Advertisement

ಸಮಗ್ರ ಕೃಷಿ ಮಾಹಿತಿ ಶಿಬಿರ; ಪೌಷ್ಠಿಕ ಕೈತೋಟ ನಿರ್ಮಾಣಕ್ಕೆ ಆದ್ಯತೆ ನೀಡಿ:ಹೇಮಂತ ಕುಮಾರ್‌

05:43 PM Oct 05, 2021 | Team Udayavani |

ಶಿರ್ವ: ಮಹಿಳೆಯರು ಮತ್ತು ಮಕ್ಕಳಲ್ಲಿ ಅಪೌಷ್ಠಿಕತೆ ನಿರ್ಮೂಲನೆ ಮಾಡಲು ಪೋಷಣ್‌ ಅಭಿಯಾನದ ಮೂಲಕ ಸರಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಲಾಗುತ್ತಿದೆ.ಸರಕಾರದ ಸವಲತ್ತುಗಳನ್ನು ಬಳಸಿಕೊಂಡು ಉದ್ಯೋಗ ಖಾತ್ರಿ ಯೋಜನೆಯಲ್ಲಿ ಉದ್ಯೋಗ ಚೀಟಿ ಮಾಡಿಸಿಕೊಂಡು ಪೌಷ್ಠಿಕ ಆಹಾರದ ಕೈತೋಟ ನಿರ್ಮಾಣಕ್ಕೆ ಆದ್ಯತೆ ನೀಡಿ ಸೊಪ್ಪು ತರಕಾರಿಗಳನ್ನು ಹೆಚ್ಚು ಬೆಳೆಸಿ ಎಂದು ಉಡುಪಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಹೇಮಂತ್‌ ಕುಮಾರ್‌ ಹೇಳಿದರು.

Advertisement

ಅವರು ಅ. 5 ರಂದು ಪಡುಬೆಳ್ಳೆ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣದಲ್ಲಿ ಶಿಕ್ಷಕ ರಕ್ಷಕ ಸಂಘದ ವತಿಯಿಂದ ಶಾಲೆಯ ಮಕ್ಕಳ ಹೆತ್ತವರು ಕೃಷಿ ಮಾಡಿ ಆರ್ಥಿಕವಾಗಿ ಸಬಲರಾಗುವ ನಿಟ್ಟಿನಲ್ಲಿ ನಡೆದ ಸಮಗ್ರ ಕೃಷಿ ಮಾಹಿತಿ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಪ್ರಶಸ್ತಿ ಪುರಸðತ ಪ್ರಗತಿಪರ ಕೃಷಿಕ ಎಸ್‌.ಕೆ. ಸಾಲ್ಯಾನ್‌ ಬೆಳ್ಮಣ್‌ ಮಾತನಾಡಿ ಮಾನವ ಸಂಪನ್ಮೂಲ ಬಳಸಿ ಸಾವಯವ ಕೃಷಿ ನಡೆಸುವ ಮೂಲಕ ಆರೋಗ್ಯಪೂರ್ಣ ಸೊಪ್ಪು ತರಕಾರಿ ಬೆಳೆಸಬೇಕೆಂದು ಸಲಹೆ ನೀಡಿದರು.ಶಾಲಾಡಳಿತ ಮಂಡಳಿಯ ಸದಸ್ಯರಾದ ಬೆಳ್ಳೆ ಶಿವಾಜಿ ಎಸ್‌.ಸುವರ್ಣ ಮತ್ತು ರಾಮಚಂದ್ರ ಕಿದಿಯೂರು ವೇದಿಕೆಯಲ್ಲಿದ್ದರು. ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಸ್ಮಿತಾ ಪೈ ಕಾರ್ಯಕ್ರಮದ  ಅಧ್ಯಕ್ಷತೆ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿ ಮಾಜಿ ಜಿ.ಪಂ. ಅಧ್ಯಕ್ಷ ಕಟಪಾಡಿ ಶಂಕರ ಪೂಜಾರಿ ಇಸ್ರೇಲ್‌ ಮಾದರಿ ಕೃಷಿ ಮತ್ತು ಕೃಷಿ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ ಸೀಮಿತ ಜಾಗದಲ್ಲಿ ಕಡಿಮೆ ಖರ್ಚಿನಲ್ಲಿ ಅಧಿಕ ಇಳುವರಿ ತೆಗೆಯುವ ಕೃಷಿಗೆ ಇಸ್ರೇಲ್‌ ಜಗತ್ತಿಗೇ ಮಾದರಿಯಾಗಿದೆ ಎಂದು ತಿಳಿಸಿ ಪ್ರಾಥಮಿಕ ಪತ್ತಿನ ಸಹಕಾರಿ ಸಂಘಗಳಲ್ಲಿ ಕೃಷಿ ಮತ್ತು ಹೈನುಗಾರಿಕೆಗೆ ಸಿಗುವ ನಿಬಡ್ಡಿ ಮತ್ತು ಕಡಿಮೆ ಬಡ್ಡಿಯ ಸಾಲ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಪ್ರಶಸ್ತಿ ಪುರಸðತ ಕೃಷಿಕ ಕಲ್ಲೊಟ್ಟು ರಾಘವೇಂದ್ರ ನಾಯಕ್‌ ಭತ್ತ,ತರಕಾರಿ,ಕರಿಮೆಣಸು,ಮಲ್ಲಿಗೆ,ತೆಂಗು ಮತ್ತು ಅಡಿಕೆ ಮತ್ತು ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಶರಾವತಿ ರಾವ್‌ ಬೆಳಪು ಅಣಬೆ ಕೃಷಿ ಹಾಗೂ ಇತರ ಸೊÌàದ್ಯೋಗದ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಹೆತ್ತವರು, ಶಿಕ್ಷಕ,ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Advertisement

ಶಾಲೆಯ ಮುಖ್ಯ ಶಿಕ್ಷಕ ಜಿನರಾಜ್‌ ಸಿ. ಸಾಲಿಯಾನ್‌ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಶಿಕ್ಷಕಿ ಅನಸೂಯ ಶೆಟ್ಟಿ,ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಭವಾನಿ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next