Advertisement
ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಸಭೆ ಯಲ್ಲಿ ಮಾತನಾಡಿ, ವಿಶೇಷ ಗಿರಿಜನ ಉಪಯೋಜನೆ ಯಡಿ ಕಾಮಗಾರಿಗಳನ್ನು ಕೈಗೆತ್ತಿಗೊಳ್ಳಲು ಸಹಕಾರ ಸಿಗದೇ ಇದ್ದಲ್ಲಿ, ಸುಮೋಟೋ ಅಧಿಕಾರವನ್ನು ಬಳಸಿಕೊಂಡು ಕಾಮಗಾರಿ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು, ವಿಶೇಷ ಗಿರಿಜನ ಯೋಜನೆಯಲ್ಲಿ ಇರುವ ಅನುದಾನವನ್ನು ಬಳಕೆ ಮಾಡಲು ವಿಫಲವಾದರೆ ಕ್ರಿಮಿನಲ್ ಮೊಕದ್ದಮೆ ಹಾಗೂ ಇಲಾಖೆ ವಿಚಾರಣೆ ನಡೆಸಲು ಅವಕಾಶವಿದೆ. ಮಾರ್ಚ್ ಅಂತ್ಯಕ್ಕೆ ಕೆಲಸ ಮಾಡುವುದನ್ನು ಬಿಟ್ಟು ಪ್ರಗತಿ ಸಾಧಿಸಲು ಕೆಲಸ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
Related Articles
Advertisement
ಆರೋಪ: ಜಿಪಂ ಸದಸ್ಯ ವೈ.ಎಚ್.ಹುಚ್ಚಯ್ಯ ಮಾತ ನಾಡಿ, ತುಮಕೂರು ಜಿಲ್ಲೆಯಲ್ಲಿ ಕಾಡುಕುರುಬ, ಬೇಡ ಜಂಗಮ ಜಾತಿಗಳೇ ಇಲ್ಲ ಆದರೂ ಜಾತಿ ಪ್ರಮಾಣಪತ್ರವನ್ನು ವಿತರಿಸಲಾಗುತ್ತಿದ್ದು, ಅಧಿಕಾರಿ ಗಳು ಈ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳಬೇಕು, ಪ್ರಬಲ ವ್ಯಕ್ತಿಗಳು ಸೌಲಭ್ಯವನ್ನು ಪಡೆದುಕೊಳ್ಳಲು ಇಂತಹ ಪ್ರಮಾಣ ಪತ್ರವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಕಳೆದ 5 ವರ್ಷಗಳ ಹಿಂದೆ ಕೊರೆದಿರುವ ಕೊಳವೆ ಬಾವಿಗಳಿಗೆ ಇದುವರೆಗೂ ವಿದ್ಯುತ್ ಸಂಪರ್ಕವನ್ನು ಕಲ್ಪಿಸದ ಸಣ್ಣನೀರಾವರಿ ಹಾಗೂ ಬೆಸ್ಕಾಂ ಅಧಿಕಾರಿ ಗಳನ್ನು ತರಾಟೆಗೆ ತೆಗೆದುಕೊಂಡ ವೈ.ಎಚ್. ಹುಚ್ಚಯ್ಯ, 5 ವರ್ಷದಿಂದ ಕೊರೆದ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕವನ್ನು ಕಲ್ಪಿಸದೇ ಇದರೆ ಅಧಿಕಾರಿಗಳು ಏನು ಕೆಲಸ ಮಾಡು ತ್ತಿದ್ದಾರೆ ಎನ್ನುವುದೇ ಅರ್ಥವಾಗುತ್ತಿಲ್ಲ ಎಂದರು.
ಪ್ರಕರಣ ದಾಖಲಿಸಬೇಕು: ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ 2017-18ನೇ ಸಾಲಿನಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಗೆ ಆಯ್ಕೆಗೊಂಡ ಫಲಾನುಭವಿಗಳಿಗೆ ಕೊಳವೆಬಾವಿ ಕೊರೆಸಲು ಇನ್ನು ಸಾಧ್ಯವಾಗಿಲ್ಲ, ಅಧಿಕಾರಿಗಳು ಶಾಸಕರು ಅಡ್ಡಿ ಪಡಿಸುತ್ತಿದ್ದಾರೆ ಎಂದು ಹೇಳುತ್ತಾರೆ. ಡೀಸಿ, ಜಿಪಂ ಸಿಇಒ ಹೇಳಿದರು. ಕೊಳವೆಬಾವಿ ಕೊರೆಸಿಲ್ಲ, ಸರ್ಕಾರದ ಕೆಲಸಕ್ಕೆ ಅಡ್ಡಿ ಪಡಿಸುತ್ತಿರುವ ಶಾಸಕ ಗೌರಿಶಂಕರ್ ಮೇಲೆ ಐಪಿಸಿ 553ರಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ತಿಳಿಸಿದರು.
ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ವಿರುದ್ಧ ವಾಗಿರುವ ಶಾಸಕ ಡಿ.ಸಿ.ಗೌರಿಶಂಕರ್ ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸುತ್ತಿದ್ದಾರೆ, ಸರ್ಕಾರಿ ಯೋಜನೆ ಅನುಷ್ಠಾನಕ್ಕೆ ಅಡ್ಡಿಪಡಿಸುವವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ನಡವಳಿ ಬರೆಯಬೇಕು ಎಂದು ಒತ್ತಾಯಿಸಿದರು.