Advertisement

2024ರ ವೇಳೆಗೆ ಕಲ್ಲಿದ್ದಲು ಆಮದು ಸಂಪೂರ್ಣ ಸ್ಥಗಿತ: ಜೋಶಿ

09:59 AM Jan 13, 2020 | sudhir |

ರಾಯಚೂರು: 2024ರ ವೇಳೆಗೆ ಕಲ್ಲಿದ್ದಲು ಆಮದು ಸಂಪೂರ್ಣ ನಿಲ್ಲಿಸುವ ಮೂಲಕ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ದಿಟ್ಟ ಹೆಜ್ಜೆಗಳನ್ನಿಟ್ಟಿದೆ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

Advertisement

ಪತ್ರಕರ್ತರೊಂದಿಗೆ ಮಾತನಾಡಿದ ಅವರು 2024ರ ವೇಳೆಗೆ ಒಂದು ಶತಕೋಟಿ ಟನ್‌ ಕಲ್ಲಿದ್ದಲು ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ವಿದೇಶಗಳಿಂದ ಕಲ್ಲಿದ್ದಲು ಆಮದನ್ನು ಕ್ರಮೇಣವಾಗಿ ಸ್ಥಗಿತಗೊಳಿಸಲಾಗುವುದು.

ದೇಶದಲ್ಲಿರುವ 204 ಕಲ್ಲಿದ್ದಲು ಬ್ಲಾಕ್‌ಗಳನ್ನು ಸುಪ್ರೀಂ ಕೋರ್ಟ್‌ ಸೂಚನೆ ಮೇರೆಗೆ ರದ್ದುಪಡಿಸಲಾಗಿತ್ತು. ಈ ಕುರಿತು ಗಣಿಗಳ ಸ್ಥಿತಿಗತಿ ಕುರಿತು ಸುಪ್ರೀಂ ಕೋರ್ಟ್‌ ಮಾಹಿತಿ ಕೇಳಿತ್ತು. ಅದರಲ್ಲಿ 89 ಗಣಿಗಳಿಗೆ ಅನುಮತಿ ನೀಡಲಾಗಿದೆ.

ಕಾನೂನು ತಿದ್ದುಪಡಿ ಮಾಡುವ ಮೂಲಕ ಕೆಲವು ಷರತ್ತುಗಳನ್ನು ಬದಲಿಸಲಾಗುತ್ತಿದೆ. ವಾಣಿಜ್ಯ ಉದ್ದೇಶದಿಂದ ನಡೆಸಲಾಗುತ್ತಿದ್ದ 334 ಕಲ್ಲಿದ್ದಲು ಗಣಿಗಳ ಅನುಮತಿ ರದ್ದು ಮಾಡಲಾಗುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next