Advertisement
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಾಮಾನ್ಯ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಇಲಾಖೆಗಳು ಪ್ರಸಕ್ತ ಸಾಲಿಗೆ ಮಂಜೂರಾದ ರಸ್ತೆ, ಕಟ್ಟಡ, ಮತ್ತಿತರ ಕಾಮಗಾರಿ ಗಳನ್ನು ಬರುವ 2020ರ ಫೆಬ್ರುವರಿಯೊಳಗೆ ಪೂರ್ಣಗೊಳಿಸಬೇಕು ಎಂದು ಹೇಳಿದರು.
Related Articles
Advertisement
ವಿಸ್ಕೃತ ಚರ್ಚೆ ನಡೆಸಿ: ಉಪಾಧ್ಯಕ್ಷೆ ಮಾತನಾಡಿ, ಅಧಿಕಾರಿಗಳು ಸ್ಥಾಯಿ ಸಮಿತಿ ಸಭೆಗೆ ಸಮಗ್ರ ಮಾಹಿತಿಯೊಂದಿಗೆ ಹಾಜರಾಗಬೇಕು. ಸಾಮಾನ್ಯ ಸಭೆಗಳಲ್ಲಿ ಯಾವುದೇ ವಿಷಯ ವಿವರವಾಗಿ ಚರ್ಚಿಸಿ ನಿರ್ಣಯ ಕೈಗೊಳ್ಳಲು ಕಷ್ಟಕರವಾಗಿರುವುದರಿಂದ ಸ್ಥಾಯಿ ಸಮಿತಿ ರಚಿಸಲಾಗಿದೆ. ಸಂಬಂಧಿಸಿದ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸ್ಥಾಯಿಸ ಸಮಿತಿಗಳ ಸಭೆಗೆ ಹಾಜರಾಗಬೇಕೆಂದರಲ್ಲದೆ, ಜಿಲ್ಲಾ ಪಂಚಾಯತಿ ಸಾಮಾನ್ಯ ಸಭೆಗೆ ಕಡತ ಮಂಡಿಸುವ ಮುನ್ನ ಸ್ಥಾಯಿ ಸಮಿತಿಗಳಲ್ಲಿ ಮಂಡಿಸಿ ವಿಸ್ಕೃತ ಚರ್ಚೆ ನಡೆಸಿ, ಅನುಮೋದನೆ ಪಡೆದರೆ, ಸಾಮಾನ್ಯ ಸಭೆಯಲ್ಲಿ ಸುಲಭವಾಗಿ ಒಪ್ಪಿಗೆ ಪಡೆಯಬಹುದು ಎಂದು ತಿಳಿಸಿದರು.
ಶೌಚಗೃಹದ ವ್ಯವಸ್ಥೆಯಿಲ್ಲ: ಸಮಿತಿ ಸದಸ್ಯ ತಮ್ಮಯ್ಯ ಮಾತನಾಡಿ, ಜಿಲ್ಲೆಯ ಬಹುತೇಕ ಸರ್ಕಾರಿ ಶಾಲೆ ಗಳಲ್ಲಿ ಶೌಚಗೃಹ ಇಲ್ಲದಿರುವ ಬಗ್ಗೆ ಸಾಕಷ್ಟು ದೂರುಗಳು ಸಾರ್ವಜನಿಕರಿಂದ ಬರುತ್ತಿವೆ. ಕೆಲವು ಕಡೆಗಳಲ್ಲಿ ಶಾಲೆ ಶಿಥಿಲಗೊಂಡು ಮರದ ಕೆಳಗೆ, ದೇವಾಲಯದಲ್ಲಿ ಶಾಲೆ ನಡೆಸಲಾಗುತ್ತಿದೆ. ಪುರವರ ಹೋಬಳಿಯಲ್ಲಿರುವ 5 ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಗೃಹದ ವ್ಯವಸ್ಥೆಯಿಲ್ಲ. ವಿದ್ಯಾರ್ಥಿಗಳು ಬಯಲು ಶೌಚಕ್ಕೆ ಹೋಗುತ್ತಿರುವ ಪರಿಸ್ಥಿತಿಯಿದ್ದು, ಕೂಡಲೇ ಕ್ರಮಕೈಗೊಳ್ಳಬೇಕೆಂದು ತಿಳಿಸಿದರು.
ಸ್ವಚ್ಛ ಭಾರತ್ ಅಭಿಯಾನದಲ್ಲಿ ಸಾಕಷ್ಟು ಅನುದಾನ ವಿದ್ದು, ಅದನ್ನು ಬಳಸಿ ಶೌಚಗೃಹ ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ ಉಪನಿರ್ದೇಶಕರಿಗೆ ಶಾರದಾ ನರಸಿಂಹಮೂರ್ತಿ ಸಲಹೆ ನೀಡಿದರು.
ವಿಕಲಚೇತನರು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಲು ಅನುವಾಗುವಂತೆ ಎಲ್ಲ ಸರ್ಕಾರಿ ಕಚೇರಿ ಗಳಲ್ಲಿ ರ್‍ಯಾಂಪ್, ಲಿಫ್ಟ್ ವ್ಯವಸ್ಥೆ ಕಲ್ಪಿಸುವ ಮೂಲಕ ವಿಕಲಚೇತನಸ್ನೇಹಿ ಕಚೇರಿಗಳನ್ನಾಗಿಸಬೇಕು. ವಿಕಲ ಚೇತನರಿಗೆ ಮೀಸಲಿರಿಸುವ ಅನುದಾನ ರದ್ದಾಗದಂತೆ ಕ್ರಮವಹಿಸಬೇಕು ಎಂದು ತಿಳಿಸಿದರು. ಅಧಿಕಾರಿಗಳು ಯಾವುದೇ ಸರ್ಕಾರಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸುವ ಸಂದರ್ಭ ಸ್ಥಳೀಯ ಜನಪ್ರತಿ ನಿಧಿಗಳನ್ನು ಆಹ್ವಾನಿಸಿ ಶಿಷ್ಠಾಚಾರ ಪಾಲಿಸಬೇಕಲ್ಲದೆ ಕಾಮಗಾರಿ ಕೈಗೊಳ್ಳುವ ಬಗ್ಗೆ ಗಮನಕ್ಕೆ ತರಬೇಕೆಂದರು.
ಸಾಮಾನ್ಯ ಸ್ಥಾಯಿ ಸಮಿತಿ ಸದಸ್ಯರಾದ ಶಿವಮ್ಮ ಡಾ.ನಾಗರಾಜು, ರೇಣುಕ, ಭಾರತಿ, ಭಾಗ್ಯಮ್ಮ, ಅಂಬುಜ ಎಸ್.ಆರ್.ಗೌಡ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.