Advertisement

ಸಮ್ಮಿಶ್ರ ಸರ್ಕಾರಕ್ಕೆ ಸಮನ್ವಯ ಸಮಿತಿ ರಚನೆ

06:05 AM May 20, 2018 | |

ಬೆಂಗಳೂರು: “ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಸುಗಮವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಲು ಸಮನ್ವಯ ಸಮಿತಿ ರಚಿಸಲಾಗುವುದು’ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಶನಿವಾರ ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಆಹ್ವಾನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರ ಸುಭದ್ರವಾಗಿರುವಂತೆ ನೋಡಿಕೊಳ್ಳುವುದರೊಂದಿಗೆ ಅವಧಿ ಪೂರ್ಣಗೊಳಿಸಲು ಮತ್ತು ಯಾವ ರೀತಿ ಕಾರ್ಯವೈಖರಿ ಇರಬೇಕು ಎಂಬುದನ್ನು ಈ ಸಮನ್ವಯ ಸಮಿತಿ ತೀರ್ಮಾನಿಸಲಿದೆ. ಕಾಂಗ್ರೆಸ್‌ ನಾಯಕರೊಂದಿಗೆ ಚರ್ಚಿಸಿ ಸಮನ್ವಯ ಸಮಿತಿ ರಚಿಸಲಾಗುವುದು ಎಂದು ಹೇಳಿದರು.

ಮೂಲಗಳ ಪ್ರಕಾರ ಈ ಸಮನ್ವಯ ಸಮಿತಿಗೆ ಸಿದ್ದರಾಮಯ್ಯ ಅಧ್ಯಕ್ಷರಾಗಿರಲಿದ್ದಾರೆ.ಜೆಡಿಎಸ್‌-ಕಾಂಗ್ರೆಸ್‌ ಸರ್ಕಾರ ರಚನೆಯಾದ ಮೇಲೂ ಬಿಜೆಪಿ ಆಪರೇಷನ್  ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಅಥವಾ ವಿಶ್ವಾಸಮತ ಸಾಬೀತುಪಡಿಸ ದಂತೆ ಅಡ್ಡಿಪಡಿಸಲು ಪ್ರಯತ್ನಿಸಲಿದೆ.ಆದರೆ, ಅವರ ಆಟ ನಡೆಯುವುದಿಲ್ಲ.ನಮಗೆ ಬಿಜೆಪಿ ಬಳಸುವ ಐಟಿ, ಇಡಿ ಅಸOಉಗಳ ಬಗ್ಗೆ ಯಾವುದೇ ಭಯವಿಲ್ಲ. ಅದಕ್ಕೆಲ್ಲ ಹೇಗೆ ಅಂತ್ಯ ಕಾಣಿಸಬೇಕು ಎಂಬುದು ಗೊತ್ತಿದೆ ಎಂದರು.

ಪ್ರಮಾಣವಚನ ಸ್ವೀಕಾರಕ್ಕೆ ಆಹ್ವಾನ: ಬುಧವಾರ ನಡೆಯುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಪ್ರಾದೇಶಿಕ ಪಕ್ಷಗಳ ಪ್ರಮುಖರನ್ನು ಆಹ್ವಾನಿಸಲಾಗುತ್ತದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರರಾವ್‌, ಬಿಎಸ್‌ಪಿ ಅಧಿನಾಯಕಿ ಮಾಯಾವತಿ,ಅಖೀಲೇಶ್‌ ಯಾದವ್‌ ಅವರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.

ಬುಧವಾರ ಪ್ರಮಾಣವಚನ: ಸೋಮವಾರ ರಾಜೀವ್‌ ಗಾಂಧಿ ಪುಣ್ಯತಿಥಿ ಇರುವುದರಿಂದ ಕಾಂಗ್ರೆಸ್‌ ನಾಯಕರು
ಲಭ್ಯರಿರುವುದಿಲ್ಲ. ಹೀಗಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಲು ಕುಮಾರಸ್ವಾಮಿ ತೀರ್ಮಾನಿಸಿದ್ದಾರೆ. ಎಚ್‌ಡಿಕೆ ಜೊತೆ ಎರಡು ಪಕ್ಷಗಳ ಕೆಲವು ಶಾಸಕರು ಪ್ರತಿಜ್ಞಾ ವಿಧಿ ಸ್ವೀಕರಿಸಲಿದ್ದಾರೆ.

