Advertisement

3 ತಿಂಗಳಲ್ಲಿ ಕಾಮಗಾರಿ ಪೂರ್ಣ: ಜಾರ್ಜ್‌

12:22 PM Mar 22, 2018 | |

ಬೆಂಗಳೂರು: ಶಾಂತಿನಗರ ಬಿಎಂಟಿಸಿ ಬಸ್‌ ಡಿಪೋಗೆ ಮಳೆ ನೀರು ನುಗ್ಗದಂತೆ ಕೈಗೆತ್ತಿಕೊಂಡಿರುವ ಕಾಮಗಾರಿಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಗುತ್ತಿಗೆದಾರರಿಗೆ ಸೂಚಿಸಿದ್ದಾರೆ.

Advertisement

ಬುಧವಾರ ಶಾಂತಿನಗರ ಬಸ್‌ ಡಿಪೋಗೆ ಮಳೆ ನೀರು ತಡೆಗೆ ಸಮಾನಂತರ ನೀರುಗಾಲುವೆ ನಿರ್ಮಾಣ ಹಾಗೂ ಪ್ರವಾಹ ತಡೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಅವರು, ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿಯಲ್ಲಿ 15 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಹಾಗಾಗಿ ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ರಾಜಕಾಲುವೆಗೆ ಸಮನಾಂತರವಾಗಿ 1.1 ಕಿಲೋ ಮೀಟರ್‌ ಉದ್ದದ ಸಮನಾಂತರ ನೀರು ಕಾಲುವೆ ನಿರ್ಮಿಸಲಾಗುತ್ತಿದ್ದು, ಕಾಮಗಾರಿ ಪೂರ್ಣಗೊಂಡರೆ ಬಿಎಂಟಿಸಿ ಬಸ್‌ ಡಿಪೋಗೆ ನೀರು ನುಗ್ಗುವುದು ತಪ್ಪಲಿದೆ. ಇದರಿಂದಾಗಿ ಪ್ರತಿ ವರ್ಷ ಬಿಎಂಟಿಸಿಗೆ ಲಕ್ಷಾಂತರ ರೂ. ನಷ್ಟವಾಗುವುದು ತಪ್ಪಲಿದೆ ಎಂದು ತಿಳಿಸಿದರು. ಮೇಯರ್‌ ಆರ್‌.ಸಂಪತ್‌ರಾಜ್‌, ಶಾಸಕ ಎನ್‌.ಎ.ಹ್ಯಾರೀಸ್‌ ಸೇರಿದಂತೆ ಪ್ರಮುಖರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next