Advertisement
ಬಿಬಿಎಂಪಿ ಕೇಂದ್ರ ಕಚೇರಿ ಬಳಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಲ್‌ಗಳು, ಚಿತ್ರಮಂದಿರಗಳ ಪ್ರಾರಂಭ, ಮದುವೆ ಸಮಾರಂಭಗಳಿಗೆ ವಿನಾಯಿತಿ ಕೇಳುವುದು ಸ್ವಾಭಾವಿಕ. ಆದರೆ, ಪಾಲಿಕೆ ವ್ಯಾಪ್ತಿಯಲ್ಲಿ ಮತ್ತಷ್ಟು ಸೇವೆಗಳಿಗೆ ವಿನಾಯಿತಿ ನೀಡುವ ಪ್ರಸ್ತಾಪ ಸದ್ಯಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.
Related Articles
Advertisement
ವೈರಾಣು ರೂಪಾಂತರ ಸ್ವಾಭಾವಿಕ:ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ. ಡೆಲ್ಟಾ ಸೋಂಕಿತ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದು, ಡೆಲ್ಟಾ ಸೋಂಕಿತರನ್ನು ಗುರುತಿಸುವುದಕ್ಕೆ ಪಾಲಿಕೆಯಿಂದ ಕ್ರಮವಹಿಸಲಾಗುತ್ತಿದೆ. ಆದರೆ, ಡೆಲ್ಟಾ, ಡೆಲ್ಟಾ ಪ್ಲಸ್ ಹಾಗೂ ಇನ್ನಿತರ ಹೊಸ ರೂಪಾಂತರ ಸೋಂಕು ಕಂಡುಬರಬಹುದು. ವೈರಸ್‌ನಲ್ಲಿ ಬದಲಾವಣೆ ಮತ್ತು ರೂಪಾಂತರ ಸ್ವಾಭಾವಿಕ ಗುಣ. ಹಿಂದೆಯೂ ರೂಪಾಂತರ ಆಗಿದ್ದು, ಮುಂದೆಯೂ ಆಗಲಿದೆ. ಆದರೆ, ಜನರು ಆತಂಕಕ್ಕೆ ಒಳಗಾಗದೆ ಜಾಗೃತಿವಹಿಸಬೇಕು ಎಂದು ಸಲಹೆ ನೀಡಿದರು. ನಿತ್ಯ ಎಂಟು ಸೋಂಕಿತರ ಪರೀಕ್ಷೆ:
ಕೊರೊನಾ ರೂಪಾಂತರ ಡೆಲ್ಟಾ ಪ್ಲಸ್ ಸೋಂಕಿನ ಅಪಾಯ, ಗುಣಲಕ್ಷಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಅಧ್ಯಯನ ನಡೆಸುತ್ತಿದೆ. ಪಾಲಿಕೆಯಿಂದ ಪ್ರತಿನಿತ್ಯ ಎಂಟು ಮಂದಿ ಸೋಂಕಿತರ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ ಎಂದು ತಿಳಿಸಿದರು.