Advertisement
ತ್ವರಿತಗತಿಯಲ್ಲಿ ಸಾರ್ವಜನಿಕ ಸೇವೆಗೆ ಸರ್ಕಾರಿ ನೌಕರರು, ಅಧಿಕಾರಿಗಳು ಒಗ್ಗಿಕೊಳ್ಳುವ ನಿಟ್ಟಿನಲ್ಲಿ ಇ-ಆಡಳಿತಕ್ಕೆ ಒತ್ತು ಕೊಡುತ್ತಿರುವ ರಾಜ್ಯ ಸರ್ಕಾರ ಇದೀಗ ಸರ್ಕಾರಿ ಸೇವೆ ಸೇರಿ ಕಂಪ್ಯೂಟರ್ ಕಲಿಯದ ಸುಮಾರು 2ಲಕ್ಷಕ್ಕೂ ಅಧಿಕ ಸರ್ಕಾರಿ ಅಧಿಕಾರಿಗಳಿಗೆ, ನೌಕರರು, ವಿವಿಧ ನಿಗಮ ಮಂಡಳಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಸೂಚನೆಯನ್ನು ಪಾಲಿಸಲೇಬೇಕಾಗಿದೆ.
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳದಿರುವ ಅಧಿಕಾರಿ, ನೌಕರರುಗಳು https://clt.karnataka.gov.in ಹಾಗೂ ನಿಗಮ ಮಂಡಳಿಗಳ ನೌಕರರು https://mnkclt.clt.karnataka.gov.in ವೆಬ್‌ಸೈಟ್‌ನಲ್ಲಿ ತಮ್ಮ ವಿವರಗಳನ್ನು ನೋಂದಾಯಿಸಿ ಪರೀಕ್ಷೆಯನ್ನು ತೆಗೆದುಕೊಳ್ಳುವಂತೆ ಕೋರಲಾಗಿದೆ. ಅಲ್ಲದೇ ಆಯಾ ಜಿಲ್ಲಾ ಹಾಗೂ ತಾಲೂಕು ಮಟ್ಟದ ಇಲಾಖೆಯ ಅಧಿಕಾರಿಗಳು ತಮ್ಮ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳುವಂತೆ ಮಾಹಿತಿ ನೀಡುವಂತೆ ಯೋಜನಾ ನಿರ್ದೇಶಕರು ಸೂಚಿಸಿದ್ದಾರೆ.
Related Articles
2023ರ ಡಿಸೆಂಬರ್ 31 ರೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ, ಹಾಗೂ ವಾರ್ಷಿಕ ವೇತನ ಬಡ್ತಿ ಮತ್ತಿತರ ಭತ್ಯಗಳನ್ನು ಪಡೆಯಲು ಅರ್ನಹರಾಗಿರುತ್ತಾರೆ. ಆದ್ದರಿಂದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೇ ಇರುವ ಸರ್ಕಾರಿ ನೌಕರರು ಕೂಡಲೇ ಪರೀಕ್ಷೆ ತೆರೆದುಕೊಂಡು ಉತ್ತೀರ್ಣರಾಗಬೇಕೆಂದು ರಾಜ್ಯ ಸರ್ಕಾರದ ಇ-ಆಡಳಿತ ಕೇಂದ್ರದ ಸಾಮರ್ಥ್ಯ ಸಂಘಟನೆಯ ಯೋಜನಾ ನಿರ್ದೇಶಕರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
Advertisement
ಕಾಗತಿ ನಾಗರಾಜಪ್ಪ