Advertisement

ಅಭಿವೃದ್ಧಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

03:22 PM Jan 09, 2018 | |

ಯಾದಗಿರಿ: ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳನ್ನು ಅಮಾನತುಗೊಳಿಸಲು ಶೀಘ್ರದಲ್ಲಿ ಸರಕಾರಕ್ಕೆ ಶಿಫಾರಸು ಮಾಡುವಂತೆ ಜಿಪಂ ಸಿಇಒ ಡಾ| ಅವಿನಾಶ ಮೆನನ್‌ ರಾಜೇಂದ್ರನ್‌ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದರು.

Advertisement

ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಿರ್ಲಕ್ಷé ವಹಿಸುವ ಅಧಿಕಾರಿಗಳು ನಮಗೆ ಬೇಕಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಸುರಪುರ ವಿಭಾಗದ ಜ್ಯೂನಿಯರ್‌ ಎಂಜಿನಿಯರ್‌
ಸಾದಿಕ್‌ ಅವರು ಸುರಪುರದಲ್ಲಿಯೂ ಕೆಲಸ ಮಾಡುತ್ತಿಲ್ಲ ಮತ್ತು ಪ್ರಭಾರಿಯಾಗಿ ಯಾದಗಿರಿ ನಗರಾಭಿವೃದ್ಧಿ ಕೋಶದಲ್ಲಿ
ನಿಯೋಜನೆಗೊಂಡು ಅಲ್ಲಿಯೂ ಹಾಜರಾಗುತ್ತಿಲ್ಲ ಎಂದು ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ದೂರಿನ
ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವರು ಕೂಡಲೇ ಅವರ ಅಮಾನತಿಗೆ ಶಿಫಾರಸ್ಸು ಪತ್ರ ಕಳುಹಿಸಲು ಸಿಇಒಗೆ ಸೂಚಿಸಿದರು. 

ತ್ತೈಮಾಸಿಕ ಮಹತ್ವದ ಸಭೆ ಇದಾಗಿದ್ದು, ಈ ಸಭೆಗೆ ಉಸ್ತುವಾರಿ ಸಚಿವ ನಾನು, ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿ ಕಾರಿಗಳು ಮತ್ತು ಜಿಪಂ ಸಿಇಒ ಸಭೆಯಲ್ಲಿ ಹಾಜರಾಗಿದ್ದೇವೆ. ಆದರೆ, ಮಾಹಿತಿ ನೀಡಬೇಕಾಗಿರುವ ಕರ್ನಾಟಕ ಗೃಹ ಮಂಡಳಿ ಅಧಿಕಾರಿ ಬಾರದೇ ಇರುವುದಕ್ಕೆ ತೀವ್ರ ಅಸಮಾಧಾನಗೊಂಡ ಸಚಿವರು ಕೂಡಲೇ ಅವರನ್ನು ಅಮಾನತುಗೊಳಿಸಲು ಸರಕಾರಕ್ಕೆ ಶಿಫಾರಸು ಪತ್ರ ಬರೆಯುವಂತೆ ಸಿಇಒಗೆ ಸೂಚನೆ ನೀಡಿದರು.

ವಿವಿಧ ಇಲಾಖೆಗಳಲ್ಲಿನ ಎಸ್‌ಸಿಪಿ/ ಟಿಎಸ್‌ಪಿ (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ) ಯೋಜನೆಯ ಕಾಮಗಾರಿಗಳನ್ನು
ನಿಗದಿತ ಸಮಯದಲ್ಲಿ ಅನುದಾನ ಬಳಸಿಕೊಂಡು ಮುಗಿಸದಿದ್ದರೆ, ಅಂತಹ ಅಧಿಕಾರಿಗಳು ಕಾನೂನಿನ ಪ್ರಕಾರ ಜೈಲಿಗೆ ಹೋಗಬೇಕಾಗುತ್ತದೆ ಎಂದು ಎಚ್ಚರಿಸಿದರು.

Advertisement

2014-15ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಗುರುಮಠಕಲ್‌ನಲ್ಲಿ ಎಸ್‌ಸಿಪಿ/ ಟಿಎಸ್‌ಪಿ ಯೋಜನೆಡಿಯಲ್ಲಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ (ಕೆಆರ್‌ಐಡಿಎಲ್‌) ಮತ್ತು ನಿರ್ಮಿತಿ ಕೇಂದ್ರ ಕೈಗೊಂಡಿರುವ ಯೋಜನೆಗಳ ಕಾಮಗಾರಿಗಳು ಇನ್ನೂ ಪೂರ್ಣಗೊಳ್ಳದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

