Advertisement

ಕಾಲ ಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ

03:05 PM Aug 24, 2020 | Suhan S |

ಗದಗ: ನಗರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದ ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು, ಕಾಲ ಮಿತಿಯೊಳಗೆ ಗುಣಮಟ್ಟದಿಂದ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ನೀಡಿದರು.

Advertisement

ನಗರಸಭೆಯಿಂದ ನಡೆಯುತ್ತಿರುವ ರಸ್ತೆ ದುರಸ್ತಿ, ಕುಡಿಯುವ ನೀರು, ರಸ್ತೆ ನಿರ್ಮಾಣ, ಒಳಚರಂಡಿ ಕಾಮಗಾರಿ, ಪ್ರಮುಖ ವೃತ್ತಗಳ ನಿರ್ಮಾಣ ಕಾಮಗಾರಿಗಳನ್ನು ವೀಕ್ಷಿಸಿ, ಕಾಮಗಾರಿಗಳು ಅತ್ಯಂತ ಗುಣಮಟ್ಟ ಹಾಗೂ ಕಾಲಮಿತಿಯೊಳಗೆ ಕೈಗೊಳ್ಳಬೇಕು. ಪ್ರತಿ ವಾರಕ್ಕೊಮ್ಮೆ ಕಾಮಗಾರಿಗಳ ಪ್ರಗತಿ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ನಿಧಾನಗತಿ ಕಾಮಗಾರಿ ಬಗ್ಗೆ ಇರುವ ತೊಂದರೆ ಶೀಘ್ರ ಪರಿಹರಿಸಿಕೊಂಡು ಕಾಮಗಾರಿ ಮುಕ್ತಾಯಗೊಳಿಸುವಂತೆ ಸೂಚನೆ ನೀಡಿದರು.

ಮುಳುಗುಂದ ಕೆರೆ ಒತ್ತುವರಿ ತೆರವು ಸ್ಥಳಕ್ಕೆ ಭೇಟಿ ನೀಡಿದ ಅವರು, ಕೆರೆ ಒತ್ತುವರಿ ಕುರಿತಂತೆ ಸುಪ್ರಿಂ ಕೋರ್ಟ್‌, ಲೋಕಾಯುಕ್ತ ಹಾಗೂ ಹಸಿರು ನ್ಯಾಯಾ ಧೀಕರಣ ನೀಡಿರುವ ನಿರ್ದೇಶನದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಜಿಲ್ಲೆಯಲ್ಲಿ ಆಗಿರುವ ಕೆರೆ ಒತ್ತುವರಿಗಳನ್ನು ಸೆಪ್ಟೆಂಬರ್‌ ಅಂತ್ಯದೊಳಗೆ ತೆರವು ಕಾರ್ಯ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು. ಬಳಿಕ ಮುಳಗುಂದದಲ್ಲಿ ಆರಂಭಿಸಲಾಗುತ್ತಿರುವ 100 ಹಾಸಿಗೆಗಳ ಕೋವಿಡ್‌ ಕೇರ್‌ ಸೆಂಟರ್‌ಗೆ ಭೇಟಿ ನೀಡಿ, ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಸೌಲಭ್ಯಗಳ ಕೊರತೆ ಆಗದಂತೆ ಎಚ್ಚರಿಕೆ ವಹಿಸಬೇಕು. ಕೋವಿಡ್‌ ಸೋಂಕುನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನುಪಾಲಿಸಬೇಕು. ಆದಷ್ಟು ಸಾರ್ವಜನಿಕರಿಗೆ ಸೋಂಕು ಹರಡುವುದನ್ನು ತಡೆಯಲು ಪಾಲಿಸಬೇಕಾದ ಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕು. ನಿಯಮಗಳ ಉಲ್ಲಂಘನೆಯಾದರೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಎಸ್‌.ಎನ್‌. ರುದ್ರೇಶ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next