Advertisement

ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

01:17 PM May 27, 2022 | Team Udayavani |

ಮೂಡಿಗೆರೆ: ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಕೃಷಿ ಹಾಗೂ ಸಂಬಂಧಿಸಿದ ಇಲಾಖೆಗಳು, ಕೃಷಿಕ ಸಮಾಜ, ಕೆವಿಕೆ ಮೂಡಿಗೆರೆ ಇವರ ಸಹಯೋಗದೊಂದಿಗೆ ಶುಕ್ರವಾರ ನಡೆದ ಅಭಿಯಾನ ಕಾರ್ಯಕ್ರಮಕ್ಕೆ ಶಾಸಕ ಎಂ ಪಿ ಕುಮಾರಸ್ವಾಮಿ ಚಾಲನೆ ನೀಡಿದರು.

Advertisement

ಬಳಿಕ ಮಾತನಾಡಿದ ಅವರು, ಈಗಲೇ ಮುಂಗಾರು ಪ್ರಾರಂಭವಾಗಿದ್ದು, ಕೃಷಿ ಚಟುವಟಿಕೆ ನಡೆಸಲು ರೈತರಿಗೆ ವರದಾನವಾಗಿದೆ. ರೈತರು ಕೃಷಿ ಇಲಾಖೆ ಹಾಗೂ ತಜ್ಞರ ಸಲಹೆ ಪಡೆದು ಉತ್ತಮ ಬೆಲೆ ಬೆಳೆದು ಆರ್ಥಿಕವಾಗಿ ಸಬಲರಾಗಬೇಕು ಹಾಗೂ ಕೃಷಿ ಅಭಿಯಾನದಡಿ ಮಾಹಿತಿಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಕೆಲಸವನ್ನು ಮಾಡಲಾಗುತ್ತಿದೆ. ಇದನ್ನು ಪ್ರತಿಯೊಬ್ಬ ರೈತರು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ತಾಲೂಕು ಕೃಷಿಕ ಸಮಾಜದ ಗೌರವ ಕಾರ್ಯದರ್ಶಿ ಪಿ. ಕೆ. ನಾಗೇಶ್, ಉಪ ಕೃಷಿ ನಿರ್ದೇಶಕರಾದ ಕೆ ಎಸ್ ಮೋಹನದಾಸ್, ತಾಲೂಕು ಸಹಾಯಕ ಕೃಷಿ ನಿರ್ದೇಶಕರಾದ ಸುಮಾ ಹೆಚ್ ಎನ್, ಹರ್ಷಕುಮಾರ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ಶ್ರೀ ಜಯದೇವ ತೋಟಗಾರಿಕೆ ಸಹಾಯಕ ನಿರ್ದೇಶಕರು, ಅಕ್ಷಯ್ ತೋಟಗಾರಿಕೆ ಇಲಾಖೆ, ಶಿವಯ್ಯ ಮೀನುಗಾರಿಕೆ ಇಲಾಖೆ ಕೃಷಿ ಅಧಿಕಾರಿಗಳಾದ ಗೀತ, ವೆಂಕಟೇಶ್ ಪುಟ್ಟಸ್ವಾಮಿ ಹಾಗೂ ಸಿಬ್ಬಂದಿಗಳಾದ ಶೈಲಜಾ, ಶ್ವೇತಾ, ರಂಜಿತಾ ಹಾಗೂ ಅನನ್ಯ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next