Advertisement
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಎತ್ತಿನಹೊಳೆ ಯೋಜನೆಯ ಕಾಮಗಾರಿ ಕುರಿತಾದ ಪ್ರಗತಿ ಪರಿಶೀಲನೆ ಸಭೆ ನಡೆಸಿ ಮಾತನಾಡಿದರು. ಗುರುತ್ವಾಕರ್ಷಣೆ ಕಾಲುವೆಯ 92 ಗ್ರಾಮಗಳ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆ, ಭೂ ಪರಿಹಾರ ವಿತರಣೆ ಕಾರ್ಯ ತ್ವರಿತವಾಗಿ ಮುಗಿಸಿ ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸಲು ಸಹಕರಿಸಬೇಕು ಎಂದು ಹೇಳಿದರು.
Related Articles
Advertisement
ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಸ್ವಾಧೀನಪಡಿಸಿಕೊಂಡಿರುವ ಭೂಮಿ ರೈತರಿಗೆ ಪರಿಹಾರ ಹಣ ಪಾವತಿಗೆ ಅಗತ್ಯವಿರುವ ದಾಖಲೆ ನೀಡುವಲ್ಲಿ ವಿಳಂಬವಾಗದಂತೆ ಕ್ರಮ ಕೈಗೊಳ್ಳಿ. ಭೂ ಸ್ವಾಧೀನ ವ್ಯಾಪ್ತಿಗೆ ಒಳಪಡುವ ಮರ ಕಡಿಯಲು ಅರಣ್ಯ ಇಲಾಖೆ ಕಾಲಮಿತಿಯೊಳಗೆ ಪರಿಶೀಲಿಸಿ ತ್ವರಿತವಾಗಿ ಅನುಮತಿ ನೀಡಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಬಸವರಾಜು ಮಾತನಾಡಿ, ಎತ್ತಿನಹೊಳೆ ಯೊಜನೆ ಕಾಮಗಾರಿಗೆ ಅಗತ್ಯವಿರುವ ಮರ ಕಟಾವಿಗೆ ತ್ವರಿತವಾಗಿ ಅನುಮತಿ ನೀಡಲಾಗುವುದು ಹಾಗೂ ಅರಣ್ಯ ಇಲಾಖೆ ವತಿಯಿಂದ ಅಗತ್ಯವಿರುವ ಸಹಕಾರವನ್ನು ವಿಳಂಬವಿಲ್ಲದೆ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಎತ್ತಿನಹೊಳೆ ಯೋಜನೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಆನಂದ್ ಕುಮಾರ್, ಭೂ ದಾಖಲೆಗಳ ಉಪನಿರ್ದೇಶಕಿ ಹೇಮಲತಾ, ಎತ್ತಿನಹೊಳೆ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿ ಕಲ್ಪಶ್ರೀ ಯೋಜನೆ ಕಾಮಗಾರಿ ವಿಳಂಬಕ್ಕೆ ಆಗುತ್ತಿರುವ ಕಾರಣ ಹಾಗೂ ಆಗತ್ಯವಿರುವ ಕ್ರಮಗಳ ಬಗ್ಗೆ ಸಭೆಯಲ್ಲಿ ಪ್ರಸ್ತಾಪಿಸಿದರು.
ಭೂ ಪರಿಹಾರ ನಿಗದಿ ಐತೀರ್ಪು ಪ್ರಕರಣಗಳಲ್ಲಿ ಪರಿಹಾರ ಪಾವತಿಯಾಗದ ಉಳಿದ ಮೊತ್ತವನ್ನು ನ್ಯಾಯಾಲಯದಲ್ಲಿ ಜಮೆ ಮಾಡಿ ಕಾಮಗಾರಿ ಕೈಗೆತ್ತಿಕೊಂಡುಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು. ಪ್ರತಿ ತಿಂಗಳು ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಅಡಚರಣೆ ಯಾಗುತ್ತಿರುವ ಸಮಸ್ಯೆಗಳ ಕುರಿತು ತಾಲೂಕು ಹಂತ ಹಾಗೂ ಜಿಲ್ಲಾ ಹಂತದಲ್ಲಿಯೂ ಸಭೆ ನಡೆಸಬೇಕು.-ಆರ್.ಗಿರೀಶ್, ಜಿಲ್ಲಾಧಿಕಾರಿ