Advertisement
ಸಿವಿಲ್, ಮೆಕ್ಯಾನಿಕಲ್ ಕೋರ್ಸ್‌ಗಳಿಗೆ ಇದ್ದ ಟ್ರೆಂಡ್ ಇತ್ತೀಚೆಗಿನ ದಿನಗಳಲ್ಲಿ ಕಡಿಮೆಯಾಗುತ್ತಿದೆ. ತಂತ್ರಜ್ಞಾನ ಆಧಾರಿತ ಕಂಪ್ಯೂಟರ್ ಸೈನ್ಸ್ ಕೋರ್ಸ್‌ಗೆ ಹೆಚ್ಚಿನ ಒಲವು ವ್ಯಕ್ತವಾಗಿದೆ.
Related Articles
Advertisement
ಕಂಪ್ಯೂಟರ್ ಸೈನ್ಸೇ ಏಕೆ?ಇತ್ತೀಚೆಗಿನ ವರ್ಷಗಳಲ್ಲಿ ಆಧುನಿಕ ತಂತ್ರಜ್ಞಾನ ಆಧಾರಿತ ಕೋರ್ಸ್‌ಗಳಲ್ಲಿ ಹೆಚ್ಚಿನ ಉದ್ಯೋಗ ಸೃಷ್ಟಿಯಾಗುತ್ತಿವೆ. ವಿದೇಶಿ ಕಂಪೆನಿಗಳಲ್ಲಿಯೂ ಈ ಕೋರ್ಸ್ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳಿಗೇ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಆದ್ದರಿಂದ ಕಂಪ್ಯೂಟರ್ ಸೈನ್ಸ್ ಆಯ್ಕೆ ಮಾಡಿಕೊಂಡಿದ್ದೇನೆ ಎಂದು ಮೊದಲ ಸುತ್ತಿನಲ್ಲಿ ಸೀಟು ಆಯ್ಕೆ ಮಾಡಿಕೊಂಡ ಅಭ್ಯರ್ಥಿ ಶಶಾಂಕ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಕನಿಷ್ಠ ಒಂದು ದಶಕ ಇದೇ ಹವಾ
ಕೇವಲ ಈ ವರ್ಷ ಮಾತ್ರವಲ್ಲ, ಕನಿಷ್ಠ ಮುಂದಿನ ಹತ್ತು ವರ್ಷ ಕಂಪ್ಯೂಟರ್ ಸೈನ್ಸ್ ಟ್ರೆಂಡ್ ಮುಂದುವರಿಯಲಿದೆ. ದಿನದಿಂದ ದಿನಕ್ಕೆ ತಂತ್ರಜ್ಞಾನ ಶರವೇಗದಲ್ಲಿ ಮುಂದುವರಿಯುತ್ತಿದೆ. ಕಾಲೇಜು ಕ್ಯಾಂಪಸ್‌ಗಳಲ್ಲಿಯೇ ಪ್ಲೇಸ್‌ಮೆಂಟ್ ಸಿಗುತ್ತಿರುವುದ ರಿಂದ ವಿದ್ಯಾರ್ಥಿಗಳು ಕೂಡ ಆಸಕ್ತರಾಗಿದ್ದಾರೆ ಎನ್ನುತ್ತಾರೆ ಪಿಇಎಸ್ ವಿಶ್ವವಿದ್ಯಾನಿಲಯ ಕುಲಾಧಿಪತಿ ಪ್ರೊ| ಎಂ.ಆರ್. ದೊರೆಸ್ವಾಮಿ. ಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆಯಲ್ಲಿ ಹೆಚ್ಚಿನವರು ಕಂಪ್ಯೂಟರ್ ಸೈನ್ಸ್ ಕೋರ್ಸ್ ಅನ್ನು ಆಯ್ಕೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳ ಎರಡನೇ ಆಯ್ಕೆಯಾಗಿ ಸಿವಿಲ್ ಎಂಜಿನಿಯರಿಂಗ್ ಕೋರ್ಸ್ ಹೊರಹೊಮ್ಮಿದೆ.
– ರಮ್ಯಾ, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ – ಎನ್.ಎಲ್. ಶಿವಮಾದು