ಹಾಸನ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯವಿರುವ ಜಮೀನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಂಗಳವಾರ ನಡೆಸಿದ ವಿಡಿಯೋ ಸಂವಾದಲ್ಲಿ ಮಾತನಾಡಿದ ಅವರು ಕೆಪಿಟಿಸಿಎಲ್ ಕಾಮಗಾರಿಗಳಿಗೆ ತುರ್ತಾಗಿ ಸರ್ಕಾರಿ ಜಮೀನು ಗುರುತಿಸಿ ಮಂಜೂರು ಮಾಡಿಕೊಡಬೇಕು. ಪ್ರತಿ ಜಿಲ್ಲೆಯಲ್ಲಿರುವ ವೈದ್ಯಕೀಯ ತ್ಯಾಜ್ಯ ನಿರ್ವಾಹಣಾ ಸಮಿತಿ ರಚಿಸಿ ವ್ಯವಸ್ಥಿತ ವಿಲೇವಾರಿ ಮಾಡಬೇಕು. ಪ್ರತಿ 75 ಕಿ.ಮೀ ವ್ಯಾಪ್ತಿಗೆ ಒಂದರಂತೆ ಇಂತಹ ಘಟಕಗಳನ್ನು ಸ್ಥಾಪಿಸಬೇಕು.
ಅಧಿಕಾರಿಗಳು ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಪೂರಕವಾಗಿ ಸಹಕರಿಸಬೇಕು. ಪ್ರತಿ ಜಿಲ್ಲೆಯಲ್ಲಿ ಯಾವುದಾದರೂ ಕಟ್ಟಡ ನಿರ್ಮಾಣ ಮತ್ತು ಒಡೆಯುವ ಸಂದರ್ಭದಲ್ಲಿ ತ್ಯಾಜ್ಯವನ್ನು ಪುನರ್ ಬಳಕೆ ಮಾಡುವ ಮೂಲಕ ಕೊಳಗೇರಿಗಳ ನಿರ್ಮಾಣವಾಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನದಿಗಳಿಗೆ ಘನ ಹಾಗೂ ದ್ರವ ತ್ಯಾಜ್ಯ ಸೇರದ ಹಾಗೆ ಮುಂಜಾಗ್ರತೆ ವಹಿಸುವ ಯೋಜನೆ ಸಿದ್ಧವಾಗಿದ್ದು, 2021ರೊಳಗೆ ಅದನ್ನು ಅನುಷ್ಠಾನಗೊಳಿಸಬೇಕು. ಎಲ್ಲಾ ನಗರಗಳಲ್ಲಿ ವಾಯುಮಾಲಿನ್ಯ, ಕಾರ್ಖಾನೆಗಳಿಂದ ಬರುವ ಹೊಗೆ ಪ್ರಮಾಣ ಎಷ್ಟಿದೆ ಎಂಬ ಮಾಹಿತಿಯನ್ನು ಸಂಗ್ರಹಿಸಿ ಒದಗಿಸಬೇಕೆಂದು ಹಾಗೂ ಪರಿಸರ ಮಾಲಿನ್ಯ ನಿಯಂತ್ರಿಸಲು ಜಿಲ್ಲಾ ಮಟ್ಟದ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಟಿ.ಎಂ. ವಿಜಯ ಭಾಸ್ಕರ್ ಹೇಳಿದರು.
ವೀಡಿಯೋ ಸಂವಾದದಲ್ಲಿ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ, ಗಣಿ ಮತ್ತು ಭೂ ವಿಜ್ಞಾನ ಇಲಖೆ ಉಪ ನಿರ್ದೇಶಕ ನಾಗರಾಜ್, ಸಹಾಯಕ ಉಪ ಆರಣ್ಯ ಸಂರಕ್ಷಣಾಧಿಕರಿಯಾದ ಜಗದೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಾಗರಾಜ್, ತಹಶೀಾªರ್ ಶಿವಶಂಕರಪ್ಪ ಹಾಗೂ ಸಂತೋಷ್ ಮತ್ತಿತರರು ಹಾಜರಿದ್ದರು.