ಮೈಸೂರು: ದೇವಸ್ಥಾನಗಳಲ್ಲಿ ಜೀರ್ಣೋದ್ಧಾರ ಸೇರಿದಂತೆ ಇನ್ನಿತರ ಕಾಮಗಾರಿಗಳು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದರು. ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ವಾರ್ಷಿಕವಾಗಿ 25 ಲಕ್ಷಕ್ಕಿಂತ ಹೆಚ್ಚು ಆದಾಯ ಗಳಿಸುವ ದೇವಸ್ಥಾನಗಳನ್ನು ಬಿ ದರ್ಜೆಯಿಂದ ಎ ದರ್ಜೆಗೆ ಒಳಪಡಿಸಬೇಕು.
ಈ ನಿಟ್ಟಿನಲ್ಲಿ ತಿ.ನರಸೀಪುರ ತಾಲೂಕು ಮೂಗೂರಿನ ತ್ರಿಪುರ ಸುಂದರಮ್ಮ ದೇವಸ್ಥಾನ ಸೇರಿಸಲು ಅಧಿಕಾರಿಗಳಿಗೆ ಸೂಚಿಸಿದರು. ಮುಜರಾಯಿ ಇಲಾಖೆಗೆ ಒಳಪಟ್ಟ ಪ್ರತಿಯೊಂದು ದೇವಸ್ಥಾನದಲ್ಲಿ ವಂಶಪಾರಂಪರ್ಯವಾಗಿ ಪೂಜೆ ಮಾಡುತ್ತಿರುವ ಅರ್ಚಕರಿಗೆ ಆಗಮಶಾಸOಉ ಕಲಿಯಬೇಕೆಂಬ ಕಡ್ಡಾಯ ನೀತಿ ರದ್ದುಗೊಳಿಸಲು ಚಿಂತಿಸಲಾಗಿದೆ. ಇದರಿಂದ “ಸಿ’ ದರ್ಜೆಗೆ ಒಳಪಡುವ ಸಣ್ಣಪುಟ್ಟ ದೇವಾಲಯದ ಆರ್ಚಕರಿಗೆ ಉಪಯೋಗವಾಗಲಿದೆ ಎಂದು ತಿಳಿಸಿದರು.
ಎಲ್ಲಾ ದೇವಸ್ಥಾನಗಳಿಗೂ ಆಡಳಿತಾಧಿಕಾರಿ: ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ 34 ಸಾವಿರ ಆಸ್ಪತ್ರೆಗಳಿಗೂ ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ. ಆಷಾಢ ಮಾಸದಲ್ಲೂ ಎಲ್ಲಾ ದೇವಸ್ಥಾನಗಳೂ ಕಟ್ಟುನಿಟ್ಟಾಗಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿ ಸಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.
ಪಿಡಿಒ, ಇಒ ಉಸ್ತುವಾರಿ: ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕೆರೆಗಳನ್ನು ಪಂಚಾಯತಿ ಸುಪರ್ದಿಯಲ್ಲಿ ನಿರ್ವಹಣೆ ಮಾಡಬೇಕು. ಇದರ ಮೇಲ್ವಿಚಾರಕ ರಾಗಿ ಪಿಡಿಒ ಹಾಗೂ ಇಒಗಳ ಉಸ್ತುವಾರಿಯಲ್ಲಿ ಕಾರ್ಯನಿರ್ವಹಿಸಬೇಕು. ಇದರಲ್ಲಿ ನಮ್ಮ ಇಲಾಖೆ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಿದರು. ಸಭೆಯಲ್ಲಿ ಶಾಸಕರಾದ ರಾಮದಾಸ್, ನಾಗೇಂದ್ರ, ಹರ್ಷವರ್ಧನ, ಅಶ್ವಿನ್ ಕುಮಾರ್, ಮಂಜುನಾಥ್, ಜಿಲ್ಲಾಧಿಕಾರಿ ಅಭಿರಾಮ್ ಶಂಕರ್, ಜಿಪಂ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ, ಉಪ ವಿಭಾಗಾಧಿಕಾರಿ ಡಾ.ವೆಂಕಟರಾಜು ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮೀನುಗಾರಿಗೂ ಕಿಸಾನ್ ಕಾರ್ಡ್: ಮೀನುಗಾರರಿಗೂ ಮೀನುಗಾರಿಕೆ ಕಿಸಾನ್ ಕಾರ್ಡ್ ನೀಡುವ ಯೋಜನೆ ಶೀಘ್ರದಲ್ಲೇ ಜಾರಿಗೆ ತರಲಾಗುತ್ತದೆ ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಮೀನುಗಾರರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕಾರ್ಡ್ ಪಡೆಯಬಹುದು.
ಕರಾವಳಿ ಕರ್ನಾಟಕ, ಒಳನಾಡು ಸೇರಿದಂತೆ ಒಟ್ಟು ಸುಮಾರು 28 ಸಾವಿರ ಕೆರೆಗಳಿವೆ. ಆ ಕೆರೆಗಳನ್ನು ನಿರ್ವಹಣೆ ಮಾಡಲು ನಿರುದ್ಯೋಗಿಗಳು, ಬಡವರು ನಿರ್ವಹಣೆ ಮಾಡಲು ಮುಂದೆ ಬಂದರೆ ಅವರಿಗೆ ಈ ಕಾರ್ಡ್ ನೀಡಿ ಉತ್ತೇಜನ ನೀಡಲಾಗುತ್ತದೆ. ಮೀನುಗಾರಿಕೆಯಲ್ಲಿ ತೊಡಗಿರುವ ಮಹಿಳೆಯರಿಗೆ ಶೂನ್ಯ ಬಡ್ಡಿ ದರದಲ್ಲಿ 50 ಸಾವಿರ ರೂ.ವರೆಗೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಸಾಲ ನೀಡಲಾಗುತ್ತದೆ ಎಂದು ತಿಳಿಸಿದರು.