Advertisement

ಪಿಪಿಪಿ ಮಾದರಿಯಲ್ಲಿ ಜಿಲ್ಲಾಸ್ಪತ್ರೆಗಳಿಗೆ ವೈದ್ಯಕೀಯ ಕಾಲೇಜು ಸಂಯೋಜನೆ

09:46 PM Feb 01, 2020 | Team Udayavani |

ಗುಣಮಟ್ಟದ ವೈದ್ಯಕೀಯ ಸೇವೆಯ ಜತೆಗೆ ಅರ್ಹ ವೈದ್ಯರನ್ನು ಪಡೆಯುವ ಉದ್ದೇಶದಿಂದ ಈಗಾಗಲೇ ಅಸ್ತಿತ್ವದಲ್ಲಿ ಇರುವ ಜಿಲ್ಲಾ ಆಸ್ಪತ್ರೆಗಳಿಗೆ ಸಾರ್ವಜನಿಕ, ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜನ್ನು ಸಂಯೋಜಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

Advertisement

ವೈದ್ಯಕೀಯ ಸೇವೆಯನ್ನು ಇನ್ನಷ್ಟು ಉನ್ನತೀಕರಿಸುವ ಉದ್ದೇಶದಿಂದ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯಕೀಯ ಕಾಲೇಜುಗಳನ್ನು ಸಂಯೋಜಿಸುವ ಹೊಸ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಸಿದ್ಧಪಡಿಸಿದ್ದು, ಇದನ್ನು ಸಾರ್ವಜನಿಕ, ಖಾಸಗಿ ಸಹಭಾಗಿತ್ವದಲ್ಲಿ ಸಾಕಾರಗೊಳಿಸಲು ಉದ್ದೇಶಿಸಿದೆ.

ರಾಜ್ಯ ಸರ್ಕಾರಗಳು ಸೌಲಭ್ಯದ ಜತೆಗೆ ಲಭ್ಯವಿರುವ ಭೂಮಿಯನ್ನು ನೀಡುವ ಮೂಲಕ ಇದನ್ನು ಸಾಕಾರ ಮಾಡಬಹುದಾಗಿದೆ. ಹಾಗೆಯೇ ಕೇಂದ್ರ ಸರ್ಕಾರವು ದೊಡ್ಡ ಪ್ರಮಾಣದ ಆಸ್ಪತ್ರೆಗಳಲ್ಲಿ ವೈದ್ಯರಿಗೆ ರಾಷ್ಟ್ರೀಯ ಪರೀಕ್ಷಾ ಮಂಡಳಿ ಮೂಲಕ ಡಿಎನ್‌ಬಿ ಅಥವಾ ಎಫ್ಎನ್‌ಬಿ ಕೋರ್ಸ್‌ಗಳನ್ನು ಆಸ್ಪತ್ರೆಯಲ್ಲೇ ವಾಸವಿದ್ದು, ಪಡೆಯುವ ವ್ಯವಸ್ಥೆಗೆ ಉತ್ತೇಜನ ನೀಡಲಿದೆ.

ಹಾಗೆಯೇ ವಿದೇಶದಲ್ಲಿ ವೈದ್ಯಕೀಯ ಶಿಕ್ಷಕರು, ದಾದಿಯರು, ಅರೆವೈದ್ಯಕೀಯ ಸಿಬ್ಬಂದಿಯ ಸೇವೆಗೆ ಹೆಚ್ಚಿನ ಬೇಡಿಕೆಯಿದೆ. ಈ ಸಿಬ್ಬಂದಿ ವರ್ಗಕ್ಕೆ ವಿಶೇಷ ತರಬೇತಿ ಮತ್ತು ವೃತ್ತಿ ಕೌಶಲ್ಯ ನೀಡುವ ಮೂಲಕ ವಿದೇಶಿ ಭಾಷೆಗಳಿಗೆ ಅನುಗುಣವಾಗಿ ಸೇವೆ ಒದಗಿಸಲು ಬೇಕಾದ ವ್ಯವಸ್ಥೆ ಮಾಡಲು ಸರ್ಕಾರ ಮುಂದಾಗಿದೆ ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next