Advertisement

ಇಂದು ಸೋನಿಯಾ ಭೇಟಿ ಮಾಡಲಿರುವ ಎಚ್‌ಡಿಕೆ
ಬುಧವಾರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ
ಭಾನುವಾರ ದೆಹಲಿಗೆ ತೆರಳಿ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ಬರುವ ಮುನ್ಸೂಚನೆ ಸಿಗುತ್ತಿದ್ದಂತೆ ಸೋನಿಯಾ ಗಾಂಧಿ ಅವರು ಜೆಡಿಎಸ್‌
ವರಿಷ್ಠ ಎಚ್‌.ಡಿ.ದೇವೇಗೌಡರನ್ನು ಸಂಪರ್ಕಿಸಿ ಸಮ್ಮಿಶ್ರ ಸರ್ಕಾರ ರಚಿಸುವ ಬಗ್ಗೆ ಪ್ರಸ್ತಾಪಿಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ರಚಿಸಲು ಜೆಡಿಎಸ್‌ಗೆ ಬೆಂಬಲ ನೀಡಿದ್ದಕ್ಕೆ ಅಭಿನಂದನೆ ಸಲ್ಲಿಸುವ ಸಲುವಾಗಿ ಸೋನಿಯಾ ಗಾಂಧಿ ಅವರನ್ನು ಕುಮಾರಸ್ವಾಮಿ ಭೇಟಿ ಮಾಡಿ ಜತೆಗೆ ಪ್ರಮಾಣ ವಚನಕ್ಕೆ ಆಹ್ವಾನ ನೀಡಲಿದ್ದಾರೆ.ಇದೇ ವೇಳೆ ರಾಹುಲ್‌ ಗಾಂಧಿ ಅವರೊಂದಿಗೂ ಚರ್ಚಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಡಿಸಿಎಂ ಸ್ಥಾನಕ್ಕೆ ಕಾಂಗ್ರೆಸ್‌ನಲ್ಲಿ ಲಿಂಗಾಯತರ ಪೈಪೋಟಿ 
ಬೆಂಗಳೂರು:
ವಿಧಾನಸಭೆಯಲ್ಲಿ ಯಡಿಯೂರಪ್ಪ ಬಹುಮತ ಸಾಬೀತು ಪಡಿಸಲು ವಿಫ‌ಲವಾದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಉಪ ಮುಖ್ಯಮಂತ್ರಿ ಸ್ಥಾನದ ಬೇಡಿಕೆ ಹೆಚ್ಚಾಗುತ್ತಿದೆ. ದಲಿತ, ಲಿಂಗಾಯತ ಹಾಗೂ ಅಲ್ಪ ಸಂಖ್ಯಾತ ಸಮುದಾಯದ ಮುಖಂಡರು ತಮ್ಮ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಪಕ್ಷದ ನಾಯಕರ ಮೇಲೆ ಒತ್ತಡ ಹೇರಲು ಆರಂಭಿಸಿದ್ದಾರೆ. ಪಕ್ಷದ ಮೂಲಗಳ ಪ್ರಕಾರ ದಲಿತ ಸಮುದಾಯದವರಿಗೆ ಉಪ ಮುಖ್ಯಮಂತ್ರಿ ಸ್ಥಾನ ದೊರೆಯುತ್ತದೆಂಬ ಚರ್ಚೆ ನಡೆಯುತ್ತಿದ್ದು, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌ ಅವರಿಗೆ ಉಪ ಮುಖ್ಯಮಂತ್ರಿ ಮಾಡಲಾಗುತ್ತದೆ ಎಂಬ ಮಾತು ಕೇಳಿ ಬರುತ್ತಿದೆ.

ಇದರ ಜತೆಗೆ ಲಿಂಗಾಯತ ಸಮುದಾಯದವರಿಗೂ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂಬ ಬೇಡಿಕೆ ಕೇಳಿ ಬರುತ್ತಿದೆ. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿರುವುದರಿಂದ ಲಿಂಗಾಯತ ಸಮುದಾಯ ಮುನಿಸಿಕೊಳ್ಳುವುದನ್ನು ತಪ್ಪಿಸಲು ಹಾಗೂ ಕಾಂಗ್ರೆಸ್‌ ಲಿಂಗಾಯತರ ವಿರೋಧಿ ಎನ್ನುವುದನ್ನು ತಪ್ಪಿಸಲು
ವೀರಶೈವ ಲಿಂಗಾಯತ ಸಮುದಾಯದ ಹಿರಿಯ ನಾಯಕರಾಗಿರುವ ಶಾಮನೂರು ಶಿವಶಂಕರಪ್ಪ ಅಥವಾ ಎಂ.ಬಿ. ಪಾಟೀಲರಿಗೆ ಡಿಸಿಎಂ ಸ್ಥಾನ ನೀಡಬೇಕೆಂದು ವೀರಶೈವ ಲಿಂಗಾಯತ ಮಹಾಸಭೆ ಆಗ್ರಹಿಸಿದೆ. ಈ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ಗೆ ಮನವಿ ಸಲ್ಲಿಸಲು ಅಖೀಲ ಭಾರತ ವೀರಶೈವ ಮಹಾಸಭೆ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next