Advertisement
ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಕಾಂತ ಕುಲಕರ್ಣಿ ಮಾತನಾಡಿ, ನಿರ್ಮಿತಿ ಕೇಂದ್ರಕ್ಕೆ 2014-15ರಿಂದ ಇಲ್ಲಿಯವರೆಗೆ ಒಟ್ಟು 87 ಅಂಗನವಾಡಿ ಕೇಂದ್ರ ವಹಿಸಲಾಗಿದೆ. ಅದರಲ್ಲಿ 14 ಅಂಗನವಾಡಿ ಕೇಂದ್ರಪೂರ್ಣಗೊಂಡಿದ್ದು, 30 ರದ್ದುಪಡಿಸಲಾಗಿದೆ.
ನೀಡುತ್ತಾರೆ. ಆದರೆ, ಫೂರ್ಣಗೊಳಿಸುವುದಿಲ್ಲ. ಈ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿ ಪರಿಶೀಲಿಸಲು ಸಭೆ ನಡೆಸಬೇಕು ಎಂದು ಜಿಪಂ ಸದಸ್ಯರು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷರು, ವಾರದೊಳಗೆ ಸಭೆ ಕರೆಯಲಾಗುವುದು ಎಂದು ಹೇಳಿದರು.
Related Articles
Advertisement
ಜಿಲ್ಲೆಯ ಪ್ರಾಥಮಿಕ ಶಾಲೆಗಳಿಗೆ 1,920 ಅತಿಥಿ ಶಿಕ್ಷಕರ ನೇಮಕಾತಿಗೆ ಇಲಾಖೆಯಿಂದ ಮಂಜೂರಾತಿ ಸಿಕ್ಕಿದೆ. ಈಗಾಗಲೇ 1,600 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. 320 ಗಣಿತ ಮತ್ತು ಇಂಗ್ಲಿಷ್ ಶಿಕ್ಷಕರು ಬೇಕು. ಪ್ರೌಢಶಾಲೆಗಳಲ್ಲಿ 119 ಅತಿಥಿ ಶಿಕ್ಷಕರಲ್ಲಿ 105 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಸಭೆಗೆ ವಿವರಿಸಿದರು.
ಜಿಪಂ ಅಧ್ಯಕ್ಷರು ಮಾತನಾಡಿ, ಎಸ್‌ಎಸ್‌ಎಲ್‌ಸಿ ಫಲಿತಾಂಶ ಕಡಿಮೆ ಇರುವುದರಿಂದ ಈ ಬಾರಿಯ ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಹಿಂದಿನ ಪ್ರಶ್ನೆಪತ್ರಿಕೆಗಳನ್ನು ತರಿಸಿಕೊಂಡು ಹೆಚ್ಚುವರಿ ತರಗತಿ ತೆಗೆದುಕೊಳ್ಳಬೇಕು. ಇದಕ್ಕೆ ಬೇಕಾದ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.
ಕಡಿಮೆ ಫಲಿತಾಂಶ ಬಂದಾಗ ಡಿಡಿಪಿಐ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಮಾತ್ರ ಹೊಣೆಗಾರರನ್ನಾಗಿ ಮಾಡದೆ ಆಯಾ ಶಾಲೆಗಳ ವಿಷಯ ಶಿಕ್ಷಕರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕಿಶನ್ ರಾಠೊಡ ಒತ್ತಾಯಿಸಿದರು.
ಉಪನಿರ್ದೇಶಕರು ಮಾತನಾಡಿ, 2017-18ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಿಗೆ ಡುವೆಲ್ ಡೆಸ್ಕ್ ಸರಬರಾಜು ಮಾಡಲು 14 ಲಕ್ಷ ರೂ. ಬಿಡುಗಡೆಯಾಗಿದೆ. ಎಲ್ಲ 14 ಶಾಲೆಗಳಿಗೆ ಡುವೆಲ್ ಡೆಸ್ಕ್ ಸರಬರಾಜು ಮಾಡಲಾಗಿದೆ.ಪಠ್ಯಪುಸ್ತಕಗಳು ಬಂದಿದ್ದು, 2 ದಿನಗಳಲ್ಲಿ ಎಲ್ಲ ಶಾಲೆಗಳಿಗೆ ಪೂರೈಸಲಾಗುವುದು ಎಂದು ಹೇಳಿದರು. ರವಿವಾರವೂ ಕಾರ್ಯನಿರ್ವಹಿಸಿ ಪಠ್ಯಪೂಸ್ತಕ ಸರಬರಾಜು ಮಾಡಿ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದರು. ಬೆಂಡೆಬೆಂಬಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಸಿಗದೆ ಗರ್ಭಿಣಿ ಸಾವನ್ನಪ್ಪಿದ್ದಾರೆ. ಅಲ್ಲಿನ ವೈದ್ಯ ಸಂತೋಷ ಅವರನ್ನು ವರ್ಗಾವಣೆ ಮಾಡಬೇಕು ಎಂದು ಹಿಂದಿನ ಸಭೆಯಲ್ಲಿ ಸೂಚಿಸಲಾಗಿತ್ತು. ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಉತ್ತರಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ| ಹಬೀಬ್ ಉಸ್ಮಾನ್ ಪಟೇಲ್, ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿರುವೆ. ಇಂದೇ ಆದೇಶ ಮಾಡುತ್ತೇನೆ ಎಂದು ಹೇಳಿದರು. ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ ಬಾಬು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಂ.ಎಸ್.ಅಲ್ಲಾಬಕಷ ಹಾಗೂ ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಗಳ ಅನುಪಾಲನಾ ವರದಿ ಓದಿದರು. ಜಿಪಂ ಉಪಾಧ್ಯಕ್ಷೆ ಚಂದ್ರಕಲಾ ಶರಣಗೌಡ ಹೊಸಮನಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ವಿನೋದ ಪಾಟೀಲ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಸರಸ್ವತಿ ಸುಭಾಷ್‌ಚಂದ್ರ, ಪಂಚಾಯಿತಿ ಸದಸ್ಯರು, ಜಿಪಂ ಉಪ ಕಾರ್ಯದರ್ಶಿ ವಸಂತರಾವ್ ವಿ. ಕುಲಕರ್ಣಿ, ಮುಖ್ಯ ಯೋಜನಾಧಿಕಾರಿ ಗುರುನಾಥ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.