Advertisement

ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

06:00 AM Jun 02, 2020 | Team Udayavani |

ಮುಧೋಳ: ಕೋವಿಡ್ ವೈರಸ್‌ ಹಿನ್ನೆಲೆ ಕಾಮಗಾರಿಗೆ ಸ್ವಲ್ಪ ಪ್ರಮಾಣದ ಹಿನ್ನಡೆ ಉಂಟಾಗಿದ್ದು, ಅಧಿಕಾರಿಗಳು ಬಾಕಿ ಉಳಿದ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಗರದ ತಾಪಂ ಕಚೇರಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಪರಿವೀಕ್ಷಣೆ ಮೂಲಕ ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು. ಕೋವಿಡ್ ವೈರಸ್‌ ತಡೆಗೆ ಸರ್ಕಾರ ಕೈಗೊಂಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದರು.

ಕ್ವಾರಂಟೈನ್‌ನಲ್ಲಿ ಇರುವವರಿಗೆ ಯಾವುದಕ್ಕೂ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಅವರಿಗೆ ಎಲ್ಲ ರೀತಿಯ ಸೌಲಭ್ಯ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಕೊರೊನಾ ಹಿನ್ನೆಲೆಯಲ್ಲಿ ವಿವಿಧ ಸಮುದಾಯದವರಿಗಾಗಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಘೋಷಿಸಿರುವ ಯೋಜನೆಗಳನ್ನು ಅರ್ಹರಿಗೆ ತಲುಪಿಸು ಕಾರ್ಯವಾಗಬೇಕು. ಮುಂಗಾರು ಹಂಗಾಮು ಆರಂಭವಾಗಿರುವುದರಿಂದ ರೈತರಿಗೆ ಅವಶ್ಯವಾಗಿರುವ ಬೀಜ, ರಸಗೊಬ್ಬರ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಸ್ವಯಂ ಪ್ರೇರಿತವಾಗಿ ಕಾರ್ಯನಿರ್ವಹಣೆಗೆ ಮುಂದಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮವಹಿಸಬೇಕು ಎಂದರು.

ಈ ವೇಳೆ ಜಿಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ಜಿಪಂ ಸದಸ್ಯ ಭೀಮನಗೌಡ ಪಾಟೀಲ, ತಾಪಂ ಅಧ್ಯಕ್ಷ ತಿಮ್ಮಣ್ಣ ಬಟಕುರ್ಕಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next