಟಿಕರಣಕ್ಕೆ ಚಾಲನೆ ನೀಡಲಾಗಿದೆ. ನಗರವನ್ನು ಸಂಪರ್ಕಿಸುವ ಮುಖ್ಯ ರಸ್ತೆಗಳ ಅಗಲೀಕರಣ, ವರ್ತುಲ ರಸ್ತೆ ಕಾಮಗಾರಿಗಳು ಬಹುತೇಕ ಮುಗಿಯುವ ಹಂತಕ್ಕೆ ಬಂದಿವೆ. ಫ್ಲೆ$çಓವರ್‌ ಹಾಗೂ ಓವರ್‌ ಬ್ರಿಡ್ಜ್ಗಳ ನಿರ್ಮಾಣ ಬಾಕಿ ಇದೆ ಎಂದು ತಿಳಿಸಿದರು.

ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ ಸಿ.ವಿ. ಪಾಟೀಲ, ಪಾಲಿಕೆ ಮಾಜಿ ಸದಸ್ಯ ಮಹೇಶ ಬುರಲಿ, ಗುತ್ತಿಗೆದಾರ ಎಂ.ಬಿ. ಕಲ್ಲೂರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next