2015-16ನೇ ಸಾಲಿನ ನಗರಾಭಿವೃದ್ಧಿ ಕೋಶದ ಅಡಿಯಲ್ಲಿನ ನೆನೆಗುದಿಗೆ ಬಿದ್ದ ವಿವಿಧ ಕಾಮಗಾರಿಗಳನ್ನು ಶೀಘ್ರ ಮುಗಿಸಬೇಕು. ಮಾರ್ಚ್‌ ಅಂತ್ಯದೊಳಗೆ ಪ್ರತಿಯೊಂದು ಕಾಮಗಾರಿ ಪೂರ್ಣಗೊಳಿಸಿ ಅಭಿವೃದ್ಧಿಪಡಿಸಬೇಕಾಗಿದೆ. ಟೆಂಡರ್‌ ಕರೆಯದೆ ಬಾಕಿ ಇರುವ ಕಾಮಗಾರಿಗಳಿಗೆ ಅತೀ ಶೀಘ್ರವೇ ಟೆಂಡರ್‌ ಕರೆಯಬೇಕು ಎಂದರು. ನಗರಸಭೆ ಮತ್ತು ಪುರಸಭೆಗಳಲ್ಲಿ 14ನೇ ಹಣಕಾಸು ಯೋಜನೆ ಹಾಗೂ ಎಸ್‌. ಎಫ್‌.ಸಿ ಅನುದಾನದಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ಪ್ರಗತಿ ಕಡಿಮೆ ಇದ್ದು, ಈ ಬಗ್ಗೆ ನಿರ್ಲಕ್ಷ್ಯ ವಹಿಸದೆ ಅಭಿವೃದ್ಧಿ ಕಾಮಗಾರಿಗಳನ್ನು ಚುರುಕಾಗಿಸಬೇಕು.
ಹೊಸ ಕಾಮಗಾರಿಗಳಿಗಾಗಿ ಪ್ರಸ್ತಾವನೆಯನ್ನು ಶೀಘ್ರದಲ್ಲಿಯೇ ಸಲ್ಲಿಸಿ ಎಂದು ಅವರು ತಿಳಿಸಿದರು.

2010-11ನೇ ಸಾಲಿನಲ್ಲಿ ಯಾದಗಿರಿ ನಗರದಲ್ಲಿ ವಿವಿಧ ನಾಯಕರ ಮೂರ್ತಿಗಳಿಗಾಗಿ 60ರಿಂದ 70 ಲಕ್ಷ ರೂ. ಅನುದಾನ ಇಲ್ಲಿಯವರೆಗೆ ಬಳಕೆ ಮಾಡಿಲ್ಲ, ವಿಳಂಬ ಕಾರಣ ಈ ಬಗ್ಗೆ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವಂತೆ ನಗರಸಭೆ ಆಯುಕ್ತರಿಗೆ ಈ ಸಂದರ್ಭದಲ್ಲಿ ಸೂಚಿಸಿದರು.

ಅಂಬೇಡ್ಕರ್‌ ಅಭಿವೃದ್ಧಿ ನಿಮಗಮದ ಯೋಜನೆಗಳ ಬಗ್ಗೆ ಸಚಿವರು ಮಾಹಿತಿ ಕೇಳಿದಾಗ, ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಆಯ್ಕೆಯಾದ ರೈತ ಫಲಾನುಭವಿಗಳ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಸಂಪರ್ಕ ದಗಿಸದಿರುವುದರಿಂದ ಸಮಸ್ಯೆಯಾಗಿದೆ ಎಂದು ಅಧಿ ಕಾರಿಗಳು ಸಭೆಗೆ ತಿಳಿಸಿದರು. ಈ ಸಂದರ್ಭದಲ್ಲಿ ಸಚಿವರು, ಅಗತ್ಯ ವಿದ್ಯುತ್‌ ಪೂರೈಕೆ ಮಾಡುವಂತೆ ಜೆಸ್ಕಾಂ ಇಲಾಖೆ ಅಧಿಕಾರಿಗೆ ಸೂಚಿಸಿದರು. ಕೃಷಿ ಇಲಾಖೆಗೆ ಸಂಬಂಧಿ 
ಸಿದಂತೆ ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯಲ್ಲಿ ರೈತ ಸಂಪರ್ಕ ಕೇಂದ್ರ ಕಟ್ಟಡ ಕಾಮಗಾರಿಗಳನ್ನು
ತುರ್ತು ಮುಗಿಸಬೇಕಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 10 ರೈತ ಸಂಪರ್ಕ ಕಟ್ಟಡ ಕಾಮಗಾರಿಗಳ ಕೈಗೆತ್ತಿಕೊಳ್ಳಲಾಗಿದ್ದು, ಇನ್ನೂ ಪೂರ್ಣಗೊಂಡಿಲ್ಲ. ಕಟ್ಟಡ ಕಾಮಗಾರಿಗಳನ್ನು ಅತೀ ಶೀಘ್ರದಲ್ಲಿ ಮುಗಿಸಬೇಕು ಎಂದು ಜಿಲ್ಲಾ ಕೃಷಿ ಜಂಟಿ ನಿರ್ದೇಶಕಿ ಡಾ| ಚೇತನಾ ಪಾಟೀಲ ತಿಳಿಸಿದರು.

