Advertisement

24*7 ಕಾಮಗಾರಿ 2 ವರ್ಷದಲ್ಲಿ ಪೂರ್ಣಗೊಳಿಸಿ

11:38 AM Jun 23, 2022 | Team Udayavani |

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರಕ್ಕೆ 24/7 ಕುಡಿಯುವ ನೀರಿನ ಸರಬರಾಜು ಯೋಜನೆಯನ್ನು ಮುಂದಿನ ಎರಡು ವರ್ಷಗಳ ಅವಧಿಯೊಳಗೆ ಸಂಪೂರ್ಣ ಕಾರ್ಯರೂಪಕ್ಕೆ ತರಬೇಕೆಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರ‌ಹ್ಲಾದ ಜೋಶಿ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು.

Advertisement

ಹು-ಧಾಗೆ 24/7 ಕುಡಿಯುವ ನೀರಿನ ಸರಬರಾಜು ಕುರಿತು ಬುಧವಾರ ನವದೆಹಲಿಯಲ್ಲಿ ಎಲ್‌ ಆ್ಯಂಡ್‌ ಟಿ ಅಧಿಕಾರಿಗಳೊಂದಿಗೆ ಸವಿಸ್ತಾರವಾಗಿ ಚರ್ಚಿಸಿದ ಸಚಿವರು, ಸುಮಾರು 1,200 ಕೋಟಿ ರೂ. ವೆಚ್ಚದ ಯೋಜನೆ ಆಗಿದ್ದು, ವಿಶ್ವ ಬ್ಯಾಂಕ್‌ನಿಂದ ಶೇ. 67, ಮಹಾನಗರ ಪಾಲಿಕೆಯಿಂದ ಶೇ. 26, ರಾಜ್ಯ ಸರಕಾರದಿಂದ ಶೇ.7 ಹಣ ಹೂಡಿಕೆಯಾಗಲಿದೆ. ಎಲ್‌ ಆ್ಯಂಡ್‌ ಟಿ ಕಂಪನಿಯೊಂದಿಗೆ ಒಪ್ಪಂದವಾಗಿರುವ ಈ ಯೋಜನೆಯನ್ನು ಆದಷ್ಟು ಬೇಗ ಕಾರ್ಯರೂಪಕ್ಕೆ ತರಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಹು-ಧಾ ಮಹಾನಗರ ಪಾಲಿಕೆಯ ಕುಡಿಯುವ ನೀರು ಸರಬರಾಜು ಯೋಜನೆ ನಿರ್ವಹಣೆ ಮತ್ತು ಸುಧಾರಣೆ ಯೋಜನೆ ಕೈಗೆತ್ತಿಕೊಂಡಿರುವ ಎಲ್‌ ಆ್ಯಂಡ್‌ ಟಿ ಕಂಪನಿ ಮೇಲೆ ನಮಗೆ ವಿಶ್ವಾಸವಿಲ್ಲ. ಈ ಕಂಪನಿಯ ಅಧಿಕಾರಿಗಳು ವಾರ್ಡ್‌ ಜನರ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ಸರಿಯಾಗಿ ನೀರು ಪೂರೈಸುತ್ತಿಲ್ಲವೆಂದು ಕಳೆದ ವಾರ ಪಾಲಿಕೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಸಚಿವ ಜೋಶಿಯವರು ತಕ್ಷಣ ಸ್ಪಂದಿಸಿ ನವದೆಹಲಿಯ ತಮ್ಮ ಕಚೇರಿಯಲ್ಲಿ ಸಭೆ ಕರೆದು, ವಿಶ್ವ ಬ್ಯಾಂಕ್‌ ನೆರವಿನ ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆಯಡಿ ಮಹಾನಗರದಲ್ಲಿ 24/7 ನಿರಂತರ ನೀರು ಸರಬರಾಜು ಕಾಮಗಾರಿ ಅನುಷ್ಠಾನದ ಕುರಿತು ನಿರ್ವಾಹಕರಾದ ಮೆ. ಲಾರ್ಸನ್‌ ಆ್ಯಂಡ್‌ ಟಬ್ರೂ (ಎಲ್‌ ಆ್ಯಂಡ್‌ ಟಿ) ಕಂಪನಿ ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡು ತಕ್ಷಣ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಅವಳಿ ನಗರದ ಜನತೆಗೆ ನೀರು ಸರಬರಾಜು ಮಾಡಬೇಕೆಂದು ಸೂಚಿಸಿದರು.

ಹುಬ್ಬಳ್ಳಿ-ಧಾರವಾಡದಲ್ಲಿ ದೊಡ್ಡ ಪ್ರ‌ಮಾಣದಲ್ಲಿ ಕೇಂದ್ರ‌ ಸರಕಾರದ ಯೋಜನೆಗಳು ಜಾರಿಯಾಗುತ್ತಿವೆ. ಸ್ಮಾಟ್‌ ìಸಿಟಿ, ವಿಮಾನ ನಿಲ್ದಾಣ ಅಭಿವೃದ್ಧಿ, ಕೇಂದ್ರ ರಸ್ತೆ ನಿಧಿ ಅಡಿ ರಸ್ತೆ ನಿರ್ಮಾಣ, ತ್ವರಿತ ಬಸ್‌ ಸಾರಿಗೆ ಸೇವೆ ಯೋಜನೆಗಳು ಕಾರ್ಯರೂಪಕ್ಕೆ ಬಂದಿವೆ. ದೊಡ್ಡ ಕೈಗಾರಿಕೆಗಳೂ ಆಗಮಿಸುತ್ತಿವೆ. ಕೈಗಾರಿಕೆಗಳ ನೀರಿನ ಅವಶ್ಯಕತೆ ಸಮರ್ಪಕವಾಗಿ ಪೂರೈಸಲು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

Advertisement

ಕಾಮಗಾರಿ ವೇಳೆ ರಸ್ತೆ ಅಗೆದು ಪೈಪ್‌ ಲೈನ್‌ ಅಳವಡಿಸಿದ ಮೇಲೆ ಬೇಗ ರಸ್ತೆ ಮರು ನಿರ್ಮಿಸಬೇಕು. ಹಂತ ಹಂತವಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ವಾರ್ಡ್‌ವೊಂದರ ಕಾಮಗಾರಿ ಪೂರ್ಣಗೊಳಿಸಿದ ಮೇಲೆ ಇನ್ನೊಂದು ಕಡೆ ಕಾಮಗಾರಿ ಆರಂಭಿಸಬೇಕು. ಕಾಮಗಾರಿ ವೇಳೆ ಸಾರ್ವಜನಿಕರಿಗೆ ತೊಂದರೆಯಾಗಿ ದೂರುವಂತಾಗಬಾರದು ಎಂದು ಸೂಚನೆ ನೀಡಿದರು.

ಕರ್ನಾಟಕದ ಕೈಮಗ್ಗ ಮತ್ತು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕ ಅಮೃತ ದೇಸಾಯಿ, ಹು-ಧಾ ಮಹಾನಗರ ಪಾಲಿಕೆಯ ಮಹಾಪೌರ ಈರೇಶ ಅಂಚಟಗೇರಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪಾಲಿಕೆ ಆಯುಕ್ತ ಡಾ|ಗೋಪಾಲಕೃಷ್ಣ ಬಿ., ಎಲ್‌ ಆ್ಯಂಡ್‌ ಟಿಯ ಹಿರಿಯ ಅಧಿಕಾರಿಗಳು ಮೊದಲಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next