Advertisement

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

12:31 PM Jun 12, 2019 | Team Udayavani |

ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ 75ರ ಅಭಿವೃದ್ಧಿ ಕಾಮಗಾರಿಯನ್ನು ವಿನಾಕಾರಣ ತಡ ಮಾಡಲಾಗುತ್ತಿದ್ದು, ಕೂಡಲೇ ಕಾಮಗಾರಿಯನ್ನು ವೇಗವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಭಜರಂಗದಳ ರಾಜ್ಯ ಸಹ ಸಂಯೋಜಕ ರಘು ಒತ್ತಾಯಿಸಿದರು.

Advertisement

ಪಟ್ಟಣದ ತಾಪಂ ಸಭಾಂಗಣದಲ್ಲಿ ಶಾಸಕ ಎಚ್.ಕೆ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ ನಂತರ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 75ರ ಅಭಿವೃದ್ಧಿ ಕಾಮಗಾರಿ ತಾಲೂಕು ವ್ಯಾಪ್ತಿಯಲ್ಲಿ ಮಂದಗತಿಯಲ್ಲಿ ಸಾಗುತ್ತಿದ್ದು ಇದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು, ಮುಂತಾದ ಧಾರ್ಮಿಕ ಸ್ಥಳಗಳಿಗೆ ಭಕ್ತಾದಿಗಳು ಹೋಗಲು ಅನಾನು ಕೂಲವಾಗಿದೆ. ಹೆದ್ದಾರಿಯಲ್ಲಿ ಅಭಿವೃದ್ಧಿ ಕಾಮಗಾರಿ ಆರಂಭಿಸಿ ಸುಮಾರು 2 ವರ್ಷಗಳಾಗುತ್ತಿದೆ. ಆದರೆ ಕಾಮಗಾರಿ ಕುಂಟುತ್ತಾ ಸಾಗುತ್ತಿದೆ ಎಂದರು.

ಭೂ ಕುಸಿತದಿಂದ ತೊಂದರೆ: ಕಳೆದ ಮಳೆಗಾಲದಲ್ಲಿ ಹೆದ್ದಾರಿಯಲ್ಲಿ ಭೂ ಕುಸಿತ ಉಂಟಾಗಿ ಹಲವು ಕಡೆಗಳಲ್ಲಿ ಅಪಾಯ ಸಂಭವಿಸಿತ್ತು. ಆದರೂ ಸಹ ಯಾವುದೇ ಸುರ ಕ್ಷತಾ ಕ್ರಮಗಳನ್ನು ಅಧಿಕಾರಿಗಳು ಕೈಗೊಂಡಿಲ್ಲ. ಆದ್ದರಿಂದ ಹೆದ್ದಾರಿಯಲ್ಲಿ ಯಾವುದೇ ಅವಘಡಗಳು ಸಂಭವಿಸ ದಂತೆ ರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಲು ಶಾಸಕರು ಕ್ರಮ ಕೈಗೊಳ್ಳಬೇಕು ಎಂದರು.

ಪುರಸಭೆ ಮಳಿಗೆ ಹರಾಜು ಮಾಡಿ: ಪುರಸಭೆಯ ಮಾಜಿ ಅಧ್ಯಕ್ಷರೊಬ್ಬರು ಅನಧಿಕೃತವಾಗಿ ಪುರಸಭೆಯ ಮಳಿಗೆಗಳನ್ನು ತಮಗೆ ಬೇಕಾದವರಿಗೆ ಬಾಡಿಗೆ ನೀಡಿದ್ದು ಇದರಿಂದ ಪುರಸಭೆಗೆ ಬರಬೇಕಾದ ಆದಾಯಕ್ಕೆ ಧಕ್ಕೆ ಉಂಟಾಗಿದೆ. ಕೂಡಲೇ ಈ ಮಳಿಗೆಗಳನ್ನು ಹರಾಜು ಮಾಡುವ ಮೂಲಕ ಪುರಸಭಾ ಆಡಳಿತ ವರ್ಗ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದಲ್ಲಿ ಪುರಸಭೆ ಮುಂಭಾಗ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

ಶಾಸಕರ ಭರವಸೆ: ಮನವಿ ಸ್ವೀಕರಿಸಿದ ಶಾಸಕ ಎಚ್.ಕೆ ಕುಮಾರಸ್ವಾಮಿ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿ ತಡವಾಗಿರುವುದು ನನ್ನ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಕಾಮಗಾರಿಯನ್ನು ವೇಗವಾಗಿ ಮಾಡುವಂತೆ ಸೂಚಿಸಲಾಗುವುದು ಹಾಗೂ ಈ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೂ ಸಹ ತರ ಲಾಗುವುದು ಎಂದರು. ಭಜರಂಗದಳ ಮುಖಂಡರಾದ ಶ್ರೀಜಿತ್‌, ಶ್ರೀಕಾಂತ್‌, ಕೌಶಿಕ್‌, ಆಟೋ ಲೋಕೇಶ್‌, ನಿಖೀಲ್ ಬೆಳಗೋಡು ಮುಂತಾದವರು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next