ಸಭೆಯಲ್ಲಿ ಜಿಪಂ ಅಧ್ಯಕ್ಷ ಬಸರೆಡ್ಡಿಗೌಡ ಮಾಲಿಪಾಟೀಲ ಅನಪುರ, ಶಾಸಕ ರಾಜಾ ವೆಂಕಟಪ್ಪ ನಾಯಕ, ಶಾಸಕ ಗುರುಪಾಟೀಲ ಶಿರವಾಳ, ಜಿಪಂ ಉಪಾಧ್ಯಕ್ಷೆ ಚಂದ್ರಕಲಾ ಹೊಸಮನಿ, ಜಿಪಂ ಸಿಇಒ ಡಾ| ಅವಿನಾಶ ಮೆನನ್‌ ರಾಜೇಂದ್ರನ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ಸೇರಿದಂತೆ ಜಿಲ್ಲಾಮಟ್ಟದ
ಅಧಿಕಾರಿಗಳು ಇದ್ದರು.

ಯೋಜನೆಗಳ ಲಾಭ ಫಲಾನುಭವಿಗಳಿಗೆ ತಲುಪಿಸಿ ಎಸ್‌ಸಿಪಿ/ಟಿಎಸ್‌ಪಿ ಯೋಜನೆಗಳ ಅನುದಾನವನ್ನು ಸಮಾಜ
ಕಲ್ಯಾಣ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಲೋಕೊಪಯೋಗಿ ಇಲಾಖೆ ಮುಂತಾದ ಇಲಾಖೆಗಳು ಬಳಸಿಕೊಂಡು ಗುರಿ ಸಾಧಿಸುವ ಮೂಲಕ ನಿಗದಿತ ಸಮಯದಲ್ಲಿ ಫಲಾನುಭವಿಗಳಿಗೆ ಯೋಜನೆಗಳ ಲಾಭ ಸಮರ್ಪಕವಾಗಿ ತಲುಪುವಂತಾಗಬೇಕು.
 ಪ್ರಿಯಾಂಕ್‌ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ

ಜಿಲ್ಲೆಯಲ್ಲಿ 32 ತೊಗರಿ ಕೇಂದ್ರ ಸ್ಥಾಪನೆ ಜಿಲ್ಲೆಯಲ್ಲಿ ರೈತರ ಬೆಳೆದ ತೊಗರಿ ಧಾನ್ಯ ಖರೀದಿಸಲು ಈಗಾಗಲೇ 32 ತೊಗರಿ ಕೇಂದ್ರ ಸ್ಥಾಪಿಸಲಾಗಿದೆ. ಕೇಂದ್ರಗಳಿಗೆ ಖಾಲಿ ಚೀಲಗಳ ಸಮಸ್ಯೆ ಇದ್ದು, ಪ್ರತಿಯೊಂದು ತೊಗರಿ ಕೇಂದ್ರಗಳಿಗೆ 20 ಸಾವಿರ ಖಾಲಿ ಚೀಲಗಳ ರವಾನಿಸಲಾಗಿದೆ. ಬೆಳೆ ದೃಢೀಕರಣ ಪತ್ರ ಪಡೆಯಲು ವಿಳಂಬವಾಗುತ್ತಿದ್ದು, ಇದನ್ನು ಶೀಘ್ರ ಪರಿಹರಿಸಲಾಗುವುದು.
 ಜೆ. ಮಂಜುನಾಥ, ಜಿಲ್ಲಾಧಿಕಾರಿ

ನಕಲು ತಡೆಯಿರಿ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ಈ ಭಾಗದಲ್ಲಿ ಬಹಳಷ್ಟು ನಕಲು ನಡೆಯುತ್ತಿದ್ದು, ಇದನ್ನು ತಡೆಗಟ್ಟಲು ಶಿಕ್ಷಣ ಇಲಾಖೆ ಉಪನಿರ್ದೇಶಕರು ಕ್ರಮ ಕೈಗೊಳ್ಳಬೇಕು. 
ಹರ್ಷಗುಪ್ತಾ, ಪ್ರಾದೇಶಿಕ ಆಯುಕ್ತ 

Advertisement

Udayavani is now on Telegram. Click here to join our channel and stay updated with the latest news.

Next